ವಿಧಾನ ಪರಿಷತ್
ವಿಧಾನ ಪರಿಷತ್

ವಿಧಾನ ಪರಿಷತ್: ಪ್ರಧಾನಿ ಮೋದಿ ವಿರುದ್ಧ ಟೀಕೆ ವಿರೋಧಿಸಿ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ ಹೇಳಿಕೆಯನ್ನು ವಿರೋಧಿಸಿ ವಿಧಾನ ಪರಿಷತ್ತಿನ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಬುಧವಾರ ಸಭಾತ್ಯಾಗ ಮಾಡಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ ಹೇಳಿಕೆಯನ್ನು ವಿರೋಧಿಸಿ ವಿಧಾನ ಪರಿಷತ್ತಿನ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಬುಧವಾರ ಸಭಾತ್ಯಾಗ ಮಾಡಿದರು.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡುವಾಗ ಪ್ರಧಾನಿ ಮೋದಿ ಒಕ್ಕೂಟ ವ್ಯವಸ್ಥೆಗೆ ಅಪಾಯ ಎಂದ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ಗಂಟೆಗಳ ಕಾಲ ನಿರಂತರವಾಗಿ ಮಾತನಾಡಿದ್ದಾರೆ ಮತ್ತು ಈ ಸಂಬಂಧದ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಬಗ್ಗೆಯೂ ಮಾತನಾಡಿದ್ದಾರೆ. ಇದು ಚುನಾವಣಾ ಪ್ರಚಾರ ಭಾಷಣ. ಇಡೀ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ. ನನಗೆ ಮಾತನಾಡಲು ಅವಕಾಶ ನೀಡದಿದ್ದರೆ ಜನರಿಗೆ ತಪ್ಪು ಸಂದೇಶ ಬರುತ್ತದೆ ಎಂದು ಪೂಜಾರಿ ಹೇಳಿದರು.

ವಿಧಾನ ಪರಿಷತ್
'ಜನ ಸರ್ಟಿಫಿಕೇಟ್ ಕೊಟ್ಟಿದ್ದಾರೆ, ಬಿಜೆಪಿ ಸುಳ್ಳಿನ ಪಕ್ಷ, ಕೇಂದ್ರದಿಂದ ತಾರತಮ್ಯ': ಸದನದಲ್ಲಿ ಸಿದ್ದರಾಮಯ್ಯ ಗುಡುಗು

ಪೂಜಾರಿ ಅವರ ಬೇಡಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು, ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದರು. "ನಮ್ಮ ತೆರಿಗೆ ನಮ್ಮ ಹಕ್ಕು" ಮತ್ತು "ಬಿಜೆಪಿ ಕನ್ನಡಿಗರ ವಿರೋಧಿ" ಎಂಬ ಘೋಷಣೆಗಳನ್ನು ಕೂಗಿದರು.

ಪ್ರತಿಯಾಗಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಸಭಾತ್ಯಾಗ ಮಾಡಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾಗಿ ಜೈಲಿಗೆ ಹೋದ ಕಾಂಗ್ರೆಸ್ಸಿಗರೇ ನಿಜವಾದ ರಾಷ್ಟ್ರ ಪ್ರೇಮಿಗಳು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಎಂದೂ ಭಾಗವಹಿಸದ ಆರ್ ಎಸ್ಎಸ್ ಮತ್ತು ಬಿಜೆಪಿ ಪರಿವಾರ ರಾಷ್ಟ್ರೀಯವಾದಿಗಳೇ? ಎಂದು ಸಿಎಂ ಪ್ರಶ್ನಿಸಿದರು.

“ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರಿಂದ ಜೈಲು ಪಾಲಾದವರು, ಹುತಾತ್ಮರಾದವರು, ಚಿತ್ರಹಿಂಸೆ ಅನುಭವಿಸಿದವರು ಕಾಂಗ್ರೆಸ್ಸಿಗರು. ಬಿಜೆಪಿಯಲ್ಲಿ ಸ್ವಾತಂತ್ರ್ಯ ಹೋರಾಟದ ಇತಿಹಾಸವಿಲ್ಲ. ಅವರು ದೇಶಕ್ಕಾಗಿ ಹೋರಾಡಿದ ಇತಿಹಾಸವಿಲ್ಲ. ನಮ್ಮ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ಈಗ ತಾವೇ ರಾಷ್ಟ್ರೀಯವಾದಿಗಳೆಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ನಿಜವಾದ ರಾಷ್ಟ್ರೀಯವಾದಿಗಳು ಯಾರು ಎಂಬುದನ್ನು ಭಾರತದ ಇತಿಹಾಸ ಹೇಳುತ್ತದೆ'' ಎಂದು ಹೇಳಿದರು.

Related Stories

No stories found.

Advertisement

X
Kannada Prabha
www.kannadaprabha.com