ಬೆಳಗಾವಿ: ಪ್ರೇಮಿಗಳ ದಿನದಂದು ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ, ಮೂವರ ಬಂಧನ

ದೇವಸ್ಥಾನದ ಬಳಿ ಆರೋಪಿಗಳು ಬಾಲಕಿಯರನ್ನು ಕಾರಿನಲ್ಲಿ ಕೂರಿಸಿಕೊಂಡು ಮುಗಳಖೋಡ ಗ್ರಾಮದ ತೋಟಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: ಪ್ರೇಮಿಗಳ ದಿನದಂದು ರಾಯಬಾಗದಲ್ಲಿ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಮೂವರು ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ಎಸಗಿರುವ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಗಳನ್ನು ರಾಯಬಾಗ ತಾಲೂಕಿನ ಗ್ರಾಮದ ನಿವಾಸಿಗಳಾದ ‘ಅದ್ಧೂರಿ’ ಅಲಿಯಾಸ್ ಹಾಲಪ್ಪ ಸುರೇಶ ಬಬಲೇಶ್ವರ, ಹಾಲಪ್ಪ ಗಿಡ್ಡವ್ವಗೋಳ ಮತ್ತು ಗೋಪಾಲ್ ಗಾಡಿವಡ್ಡರ್ ಎಂದು ಗುರುತಿಸಲಾಗಿದೆ.

ರಾಯಬಾಗ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ಆರೋಪಿಗಳು ದೇವಸ್ಥಾನಕ್ಕೆ ತೆರಳುತ್ತಿದ್ದ ಬಾಲಕಿಯರನ್ನು ಕಾರಿನಲ್ಲಿ ಹಿಂಬಾಲಿಸಿದ್ದಾರೆ. ದೇವಸ್ಥಾನದ ಬಳಿ ಆರೋಪಿಗಳು ಬಾಲಕಿಯರನ್ನು ಕಾರಿನಲ್ಲಿ ಕೂರಿಸಿಕೊಂಡು ಮುಗಳಖೋಡ ಗ್ರಾಮದ ತೋಟಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗಿದೆ.

ಸಾಂದರ್ಭಿಕ ಚಿತ್ರ
ಕೊಪ್ಪಳ: ಪತಿಗೆ ಥಳಿಸಿ ಮಹಿಳೆ ಮೇಲೆ ಅತ್ಯಾಚಾರ; 6 ಮಂದಿ ಬಂಧನ

ನಂತರ ಸಂತ್ರಸ್ತೆಯರನ್ನು ದೇವಸ್ಥಾನದ ಬಳಿ ಬಿಟ್ಟು, ಪೊಲೀಸರಿಗೆ ಅಥವಾ ಪೋಷಕರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಆರೋಪಿಗಳು ಸ್ಥಳದಿಂದ ತೆರಳಿದ ಬಳಿಕ ಸಂತ್ರಸ್ತರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಿಸಿಕೊಂಡ ರಾಯಬಾಗ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಏತನ್ಮಧ್ಯೆ, ಮೂವರು ಯುವತಿಯರಿಗೆ ಆರೋಪಿಗಳ ಪರಿಚಯವಿದ್ದು, ಅವರು ತಮ್ಮ ಕಾರಿನಲ್ಲಿ ಮುಗಳಖೋಡ್ ಗ್ರಾಮದ ಬಳಿಯ ತೋಟಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣವನ್ನೂ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com