ರಾಜ್ಯದಲ್ಲಿ 190 ಅಗತ್ಯ ಔಷಧಿಗಳ ದಾಸ್ತಾನು ಇಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ನಾವು 732 ಔಷಧಗಳನ್ನು ಖರೀದಿಸಬೇಕಿದೆ ಮತ್ತು ಅವುಗಳನ್ನು ಆಸ್ಪತ್ರೆಗಳಿಗೆ ಸರಬರಾಜು ಮಾಡಬೇಕಿದೆ. ಈ ಪೈಕಿ 410 ಔಷಧಗಳು ಅಗತ್ಯ ಔಷಧಗಳಾಗಿವೆ. ಸದ್ಯ ನಮ್ಮಲ್ಲಿ 190 ಅಗತ್ಯ ಔಷಧಗಳ ದಾಸ್ತಾನು ಇಲ್ಲ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Updated on

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಕೆಯಾಗುವ 410 ಅಗತ್ಯ ಔಷಧಗಳ ಪೈಕಿ 190 ಔಷಧಗಳ ದಾಸ್ತಾನು ರಾಜ್ಯದಲ್ಲಿ ಇಲ್ಲ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಸಚಿವರು, 'ನಾವು 732 ಔಷಧಗಳನ್ನು ಖರೀದಿಸಬೇಕಿದೆ ಮತ್ತು ಅವುಗಳನ್ನು ಆಸ್ಪತ್ರೆಗಳಿಗೆ ಸರಬರಾಜು ಮಾಡಬೇಕಿದೆ. ಈ ಪೈಕಿ 410 ಔಷಧಗಳು ಅಗತ್ಯ ಔಷಧಗಳಾಗಿವೆ. ಸದ್ಯ ನಮ್ಮಲ್ಲಿ 190 ಅಗತ್ಯ ಔಷಧಗಳ ದಾಸ್ತಾನು ಇಲ್ಲ. ಇದುವೆ ವಾಸ್ತವವಾಗಿದ್ದು, ನಾವು ಏನನ್ನೂ ಮುಚ್ಚಿಡುವುದಿಲ್ಲ' ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳು ಲಭ್ಯವಾಗದೆ ಬಡ ರೋಗಿಗಳಿಗೆ ಆಗುತ್ತಿರುವ ತೊಂದರೆಗಳ ಕುರಿತು ಎಂಎಲ್‌ಸಿ ಎಚ್‌ಎಸ್‌ ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖೆಯಲ್ಲಿ ಹಲವು ಲೋಪದೋಷಗಳಿವೆ ಎಂಬುದನ್ನು ಒಪ್ಪಿಕೊಂಡರು ಮತ್ತು ಇಡೀ ವ್ಯವಸ್ಥೆಯನ್ನು ಸುಗಮಗೊಳಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಏಪ್ರಿಲ್ ಮೊದಲ ವಾರದೊಳಗೆ ಎಲ್ಲಾ ಔಷಧಗಳನ್ನು ಆಸ್ಪತ್ರೆಗಳಿಗೆ ಪೂರೈಸಲು ಪ್ರಯತ್ನ ನಡೆಸಲಾಗುತ್ತಿದೆ. ಇದಕ್ಕಾಗಿ ಟೆಂಡರ್‌ ಕರೆಯಲಾಗಿದೆ ಎಂದು ಹೇಳಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸಲು ICMR ಒಪ್ಪಿಗೆ: ಸಚಿವ ದಿನೇಶ್ ಗುಂಡೂರಾವ್

ಬಡ ರೋಗಿಗಳಿಗೆ ಔಷಧಿಗಳನ್ನು ಒದಗಿಸುವ ಜವಾಬ್ದಾರಿಯಿಂದ ಆರೋಗ್ಯ ಇಲಾಖೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ಬಳಿ ಸದ್ಯ ಇರುವ ಹಣದಿಂದ ಔಷಧಿಗಳನ್ನು ಖರೀದಿಸಲು ಆಸ್ಪತ್ರೆಗಳಿಗೆ ನಿರ್ದೇಶನ ನೀಡಲಾಗಿದೆ. ಅವರು ಸ್ಥಳೀಯವಾಗಿ ಔಷಧಿಗಳನ್ನು ಖರೀದಿಸುತ್ತಿದ್ದಾರೆ. ಆದರೆ, ಈ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯ ಕೊರತೆ ಇದೆ ಎಂದು ತಿಳಿಸಿದರು.

ಔಷಧಗಳ ಖರೀದಿ ವ್ಯವಸ್ಥೆ ಜಾರಿಗೆ ತರಲಾಗುವುದು

ಆಸ್ಪತ್ರೆಗಳಿಗೆ ಔಷಧ ಪೂರೈಕೆ ಮಾಡುವ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ (ಕೆಎಸ್‌ಎಂಎಸ್‌ಸಿಎಲ್‌)ಯನ್ನು ಬಲಪಡಿಸಬೇಕು. ಬಡ ರೋಗಿಗಳಿಗೆ ಔಷಧಗಳನ್ನು ಒದಗಿಸುವುದು ನಮ್ಮ ಮೊದಲ ಜವಾಬ್ದಾರಿಯಾಗಿದ್ದು, ಇದರಲ್ಲಿ ನಾವು ವಿಫಲರಾಗಿದ್ದೇವೆ ಎಂದು ಸಚಿವರು ಹೇಳಿದರು.

ನಿಗಮದ ಸ್ಥಿತಿ ದಯನೀಯವಾಗಿದೆ. ನಿಗಮದಲ್ಲಿ ಮೂರು ತಿಂಗಳಿಗಿಂತ ಹೆಚ್ಚು ಕಾಲ ಯಾವುದೇ ವ್ಯವಸ್ಥಾಪಕ ನಿರ್ದೇಶಕರು ಕೆಲಸ ಮಾಡಿಲ್ಲ. ನಾವು ಅದನ್ನು ಸರಿಪಡಿಸುತ್ತೇವೆ. ಸರಿಯಾದ ಖರೀದಿ ವ್ಯವಸ್ಥೆಯನ್ನು ಜಾರಿಗೆ ತರಲು ಪ್ರಯತ್ನಗಳು ನಡೆಯುತ್ತಿವೆ ಮತ್ತು ಎರಡು ವರ್ಷಗಳಿಗೊಮ್ಮೆ ಟೆಂಡರ್ ಕರೆಯಲಾಗುವುದು. ನಿಗಮದ ಕಾರ್ಯನಿರ್ವಹಣೆಯನ್ನು ಸುಧಾರಿಸಲು ಕ್ರಮಗಳನ್ನು ಸೂಚಿಸಲು ಕೆಪಿಎಂಜಿಗೆ ಕೇಳಲಾಗಿದೆ ಮತ್ತು ಅದು ಪ್ರಾಥಮಿಕ ವರದಿಯನ್ನು ನೀಡಿದೆ ಎಂದು ಅವರು ಹೇಳಿದರು.

ನಿರ್ವಹಣಾ ಆಡಳಿತ ವ್ಯವಸ್ಥೆಯನ್ನು ಹೊಂದಲು ಆರೋಗ್ಯ ಇಲಾಖೆಯು ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC) ನೊಂದಿಗೆ ಕೆಲಸ ಮಾಡುತ್ತಿದೆ. ಎಲ್ಲಾ ಉಪಕರಣಗಳ ಬಗ್ಗೆ ನಮಗೆ ಮಾಹಿತಿಯಿದೆ ಮತ್ತು ಮತ್ತು ಅವುಗಳು ಸದ್ಯ ಕಾರ್ಯನಿರ್ವಹಿಸುವ ಸ್ಥಿತಿಯಲ್ಲಿವೆ. ಸಿ-ಡಾಕ್ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಿದೆ ಎಂದರು.

ತಾಲ್ಲೂಕು ಅಥವಾ ಜಿಲ್ಲಾ ಆಸ್ಪತ್ರೆಗಳಲ್ಲಿ ಫಾರ್ಮಸಿಗಳು ಇರದಂತೆ ನೋಡಿಕೊಳ್ಳುವುದು ಇದರ ಉದ್ದೇಶವಾಗಿದೆ. ಆಸ್ಪತ್ರೆಗೆ ಬರುವ ಎಲ್ಲಾ ಜನರಿಗೂ ಔಷಧಗಳನ್ನು ಉಚಿತವಾಗಿ ಪಡೆಯಬೇಕು. ನಮ್ಮ ಆಸ್ಪತ್ರೆಗಳಲ್ಲಿ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳೂ ಇರಬಾರದು. ಆಸ್ಪತ್ರೆಗಳ ಬಳಿ ಔಷಧಾಲಯಗಳ ಸಂಖ್ಯೆ ಹೆಚ್ಚುತ್ತಿರುವುದು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com