ಬೆಂಗಳೂರು: ಶಾಲಾ ಬಾಲಕಿಗೆ ಕಿರುಕುಳ ನೀಡಿದ ಯುವಕ ಜೈಲಿಗೆ!

ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಹೈಕೋರ್ಟ್ ಮೂರು ವರ್ಷ ಜೈಲು ಶಿಕ್ಷೆ ಮತ್ತು 10,000 ರೂಪಾಯಿ ದಂಡ ವಿಧಿಸಿದೆ. ಆರೋಪಿಗಳನ್ನು ಖುಲಾಸೆಗೊಳಿಸಿದ ಕೆಳ ನ್ಯಾಯಾಲಯದ ತೀರ್ಪನ್ನೂ ಉನ್ನತ ನ್ಯಾಯಾಲಯ ರದ್ದುಗೊಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಹೈಕೋರ್ಟ್ ಮೂರು ವರ್ಷ ಜೈಲು ಶಿಕ್ಷೆ ಮತ್ತು 10,000 ರೂಪಾಯಿ ದಂಡ ವಿಧಿಸಿದೆ. ಆರೋಪಿಗಳನ್ನು ಖುಲಾಸೆಗೊಳಿಸಿದ ಕೆಳ ನ್ಯಾಯಾಲಯದ ತೀರ್ಪನ್ನೂ ಉನ್ನತ ನ್ಯಾಯಾಲಯ ರದ್ದುಗೊಳಿಸಿದೆ. ಪ್ರಾಸಿಕ್ಯೂಷನ್‌ನ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ಪರಿಗಣಿಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ್ ಅವರಿದ್ದ ವಿಭಾಗೀಯ ಪೀಠ ಇತ್ತೀಚೆಗೆ ಈ ಆದೇಶ ನೀಡಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2014ರ ಅಕ್ಟೋಬರ್ 26ರಂದು ಈ ಘಟನೆ ನಡೆದಿತ್ತು.

ಸಾಂದರ್ಭಿಕ ಚಿತ್ರ
ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಕಡಿವಾಣ ಹಾಕಲು BMRCL ಮುಂದು: ಅಸಭ್ಯ ವರ್ತನೆ ಮಾಡಿದವರಿಗೆ 10,000 ರೂ. ದಂಡ!

ಅಪರಾಧ ಎಸಗಿದಾಗ ಆರೋಪಿಗೆ 18 ವರ್ಷ ವಯಸ್ಸಾಗಿತ್ತು ಮತ್ತು ಪ್ರಸ್ತುತ ಆತನಿಗೆ 28 ವರ್ಷ. ಅಪರಾಧಿಗಳ ಪರಿವೀಕ್ಷಣಾ ಕಾಯ್ದೆಯಡಿ ಪ್ರಯೋಜನ ನೀಡಿ ಅವರನ್ನು ಬಿಡುಗಡೆ ಮಾಡಬೇಕೆಂಬ ಮನವಿಯನ್ನು ನ್ಯಾಯಾಲಯ ನಿರಾಕರಿಸಿತು. ಜೂನ್ 20, 2012 ರಂದು ಪೋಕ್ಸೋ ಕಾಯ್ದೆ ಜಾರಿಯಾಗಿರುವುದಾಗಿ ಹೇಳಿದ ನ್ಯಾಯಾಲಯ, ಅಪರಾಧಿಗಳ ಪರಿವೀಕ್ಷಣಾ ಕಾಯ್ದೆಯ ಪ್ರಯೋಜನವನ್ನು ಆರೋಪಿಗಳಿಗೆ ವಿಸ್ತರಿಸಲಾಗುವುದಿಲ್ಲ ಎಂದು ಹೇಳಿತು.

ಕಾಫಿ ಎಸ್ಟೇಟ್‌ನಲ್ಲಿ ಕಾರ್ಮಿಕನಾಗಿದ್ದ ಆರೋಪಿ, ಸಂತ್ರಸ್ತೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಬಲವಂತವಾಗಿ ಹಿಡಿದು ಸಾರ್ವಜನಿಕ ಶೌಚಾಲಯಕ್ಕೆ ಎಳೆದೊಯ್ದು, ಮುತ್ತು ಕೊಟ್ಟೆ ಎಂದು ಹೇಳಿದ್ದ. ಸಂತ್ರಸ್ತೆ ಹೇಗೋ ಆರೋಪಿಯ ಹಿಡಿತದಿಂದ ತಪ್ಪಿಸಿಕೊಂಡು ತನ್ನ ಮನೆ ತಲುಪಿದ್ದಳು.ಈ ಸಂಬಂಧ ಸಂತ್ರಸ್ತೆಯ ತಂದೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಚಿಕ್ಕಮಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ತಂದೆ-ತಾಯಿಯ ಹೇಳಿಕೆ ವ್ಯತಿರಿಕ್ತವಾಗಿದೆ. ಸಂತ್ರಸ್ತೆಯ ಸಾಕ್ಷ್ಯಗಳು ವಿಶ್ವಾಸಾರ್ಹವಲ್ಲ ಎಂದು ಹೇಳಿ, ಆರೋಪಿಯನ್ನು ಖುಲಾಸೆಗೊಳಿಸಿತ್ತು.

ಆದರೆ, ಪೊಲೀಸರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಕೆ. ಪಿ. ಯಶೋಧಾ, ಸಂತ್ರಸ್ತೆ ಆಕೆಯ ಪೋಷಕರು ಮತ್ತು ಇತರರು ನೀಡಿದ ಸಾಕ್ಷ್ಯದಿಂದ ಅಪರಾಧ ಸಾಬೀತಾಗಿದೆ ಎಂದು ವಾದಿಸಿದರು. ತನ್ನ ಮೇಲಿನ ಲೈಂಗಿಕ ಕಿರುಕುಳದ ಕುರಿತು ನ್ಯಾಯಾಲಯದ ಮುಂದೆ ಸಂತ್ರಸ್ತೆ ನೀಡಿದ ಹೇಳಿಕೆಯನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ಅವರು ಸಮರ್ಥಿಸಿಕೊಂಡರು.ಸಂತ್ರಸ್ತೆಯ ಸಹಾಯಕ್ಕೆ ಯಾರೂ ಬಾರದ ಕಾರಣ, ಲೈಂಗಿಕ ಕಿರುಕುಳದ ಘಟನೆಯನ್ನು ತಳ್ಳಿಹಾಕುವಂತಿಲ್ಲ ಎಂದು ನ್ಯಾಯ ಪೀಠ ಹೇಳಿದೆ. ಘಟನೆ ನಡೆದ ಸುತ್ತಮುತ್ತ ಯಾವುದೇ ಮನೆಗಳು ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com