ಸಿಎಂ ಸಿದ್ದರಾಮಯ್ಯ ಇಂದು ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಭೇಟಿ

ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಸವಲತ್ತು ವಿತರಣೆ
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು/ಮಂಡ್ಯ: ಸಿಎಂ ಸಿದ್ದರಾಮಯ್ಯ ಇಂದು ಭಾನುವಾರ ಮಂಡ್ಯ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.

ಮಳವಳ್ಳಿಯ ಶಾಂತಿಕಾಲೇಜು ಮುಂಭಾಗ ಇಂದು ಆಯೋಜಿಸಿರುವ ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇದಕ್ಕೂ ಮುನ್ನ ತಾಲ್ಲೂಕಿನ ಮಂಚನಹಳ್ಳಿಯಲ್ಲಿ ನಿರ್ಮಿಸಿರುವ ಭಕ್ತ ಶ್ರೀ ಕನಕದಾಸರ ಪುತ್ಥಳಿ ಹಾಗೂ ಎರಡು ಸಹಕಾರ ಸಂಘಗಳನ್ನು ಉದ್ಘಾಟಿಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿಗಳಿಂದ ಆಶಾ ಕಿರಣ ಯೋಜನೆಗೆ ನಾಳೆ ಚಾಲನೆ

ಪಟ್ಟಣದಲ್ಲಿ ಸಾರ್ವಜನಿಕ ಕನಕದಾಸ ಕುರುಬ ಸಮಾಜದ ವಿದ್ಯಾರ್ಥಿ ನಿಲಯ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಚೆಲುವರಾಯಸ್ವಾಮಿ, ಹೆಚ್ ಸಿ ಮಹದೇವಪ್ಪ, ಕೃಷ್ಣ ಭೈರೇಗೌಡ, ಸತೀಶ್ ಜಾರಕಿಹೊಳಿ, ಕೆ ಜೆ ಜಾರ್ಜ್, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ಬಿ ಎಸ್ ಸುರೇಶ್, ರಹೀಂ ಖಾನ್ ಮೊದಲಾದವರು ಭಾಗವಹಿಸಲಿದ್ದಾರೆ.

ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ದೊಡ್ಡ ವೇದಿಕೆ ಸಿದ್ದವಾಗಿದ್ದು ಸುಮಾರು 50 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com