ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

SSLC, 2nd PUC Exams: ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ

2024-25ನೇ ಸಾಲಿನ ದ್ವಿತೀಯ ಪಿಯುಸಿ (2nd PUC Exam) ಹಾಗೂ ಎಸ್ಎಸ್ಎಲ್​ಸಿ(SSLC exam) ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.
Published on

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ (2nd PUC Exam) ಹಾಗೂ ಎಸ್ಎಸ್ಎಲ್​ಸಿ(SSLC exam) ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ವಿಕಾಸಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಪರೀಕ್ಷಾ ದಿನಾಂಕ ಹಾಗೂ ಪರೀಕ್ಷೆಗಳಿಗೆ ಸಂಬಂಧಪಟ್ಟ ಇತರ ಮಾಹಿತಿಗಳನ್ನು ನೀಡಿದರು.

ದ್ವಿತೀಯ ಪಿಯುಸಿ ಪರೀಕ್ಷೆ ) ಮಾರ್ಚ್​ 01 ರಿಂದ 22ರ ವರೆಗೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಏಪ್ರಿಲ್ 06ರವರೆಗೆ ನಡೆಯಲಿವೆ ಎಂದು ತಿಳಿಸಿದರು. ಈ ವರ್ಷ ರಾಜ್ಯದಲ್ಲಿ 8,96,271 ಮಕ್ಕಳು ಎಸ್​ಎಸ್​ಎಲ್​ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ.

ಸಾಂದರ್ಭಿಕ ಚಿತ್ರ
20 ಅಂಕಗಳಿಗೆ ಎಸ್ ಎಸ್ ಎಲ್ ಸಿ ಯಲ್ಲಿ ಆಂತರಿಕ ಪರೀಕ್ಷೆ: ಪ್ರೌಢ ಶಿಕ್ಷಣ ಮಂಡಳಿ ಮಾರ್ಗಸೂಚಿ

ಕಳೆದ ವರ್ಷದಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಹಾಗೂ ಎಸ್ ಎಸ್ಎಲ್​ಸಿ ಪರೀಕ್ಷೆ-2 ನ್ನು ಎಪ್ರಿಲ್ ಕೊನೆಯ ವಾರದಲ್ಲಿ ನಡೆಸುತ್ತೇವೆ ಎಂದರು.

ಪಿಯುಸಿ ಹಾಗೂ ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಿಜಾಬ್ ಅವಕಾಶ ವಿಚಾರವಾಗಿ ಮಾತನಾಡಿದ ಅವರು, ನ್ಯಾಯಾಲಯದ ನಿರ್ದೇಶನದಂತೆ ಸಮವಸ್ತ್ರ ನಿಯಮ ಪಾಲನೆ ಮಾಡಲಾಗುತ್ತದೆ. ಅಡ್ವಕೇಟ್ ಜನರಲ್ ಅವರ ಸಲಹೆ ಪಡೆದು ಹಿಜಾಬ್ ವಿಚಾರ ನಿರ್ಧರಿಸಲಾಗುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com