ಬಗರ್‌ ಹುಕುಂ ಯೋಜನೆಯಡಿ ತಿರಸ್ಕೃತಗೊಂಡಿರುವ ಅರ್ಜಿಗಳ ಪುನರ್‌ ಪರಿಶೀಲನೆ: ಕೃಷ್ಣ ಬೈರೇಗೌಡ

ಈ ಯೋಜನೆಯು ಭೂರಹಿತ ಬಡವರಿಗೆ ಮೀಸಲಾಗಿದೆ. ಅರ್ಜಿ ವಿಲೇವಾರಿ ಮಾಡಲು 138 ಬಗರ್ ಹುಕುಂ ಸಕ್ರಮ ಸಮಿತಿ ರಚಿಸಿದ್ದೇವೆ. ಇನ್ನೂ ಕೆಲವು ತಾಲೂಕುಗಳಲ್ಲಿ ಸಮಿತಿಗಳು ರಚನೆಯಾಗಿಲ್ಲ.
ಸಚಿವ ಕೃಷ್ಣ ಬೈರೇಗೌಡ
ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಬಗರ್ ಹುಕುಂ ಯೋಜನೆಯಡಿ 54 ಲಕ್ಷ ಎಕರೆ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಸಕ್ರಮಕ್ಕೆ 9.85 ಲಕ್ಷ ಅರ್ಜಿದಾರರು ಕೋರಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೋಮವಾರ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಇಷ್ಟು ದೊಡ್ಡ ಭೂಮಿಯಲ್ಲಿ ಬಗರ್ ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸಲು ಸಾಧ್ಯವಿಲ್ಲ. ಸರ್ಕಾರಿ ಭೂಮಿಯನ್ನು ಕಬಳಿಸಲು ಹೆಚ್ಚಿನ ಸಂಖ್ಯೆಯ ಜನರು ಈ ಯೋಜನೆಯನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ವಿಧಾನಸಭೆಯಲ್ಲಿ ಹೇಳಿದರು.

ಈ ಯೋಜನೆಯು ಭೂರಹಿತ ಬಡವರಿಗೆ ಮೀಸಲಾಗಿದೆ. ಅರ್ಜಿ ವಿಲೇವಾರಿ ಮಾಡಲು 138 ಬಗರ್ ಹುಕುಂ ಸಕ್ರಮ ಸಮಿತಿ ರಚಿಸಿದ್ದೇವೆ. ಇನ್ನೂ ಕೆಲವು ತಾಲೂಕುಗಳಲ್ಲಿ ಸಮಿತಿಗಳು ರಚನೆಯಾಗಿಲ್ಲ. ತಾಲೂಕು ಮಟ್ಟದಲ್ಲಿ ಸಮಿತಿಗಳನ್ನು ಶೀಘ್ರ ರಚಿಸುವಂತೆ ಜಿಲ್ಲಾ ಸಚಿವರಿಗೆ ಸೂಚಿಸಿದ್ದೇನೆ ಎಂದರು.

ಸಚಿವ ಕೃಷ್ಣ ಬೈರೇಗೌಡ
ಬಗರ್ ಹುಕುಂ ಅರ್ಜಿ ಸಲ್ಲಿಕೆ ಇನ್ನು ಸುಲಭ: ಆ್ಯಪ್ ಬಿಡುಗಡೆ ಮಾಡಿದ ಸಚಿವ ಕೃಷ್ಣ ಬೈರೇಗೌಡ

ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ‘ಬಗರ್‌ ಹುಕುಂ’ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡಿರುವ ಅರ್ಜಿಗಳನ್ನು ಪುನರ್‌ ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.

ಪರಿಶೀಲನೆ ಪ್ರಕ್ರಿಯೆ ಮುಂದುವರಿದಿದ್ದು, ಹಲವು ಅರ್ಜಿಗಳು ನಕಲಿ ಎಂಬುದು ಪತ್ತೆಯಾಗಿದೆ ಎಂದು ಬೈರೇಗೌಡ ಹೇಳಿದರು. ಒಬ್ಬ ವ್ಯಕ್ತಿಯೊಬ್ಬರು 25 ಸ್ಥಳಗಳಲ್ಲಿ ಸಾಗುವಳಿ ಮಾಡುತ್ತಿರುವ ಭೂಮಿಯನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಿದ್ದಾರೆ. ಕೆಲವು ಪ್ರಕರಣಗಳಲ್ಲಿ ಸುಳ್ಳು ವಯಸ್ಸಿನ ಪ್ರಮಾಣಪತ್ರಗಳನ್ನು ಸಲ್ಲಿಸಲಾಗಿದೆ. ಅನರ್ಹರ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಅವರು ಹೇಳಿದರು.

ಹಲವು ಅರ್ಹ ಅರ್ಜಿಗಳು ತಿರಸ್ಕೃತಗೊಂಡಿವೆ ಎಂದು ಕೆಲ ಶಾಸಕರು ಹೇಳಿದಾಗ, ಮರು ಪರಿಶೀಲನೆ ನಡೆಸಲಾಗುವುದು ಎಂದರು. 'ಅನರ್ಹರ ಅರ್ಜಿಗಳನ್ನು ಅನುಮೋದಿಸದಂತೆ ಕಂದಾಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಿಯಮಗಳ ತಪ್ಪು ವ್ಯಾಖ್ಯಾನದಿಂದ ತಿರಸ್ಕೃತಗೊಂಡ ಅರ್ಜಿಗಳನ್ನು ಮರುಪರಿಶೀಲಿಸಲಾಗುವುದು,ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com