ಹಾವು
ಹಾವು

ಹಾವು ಕಡಿತ ಅಧಿಸೂಚಿತ ಕಾಯಿಲೆ ಪಟ್ಟಿಗೆ ಸೇರಿಸಿದ ರಾಜ್ಯ ಸರ್ಕಾರ

ಕರ್ನಾಟಕ ಸರ್ಕಾರ, ಸಮಗ್ರ ಆರೋಗ್ಯ ಮಾಹಿತಿ ವೇದಿಕೆಯಲ್ಲಿನ ಎಲ್ಲಾ ಆರೋಗ್ಯ ಸೌಲಭ್ಯಗಳಲ್ಲಿ ಹಾವು ಕಡಿತವನ್ನು ರಾಜ್ಯದಲ್ಲಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಿದೆ.
Published on

ಬೆಂಗಳೂರು: ಕರ್ನಾಟಕ ಸರ್ಕಾರ, ಸಮಗ್ರ ಆರೋಗ್ಯ ಮಾಹಿತಿ ವೇದಿಕೆಯಲ್ಲಿನ ಎಲ್ಲಾ ಆರೋಗ್ಯ ಸೌಲಭ್ಯಗಳಲ್ಲಿ ಹಾವು ಕಡಿತವನ್ನು ರಾಜ್ಯದಲ್ಲಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಿದೆ.

ಫೆಬ್ರವರಿ 12 ರಂದು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಎಲ್ಲಾ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಸಂಸ್ಥೆಗಳು ಹಾವು ಕಡಿತದ ಎಲ್ಲ ಪ್ರಕರಣಗಳನ್ನು ಅಂದರೆ ಒಳರೋಗಿಗಳು, ಹೊರರೋಗಿಗಳು ಮತ್ತು ಸಾವಿನ ಪ್ರಕರಣಗಳೇ ಆಗಿರಲಿ ಸಮಗ್ರ ಆರೋಗ್ಯ ಮಾಹಿತಿ ವೇದಿಕೆಯಲ್ಲಿ ನೋಂದಾಯಿಸಬೇಕು ಎಂದು ನಿರ್ದೇಶಿಸಿದೆ.

ಇದರರ್ಥ ರಾಜ್ಯದಲ್ಲಿ ಯಾವುದೇ ಹಾವು ಕಡಿತ ಪ್ರಕರಣವನ್ನು ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾದರೆ, ಅದರ ವಿವರವನ್ನು ರಾಜ್ಯ ಸರ್ಕಾರದ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ ದಾಖಲೆ ಕಡತಕ್ಕೆ ವರದಿ ಮಾಡಬೇಕು. ಕರ್ನಾಟಕದಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಹಾವು
ತುಮಕೂರು: ಹಾವು ಕಚ್ಚಿದ್ದು ಅರಿವಿಗೆ ಬಾರದೆ ವೈದ್ಯ ವಿದ್ಯಾರ್ಥಿ ಸಾವು; ಘಟಿಕೋತ್ಸವದ ಬಳಿಕ ಹೃದಯ ವಿದ್ರಾವಕ ಘಟನೆ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವರದಿ ಮತ್ತು ಮಾಹಿತಿಯ ಪ್ರಕಾರ, 2023 ರಲ್ಲಿ (ಜನವರಿ ಮತ್ತು ಅಕ್ಟೋಬರ್ ನಡುವೆ) ರಾಜ್ಯದಲ್ಲಿ 5,316 ಹಾವು ಕಡಿತಗಳು ದಾಖಲಾಗಿವೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಕ್ರಮವನ್ನು ಸ್ವಾಗತಿಸಿದ ಹ್ಯೂಮನ್ ಸೊಸೈಟಿ ಇಂಟರ್‌ನ್ಯಾಶನಲ್(ಎಚ್‌ಎಸ್‌ಐ) ಇಂಡಿಯಾ, ಹಾವು ಕಡಿತದ ಹೊರೆಯನ್ನು ಕಡಿಮೆ ಮಾಡಲು ಸರ್ಕಾರದ ಕಣ್ಗಾವಲು ಕ್ರಮಗಳನ್ನು ಶ್ಲಾಘಿಸಿದೆ. ಹಾವು ಕಡಿತವನ್ನು ಅಧಿಸೂಚಿತ ರೋಗವೆಂದು ಘೋಷಿಸಿದ ಭಾರತದ ಮೊದಲ ರಾಜ್ಯ ಎಂಬ ಕೀರ್ತಿಗೂ ಕರ್ನಾಟಕ ಭಾಜನವಾಗಿದೆ ಎಂದು ಅದು ಮೆಚ್ಚುಗೆ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com