ಫೆಬ್ರವರಿಯಲ್ಲೇ ನೀರಿನ ಅಭಾವ: ಟ್ಯಾಂಕರ್ ಗಳಲ್ಲಿ ನೀರು ಸರಬರಾಜು ಮಾಡಲು BWSSB ಸಜ್ಜು!

ಅಕಾಲಿಕ ಮಳೆ, ಅಂತರ್ಜಲ ಮಟ್ಟ ಕುಸಿತ ಸೇರಿದಂತೆ ನಾನಾ ಕಾರಣಗಳಿಂದ ಬೆಂಗಳೂರಿನಲ್ಲಿ ಫೆಬ್ರುವರಿಯಲ್ಲಿಯೇ ನೀರಿನ ಸಮಸ್ಯೆ ಎದುರಾಗಿದೆ. ಬೊಮ್ಮನಹಳ್ಳಿ ಮತ್ತು ಮಹದೇವಪುರದ ಕೆಲವು ಭಾಗಗಳಲ್ಲಿ ಬೋರ್‌ವೆಲ್‌ಗಳು ಬತ್ತಿ ಹೋಗಿರುವುದರಿಂದ ನೀರಿನ ಕೊರತೆ ಎದುರಾಗಿದೆ.
ವಾಟರ್ ಟ್ಯಾಂಕರ್ ನಲ್ಲಿ ನೀರು ಸರಬರಾಜು
ವಾಟರ್ ಟ್ಯಾಂಕರ್ ನಲ್ಲಿ ನೀರು ಸರಬರಾಜು
Updated on

ಬೆಂಗಳೂರು: ಅಕಾಲಿಕ ಮಳೆ, ಅಂತರ್ಜಲ ಮಟ್ಟ ಕುಸಿತ ಸೇರಿದಂತೆ ನಾನಾ ಕಾರಣಗಳಿಂದ ಬೆಂಗಳೂರಿನಲ್ಲಿ ಫೆಬ್ರುವರಿಯಲ್ಲಿಯೇ ನೀರಿನ ಸಮಸ್ಯೆ ಎದುರಾಗಿದೆ. ನೀರಿನ ಅಭಾವ ಇರುವ ಕಾರಣ ಬೆಂಗಳೂರಿನ ಬಹುತೇಕ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ.

ಬೊಮ್ಮನಹಳ್ಳಿ ಮತ್ತು ಮಹದೇವಪುರದ ಕೆಲವು ಭಾಗಗಳಲ್ಲಿ ಬೋರ್‌ವೆಲ್‌ಗಳು ಬತ್ತಿ ಹೋಗಿರುವುದರಿಂದ ನೀರಿನ ಕೊರತೆ ಎದುರಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಅಧಿಕಾರಿಗಳು ನಗರದ ಸುತ್ತಮುತ್ತ ಒಣಗಿರುವ ಪ್ರದೇಶಗಳಿಗೆ ನೀರು ಸರಬರಾಜು ಮಾಡಲು 86 ಟ್ಯಾಂಕರ್‌ಗಳೊಂದಿಗೆ ಸಿದ್ಧವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮಿತಿಯ ಅಡಿಯಲ್ಲಿ ಬರುವ BWSSB ಯಿಂದ ಸೂಚಿಸಲಾದ 110 ಹಳ್ಳಿಗಳಲ್ಲಿ 51 ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗುತ್ತದೆ.

ಕೆಆರ್‌ಎಸ್ ಮತ್ತು ಕಬಿನಿ ಅಣೆಕಟ್ಟುಗಳಲ್ಲಿ ಜೂನ್‌ವರೆಗೆ ನಗರದ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸುವಷ್ಟು ನೀರಿದೆ. ಬೆಂಗಳೂರಿಗೆ ಪ್ರತಿ ತಿಂಗಳು 1.6 ಟಿಎಂಸಿ ಅಡಿ ಕುಡಿಯುವ ನೀರಿನ ಅಗತ್ಯವಿದೆ. BWSSB ತನ್ನ ವ್ಯಾಪ್ತಿಗೆ ಒಳಪಡುವ ಎಲ್ಲಾ ನಿವಾಸಿಗಳಿಗೆ, ವಿಶೇಷವಾಗಿ BBMP ಮಿತಿಯಲ್ಲಿರುವ 51 ಹಳ್ಳಿಗಳಿಗೆ ಕಾವೇರಿ ನೀರಿನ ಪೂರೈಕೆ ಮಾಡಲಾಗುತ್ತದೆ. ಸಮಸ್ಯೆಗಳಿದ್ದರೆ ಟ್ಯಾಂಕರ್‌ಗಳನ್ನು ಬಳಸಿಕೊಳ್ಳಲಾಗುವುದು ಎಂದು ಹೇಳಲಾಗಿದೆ.

ವಾಟರ್ ಟ್ಯಾಂಕರ್ ನಲ್ಲಿ ನೀರು ಸರಬರಾಜು
ನೀರಿನ ಅಭಾವ: ಹಿಂಗಾರು ಬೆಳೆ ಬಿತ್ತನೆ ಮಾಡದಿರಲು ರೈತರಿಗೆ ಸಿಎಂ ಸಿದ್ದರಾಮಯ್ಯ ಮನವಿ

ಪ್ರತಿ ಟ್ಯಾಂಕರ್‌ನಿಂದ 6,000 ಲೀಟರ್ ನೀರು ಪೂರೈಸಬಹುದು. ಇದರ ಹೊರತಾಗಿ, ಬೇಸಿಗೆಯ ತಿಂಗಳುಗಳಲ್ಲಿ ನಿವಾಸಿಗಳಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಲು BWSSB ತನ್ನ ವ್ಯಾಪ್ತಿಯಲ್ಲಿರುವ ಬೋರ್‌ವೆಲ್‌ಗಳ ಸೇವೆ ಮತ್ತು ದುರಸ್ತಿಗಾಗಿ ತಂಡವನ್ನು ರಚಿಸಿದೆ ಎಂದು BWSSB ಮುಖ್ಯ ಇಂಜಿನಿಯರ್ ಬಿ ಸುರೇಶ್ ತಿಳಿಸಿದ್ದಾರೆ.

ಕಳೆದ ಋತುವಿನಲ್ಲಿ ಬೆಂಗಳೂರು ಶೇ.50ರಷ್ಟು ಮಳೆ ಕೊರತೆ ಎದುರಿಸಿತ್ತು. ಕಳೆದ ವರ್ಷ ಸರಾಸರಿಗಿಂತ ಕಡಿಮೆ ಮಳೆಯಾಗಿರುವುದು ಅಂತರ್ಜಲ ಕುಸಿತಕ್ಕೆ ಕಾರಣವಾಗಿದೆ. ಅಲ್ಲದೆ, ಬಯಲು ಜಾಗಗಳನ್ನು ಕಾಂಕ್ರಿಟೀಕರಣಗೊಳಿಸಲಾಗುತ್ತಿದೆ. ಬೋರ್‌ವೆಲ್‌ಗಳನ್ನು ರೀಚಾರ್ಜ್ ಮಾಡಲು, ಬಾವಿಗಳು ಮತ್ತು ಸಣ್ಣ ಕೊಳಗಳನ್ನು ನಿರ್ಮಿಸಬೇಕಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಜಲತಜ್ಞ ವಿಶ್ವನಾಥ ಶ್ರೀಕಂಠಯ್ಯ ಮಾತನಾಡಿ, ಮಂಡಳಿಯು ತೃತೀಯ ಹಂತದ ನೀರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಿರುವ ಮಳೆ-ನೀರಿನ ಚರಂಡಿಗಳು, ಕಣಿವೆಗಳು ಮತ್ತು ಕೆರೆಗಳ ಬಳಿಯಿರುವ ಬೋರ್‌ವೆಲ್‌ಗಳನ್ನು ರೀಚಾರ್ಜ್ ಮಾಡಲು ಸಹ ಅವಕಾಶವಿದೆ ಎಂದು ಹೇಳಿದ್ದಾರೆ.

ವೃಷಭಾವತಿ ಕಣಿವೆಯು ಕೊಳಚೆ ನೀರು ಸಂಸ್ಕರಣಾ ಘಟಕವನ್ನು (STP) ಹೊಂದಿದ್ದು, ಇದು 150 MLD ಕೊಳಚೆ ನೀರನ್ನು ಸಂಸ್ಕರಿಸುತ್ತದೆ. ಅದೇ ರೀತಿ ಜಕ್ಕೂರು ಕೆರೆಯಲ್ಲಿ ತೃತೀಯ ನೀರಿನ ಶುದ್ಧೀಕರಣ ಘಟಕವಿದೆ. ಸುತ್ತಮುತ್ತಲಿನ ಪ್ರದೇಶಗಳ ಕೊಳವೆಬಾವಿಗಳನ್ನು ಬಳಸಿಕೊಂಡು ಹಾನಿಗೊಳಗಾದ ಪ್ರದೇಶಗಳಿಗೆ ನೀರು ಸರಬರಾಜು ಮಾಡಬಹುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com