ಬಿಟ್ ಕಾಯಿನ್ ಹಗರಣ: IPS ಅಧಿಕಾರಿ ಸಂದೀಪ್ ಪಾಟೀಲ್‌ಗೆ ನೋಟಿಸ್!

ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ IPS ಅಧಿಕಾರಿಗೆ ಸಂದೀಪ್ ಪಾಟೀಲ್‌ಗೆ ನೋಟಿಸ್ ನೀಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ IPS ಅಧಿಕಾರಿಗೆ ಸಂದೀಪ್ ಪಾಟೀಲ್‌ಗೆ ನೋಟಿಸ್ ನೀಡಲಾಗಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಟ್ ಕಾಯಿನ್ ಹಗರಣ ನಡೆದಿದ್ದು ಪೊಲೀಸರೇ ಹಗರಣದ ದಿಕ್ಕು ತಪ್ಪಿಸಿದ್ದಲ್ಲದೇ ಬಿಟ್‌ಕಾಯಿನ್ ಹಗರಣದಲ್ಲಿ ಭಾಗಿಯಾಗಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಬಿಟ್‌ಕಾಯಿನ್‌ ತನಿಖೆಯ ಹೊಣೆಯನ್ನು ಎಸ್‌ಐಟಿ ವಹಿಸಿದ್ದು, ಇದೀಗ ಬಿಟ್‌ಕಾಯಿನ್‌ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಗೆ ಎಸ್ಐಟಿ ನೋಟಿಸ್ ನೀಡಿದೆ.

ಸಂಗ್ರಹ ಚಿತ್ರ
ಬಿಟ್ ಕಾಯಿನ್ ಹಗರಣಕ್ಕೆ ಮರು ಜೀವ: ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬಿಟ್‌ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಪದೇ ಪದೇ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಎಸ್‌ಐಟಿ ಸಹ ತನಿಖೆಯ ಜವಾಬ್ದಾರಿ ವಹಿಸಿದ ಮೇಲೆ ಶ್ರೀಕಿಯ ವಿಚಾರಣೆಯನ್ನು ನಡೆಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com