ತಿರುವನಂತಪುರಂ-ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮಂಗಳೂರಿನವರೆಗೆ ವಿಸ್ತರಣೆ

ತಿರುವನಂತಪುರಂ-ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಿಸುವ ಪ್ರಸ್ತಾವನೆಗೆ ರೈಲ್ವೆ ಸಚಿವಾಲಯ ಬುಧವಾರ ಅನುಮೋದನೆ ನೀಡಿದೆ.
ವಂದೇ ಭಾರತ್ ಎಕ್ಸ್‌ಪ್ರೆಸ್
ವಂದೇ ಭಾರತ್ ಎಕ್ಸ್‌ಪ್ರೆಸ್

ಮಂಗಳೂರು: ತಿರುವನಂತಪುರಂ-ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಿಸುವ ಪ್ರಸ್ತಾವನೆಗೆ ರೈಲ್ವೆ ಸಚಿವಾಲಯ ಬುಧವಾರ ಅನುಮೋದನೆ ನೀಡಿದೆ.

ರೈಲ್ವೆ ಮಂಡಳಿಯ ಜಂಟಿ ನಿರ್ದೇಶಕ(ಕೋಚಿಂಗ್) ವಿವೇಕ್ ಕುಮಾರ್ ಸಿನ್ಹಾ ಅವರ ಪ್ರಕಟಣೆಯ ಪ್ರಕಾರ, ಮಂಗಳೂರು-ತಿರುವನಂತಪುರಂ ವಂದೇ ಭಾರತ್ ಎಕ್ಸ್‌ಪ್ರೆಸ್(ರೈಲು ಸಂಖ್ಯೆ. 20631) ಮಂಗಳೂರಿನಿಂದ ಬೆಳಗ್ಗೆ 6.15 ಕ್ಕೆ ಹೊರಟು, ಮಧ್ಯಾಹ್ನ 3.05ಕ್ಕೆ ತಿರುವನಂತಪುರಂ ತಲುಪಲಿದೆ. ಬುಧವಾರ ಹೊರತುಪಡಿಸಿ ವಾರದ ಆರು ದಿನ ಈ ವಂದೇ ಭಾರತ್ ರೈಲು ಸಂಚರಿಸಲಿದೆ.

ತಿರುವನಂತಪುರಂ-ಮಂಗಳೂರು ಎಕ್ಸ್‌ಪ್ರೆಸ್(ರೈಲು ಸಂಖ್ಯೆ 20632) ರೈಲು ತಿರುವನಂತಪುರದಿಂದ ಸಂಜೆ 4.05 ಕ್ಕೆ ಹೊರಟು ಮಧ್ಯ ರಾತ್ರಿ 12.40 ಕ್ಕೆ ಮಂಗಳೂರು ತಲುಪಲಿದೆ. ಈ ಮಾರ್ಗದಲ್ಲಿ ರೈಲು ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್ ಮೇನ್, ತಿರೂರ್, ಶೋರನೂರು, ತ್ರಿಶೂರ್, ಎರ್ನಾಕುಲಂ, ಆಲಪ್ಪುಳ ಮತ್ತು ಕೊಲ್ಲಂನಲ್ಲಿ ನಿಲ್ಲುತ್ತದೆ.

ವಂದೇ ಭಾರತ್ ಎಕ್ಸ್‌ಪ್ರೆಸ್
ಕೇಂದ್ರ ಬಜೆಟ್ 2024: ರೈಲ್ವೆಗೆ ದೊಡ್ಡ ಕೊಡುಗೆ, 40 ಸಾವಿರ ಸಾಮಾನ್ಯ ಬೋಗಿಗಳು ವಂದೇ ಭಾರತ್ ದರ್ಜೆಗೆ!

ಈ ರೈಲುಗಳ ಪ್ರಾಥಮಿಕ ನಿರ್ವಹಣೆಯು ಮಂಗಳೂರಿನಲ್ಲಿ ನಡೆಯಲಿದೆ ಎಂದು ಸಿನ್ಹಾ ಅವರು ತಿಳಿಸಿದ್ದಾರೆ.

ಮಂಗಳೂರಿನವರೆಗೆ ರೈಲನ್ನು ವಿಸ್ತರಿಸುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಅದನ್ನು ಅನುಮೋದಿಸಿದ್ದಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com