ಮುಸ್ಲಿಮರ ಕೆಲಸ ಮಾಡಲ್ಲ ಎಂದ ಯತ್ನಾಳ್ ಗೆ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಅನುದಾನ ಏಕೆ ಬೇಕು?: ಸಚಿವ ಜಮೀರ್ ಅಹಮದ್

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಣವನ್ನು ಏಕೆ ಮಂಜೂರು ಮಾಡಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಅವರು ಪ್ರಶ್ನಿಸಿದ್ದಾರೆ.
ಜಮೀರ್ ಅಹಮದ್ ಖಾನ್
ಜಮೀರ್ ಅಹಮದ್ ಖಾನ್
Updated on

ಬೆಂಗಳೂರು: ಮುಸ್ಲಿಮರ ಬಗ್ಗೆ ಕೆಟ್ಟದಾಗಿ ಮಾತನಾಡುವ, ಬುರ್ಖಾ ಹಾಕಿದವರು ನನ್ನ ಬಳಿ ಕೆಲಸ ಕಾರ್ಯಕ್ಕೆ ಬರಬೇಡಿ. ಮುಸ್ಲಿಮರ ಕೆಲಸ ಮಾಡಲ್ಲ ಎಂದು ಹೇಳಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಣವನ್ನು ಏಕೆ ಮಂಜೂರು ಮಾಡಬೇಕು ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಸೋಮವಾರ ಪ್ರಶ್ನಿಸಿದ್ದಾರೆ.

ಇಂದು ವಿಧಾನಸಭೆಯಲ್ಲಿ ಜಮೀರ್ ಅಹಮದ್ ಖಾನ್ ಅವರು ಹೇಳಿಕೆ ತೀವ್ರ ಕೋಲಾಹಲಕ್ಕೆ ಕಾರಣವಾಯಿತು. ಇದು ತಾರತಮ್ಯ ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸರ್ಕಾರದ ಹಣವನ್ನು ತಡೆಹಿಡಿಯಲಾಗಿದೆ ಎಂದು ಬಿಜೆಪಿ ಶಾಸಕರು ಆರೋಪಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರೂ ಆದ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರು ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಬಿಡುಗಡೆ ಮಾಡಿರುವ ಅನುದಾನದ ಬಗ್ಗೆ ವಸತಿ ಸಚಿವರನ್ನು ಪ್ರಶ್ನಿಸಿದರು.

ಜಮೀರ್ ಅಹಮದ್ ಖಾನ್
ವಕ್ಫ್ ಆಸ್ತಿಗಳ ಒತ್ತುವರಿ: ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಅಹಮದ್ ಖಾನ್ ಗಡುವು 

ರಾಜ್ಯದಲ್ಲಿ ಭೀಕರ ಬರಗಾಲವಿದ್ದು, ರೈತರು ಪರಿಹಾರಕ್ಕಾಗಿ ಕಾಯುತ್ತಿರುವಾಗ ಅಲ್ಪಸಂಖ್ಯಾತರಿಗೆ ಸರ್ಕಾರ 1000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ವಿಜಯೇಂದ್ರ ಆರೋಪಿಸಿದರು.

ಇದಕ್ಕೆ ಉತ್ತರಿಸಿದ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಹೊಂದಿರುವ ಖಾನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ. ಆದರೆ 1,000 ಕೋಟಿ ರೂ.ಗಳ ಕ್ರಿಯಾ ಯೋಜನೆಯನ್ನು ಮೂರು ವರ್ಷಗಳವರೆಗೆ ವಿಸ್ತರಿಸಿದ್ದಾರೆ ಎಂದರು.

ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 250 ಕೋಟಿ ಅನುದಾನ ಮೀಸಲಿಟ್ಟಿದ್ದು, ಪಂಚಾಯಿತಿ ಅಭಿವೃದ್ಧಿ ಯೋಜನೆಯಡಿ ಹೆಚ್ಚುವರಿಯಾಗಿ 50 ಕೋಟಿ ಮೀಸಲಿಡಲಾಗಿದೆ ಎಂದರು.

ಎಲ್ಲಾ ಸೇರಿ ಕೇವಲ 300 ಕೋಟಿ ರೂಪಾಯಿ. ಆದರೆ ಬಿಡುಗಡೆ ಮಾಡಿದ್ದು 165 ಕೋಟಿ ಮಾತ್ರ. 3.71 ಲಕ್ಷ ಕೋಟಿ ಬಜೆಟ್‌ನಲ್ಲಿ ಶೇಕಡ ಒಂದರಷ್ಟನ್ನೂ ಅಲ್ಪಸಂಖ್ಯಾತರಿಗೆ ನೀಡಿಲ್ಲ ಎಂದು ಖಾನ್ ವಿವರಿಸಿದರು.

ಅಲ್ಪಸಂಖ್ಯಾತರ ಕಾಲೋನಿಗಳನ್ನು ಜನಸಂಖ್ಯೆಯ ಆಧಾರದ ಮೇಲೆ ಎ, ಬಿ ಮತ್ತು ಸಿ ವರ್ಗಗಳಾಗಿ ಸರ್ಕಾರ ಮಾಡಿದೆ ಎಂದು ಸಚಿವರು ಹೇಳಿದರು.

ಈ ವೇಳೆ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯಪುರ ಕ್ಷೇತ್ರದಲ್ಲಿ 1.2 ಲಕ್ಷ ಮುಸ್ಲಿಮರಿದ್ದರೂ ಹಣ ಬಿಡುಗಡೆ ಮಾಡಿಲ್ಲ ಎಂದರು.

ನಿಮಗೆ ಅನುದಾನ ನೀಡಬೇಕೇ? ನಿಮಗೆ ಅನುದಾನ ಏಕೆ ಬೇಕೇ? ಶಾಸಕರಾದ ನಂತರ ನೀವು ಬುರ್ಖಾ ಧರಿಸಿದ ಮಹಿಳೆಯರು ಮತ್ತು ಗಡ್ಡ ಬಿಟ್ಟವರು ನನ್ನ ಹತ್ತಿರ ಬರಬಾರದು ಎಂದು ಹೇಳಿದ್ದೀರಿ ಎಂದು ಜಮೀರ್ ಅಹಮದ್ ಖಾನ್ ತಿರುಗೇಟು ನೀಡಿದರು.

ಮುಸ್ಲಿಮರಿಗಾಗಿ ನೀವೂ ಏನನ್ನೂ ಮಾಡುವುದಿಲ್ಲ. ನಿಮಗೆ ಅನುದಾನ ನೀಡುವುದು ಹೇಗೆ? ಎಂದು ಸಚಿವರಾಗಿದ್ದ ಅವರು ಹೀಗೆ ಹೇಳಬಾರದಿತ್ತು ಎಂದು ಬಿಜೆಪಿ ಶಾಸಕರು ಹೇಳಿದರು.

ರಾಜಕೀಯ ಪ್ರಶ್ನೆಗಳಿಗೆ ವಿಧಾನಸಭೆಯ ಹೊರಗೆ ರಾಜಕೀಯ ರೀತಿಯಲ್ಲಿ ಉತ್ತರಿಸಬೇಕು. ಸದನದೊಳಗೆ ಈ ರೀತಿ ಉತ್ತರಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಮೀರ್ ಅಹಮದ್ ಖಾನ್ ಅವರಿಗೆ ಸಲಹೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com