ಸೌಜನ್ಯ ಪ್ರಕರಣ: ಹೊಸದಾಗಿ ತನಿಖೆಗೆ ಮನವಿ; ಸಿಬಿಐ, ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಹೈಕೋರ್ಟ್ ನೋಟಿಸ್

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚಿಸಿ ಹೊಸದಾಗಿ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡುವಂತೆ ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಚಂದಪ್ಪ ಗೌಡ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ರಾಜ್ಯ ಪೊಲೀಸ್ ಮುಖ್ಯಸ್ಥರು ಮತ್ತು ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಹೊಸದಾಗಿ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡುವಂತೆ ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಚಂದಪ್ಪ ಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ರಾಜ್ಯ ಪೊಲೀಸ್ ಮುಖ್ಯಸ್ಥರು ಮತ್ತು ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

2012 ರಲ್ಲಿ ತನ್ನ ಅಪ್ರಾಪ್ತ ಮಗಳಾದ ಸೌಜನ್ಯಳ ಮೇಲೆ ನಡೆದ ಕ್ರೂರ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಅಪರಾಧಿಗಳ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಳು ಮತ್ತು ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಅವರು ಕೋರಿದ್ದಾರೆ.

ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸುವ ಸಂದರ್ಭದಲ್ಲಿ ಪ್ರಕರಣದ ಅಪರಾಧಿಗಳನ್ನು ಪತ್ತೆಹಚ್ಚಲು ವಿಫಲರಾದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೆಷನ್ಸ್ ನ್ಯಾಯಾಲಯವು ಶಿಫಾರಸು ಮಾಡಿದೆ. ಈ ಸಂಬಂಧ ಅಗತ್ಯ ಆದೇಶ ನೀಡಲು ಸಮಿತಿಗೆ ನಿರ್ದೇಶನ ನೀಡುವಂತೆ ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದು, ಉಚ್ಛ ನ್ಯಾಯಾಲಯವು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ (ಅಪರಾಧ ಮತ್ತು ತಾಂತ್ರಿಕ ಸೇವೆಗಳು), ಖುಲಾಸೆ ಸಮಿತಿಯ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಿದೆ.

ಕರ್ನಾಟಕ ಹೈಕೋರ್ಟ್
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಆರೋಪಿ ಸಂತೋಷ್ ರಾವ್ ಖುಲಾಸೆ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಕೆ

ನೋಟಿಸ್ ಜಾರಿ ಮಾಡುವಾಗ ನ್ಯಾಯಮೂರ್ತಿ ಕೆ. ನಟರಾಜನ್, ಸಾರಾಂಶದಲ್ಲಿ, ನ್ಯಾಯಮೂರ್ತಿ ಕೆ.ನಟರಾಜನ್ ಅವರು ಸೆಷನ್ಸ್ ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯ ಜೊತೆಯಲ್ಲಿಯೇ ತಮ್ಮ ಪ್ರಕರಣವನ್ನೂ ಆಲಿಸಬೇಕೆಂಬ ಅರ್ಜಿದಾರರ ಕೋರಿಕೆಯನ್ನು ಪುರಸ್ಕರಿಸಬೇಕೇ ಎಂಬುದನ್ನು ತೀರ್ಮಾನಿಸಲು ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ರವಾನಿಸಲು ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com