ಫೆ.26ರಿಂದ ಎರಡು ದಿನಗಳ ಉದ್ಯೋಗ ಮೇಳ; 500 ಕ್ಕೂ ಹೆಚ್ಚು ಸಂಸ್ಥೆ ಭಾಗಿ, 31 ಸಾವಿರ ಮಂದಿ ನೋಂದಣಿ

ನಿರುದ್ಯೋಗಿ ಯುವಕರಿಗೆ ಉದ್ಯೋಗ ಹುಡುಕಲು ಸಹಾಯ ಮಾಡಲೆಂದು ಕರ್ನಾಟಕ ಸರ್ಕಾರವು ಫೆಬ್ರುವರಿ 26 ರಿಂದ ಇಲ್ಲಿ 'ಯುವ ಸಮೃದ್ಧಿ ಸಮ್ಮೇಳನ' ಎಂಬ ಎರಡು ದಿನಗಳ ಮೆಗಾ ಉದ್ಯೋಗ ಮೇಳವನ್ನು ನಡೆಸಲಿದೆ.
ಶರಣ ಪ್ರಕಾಶ ಪಾಟೀಲ್ - ಪ್ರಿಯಾಂಕ್ ಖರ್ಗೆ
ಶರಣ ಪ್ರಕಾಶ ಪಾಟೀಲ್ - ಪ್ರಿಯಾಂಕ್ ಖರ್ಗೆ
Updated on

ಬೆಂಗಳೂರು: ನಿರುದ್ಯೋಗಿ ಯುವಕರಿಗೆ ಉದ್ಯೋಗ ಹುಡುಕಲು ಸಹಾಯ ಮಾಡಲೆಂದು ಕರ್ನಾಟಕ ಸರ್ಕಾರವು ಫೆಬ್ರುವರಿ 26 ರಿಂದ ಇಲ್ಲಿ 'ಯುವ ಸಮೃದ್ಧಿ ಸಮ್ಮೇಳನ' ಎಂಬ ಎರಡು ದಿನಗಳ ಮೆಗಾ ಉದ್ಯೋಗ ಮೇಳವನ್ನು ನಡೆಸಲಿದೆ. ಮೇಳದಲ್ಲಿ 500ಕ್ಕೂ ಹೆಚ್ಚು ಸಂಸ್ಥೆಗಳು ಭಾಗವಹಿಸಲಿದ್ದು, ಈವರೆಗೂ 31,000 ಉದ್ಯೋಗಾಕಾಂಕ್ಷಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಅರಮನೆ ಮೈದಾನದಲ್ಲಿ ನಡೆಯಲಿರುವ ಉದ್ಯೋಗ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉದ್ಘಾಟಿಸಲಿದ್ದಾರೆ.

ಉದ್ಯೋಗ ಮೇಳವು ಪದವಿ ಪೂರ್ಣಗೊಳಿಸಿದ ಅಥವಾ ಎಂಜಿನಿಯರಿಂಗ್ ಡಿಪ್ಲೊಮಾ ಮತ್ತು ಇತರ ಉದ್ಯೋಗ ಆಧಾರಿತ ಕೋರ್ಸ್‌ಗಳನ್ನು ಮಾಡಿರುವ ಯುವಕರಿಗೆ ಉದ್ಯೋಗಾವಕಾಶಗಳನ್ನು ಪಡೆಯಲು ಸಹಾಯ ಮಾಡುತ್ತದೆ.

ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಮತ್ತು ಐಟಿ-ಬಿಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಖಾಸಗಿ ವಲಯದ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಉದ್ಯೋಗ ಮೇಳವನ್ನು ಆಯೋಜಿಸುತ್ತಿದೆ.

31,000 ಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳು ಈಗಾಗಲೇ ಉದ್ಯೋಗ ಮೇಳಕ್ಕಾಗಿ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಹೆಚ್ಚಿನ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದೇವೆ. 500 ಕ್ಕೂ ಹೆಚ್ಚು ಪ್ರತಿಷ್ಠಿತ ರಾಷ್ಟ್ರೀಯ ಮತ್ತು ಜಾಗತಿಕ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ಸುಮಾರು ಒಂದು ಲಕ್ಷ ಹುದ್ದೆಗಳು ಖಾಲಿ ಇವೆ. ಯುವಕರು ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗ ಕಂಡುಕೊಳ್ಳಲು ಇದು ಸೂಕ್ತ ವೇದಿಕೆಯಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಅವಕಾಶವನ್ನು ಬಳಸಿಕೊಳ್ಳುವಂತೆ ಕೋರುತ್ತೇನೆ ಎಂದು ಶರಣ ಪ್ರಕಾಶ ಪಾಟೀಲ ಹೇಳಿದರು.

ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಮತ್ತು ಅವಶ್ಯಕತೆಗಳಿಗೆ ಸೂಕ್ತವಾದ ಉದ್ಯೋಗಾವಕಾಶಗಳನ್ನು ಪಡೆಯಲು ಸಹಾಯ ಮಾಡಲು 600 ಕ್ಕೂ ಹೆಚ್ಚು ಸ್ಟಾಲ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಶರಣ ಪ್ರಕಾಶ ಪಾಟೀಲ್ - ಪ್ರಿಯಾಂಕ್ ಖರ್ಗೆ
ಉದ್ಯೋಗಾಕಾಂಕ್ಷಿಗಳಿಗೆ Good News: ಜನವರಿಯಲ್ಲಿ ರಾಜ್ಯ ಸರ್ಕಾರದಿಂದಲೇ ಉದ್ಯೋಗ ಮೇಳ!

ಉದ್ಯೋಗಾಕಾಂಕ್ಷಿಗಳಿಗೆ ಸಹಾಯ ಮಾಡಲು ತಜ್ಞರು ಮತ್ತು ಕಂಪನಿಗಳ ಕಾರ್ಯನಿರ್ವಾಹಕರು ಅಗತ್ಯ ಮಾಹಿತಿ ನೀಡುತ್ತಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ಕಾರ್ಯಕ್ಕೆ ಶ್ಲಾಘಿಸಿದ ಪಾಟೀಲ್, ದೇಶದ ಯಾವುದೇ ರಾಜ್ಯಗಳಲ್ಲಿ ಇಂತಹ ಉದ್ಯೋಗ ಮೇಳಗಳು ನಡೆಯುತ್ತಿಲ್ಲ. ರಾಜ್ಯದಲ್ಲಿರುವ ನಿರುದ್ಯೋಗಿ ಯುವಕರಿಗೆ ನೆರವಾಗಲು ಉದ್ಯೋಗ ಮೇಳ ಆಯೋಜಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅವಧಿಯಲ್ಲೂ ಇದೇ ರೀತಿಯ ಉದ್ಯೋಗ ಮೇಳ ನಡೆಸಲಾಗಿತ್ತು ಎಂದರು.

'ಉದ್ಯೋಗ ಮೇಳದಲ್ಲಿ ಉದ್ಯೋಗ ಪಡೆಯಲು ಸಾಧ್ಯವಾಗದವರಿಗೆ ತರಬೇತಿ ನೀಡಲಾಗುತ್ತಿದ್ದು, ಅದರ ಸಹಾಯದಿಂದ ಮುಂದಿನ ದಿನಗಳಲ್ಲಿ ಉದ್ಯೋಗ ಪಡೆಯಬಹುದು. ಅವರಿಗೆ ತರಬೇತಿ ನೀಡಲು ಹಲವು ತಜ್ಞರು ಮುಂದೆ ಬಂದಿದ್ದಾರೆ. ಉದ್ಯೋಗ ಮೇಳದಲ್ಲಿ ನೋಂದಾಯಿಸಿಕೊಂಡವರಿಗೆ ಸೂಕ್ತ ಉದ್ಯೋಗ ಹುಡುಕಲು ನಿರ್ದಿಷ್ಟ ಸ್ಟಾಲ್‌ಗಳಿಗೆ ಭೇಟಿ ನೀಡುವಂತೆ ಸಂದೇಶಗಳು ಬರುತ್ತವೆ. ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗ ಪಡೆದರೆ, ನಮ್ಮ ಪ್ರಯತ್ನ ಸಾರ್ಥಕವಾಗಲಿದೆ ಎಂದು ಸಚಿವರು ತಿಳಿಸಿದರು.

ಶರಣ ಪ್ರಕಾಶ ಪಾಟೀಲ್ - ಪ್ರಿಯಾಂಕ್ ಖರ್ಗೆ
ಏಪ್ರಿಲ್ 15 ರಿಂದ ರಾಜ್ಯದಲ್ಲಿ ಕೆಎಸ್ಒಯು ವಿದ್ಯಾರ್ಥಿಗಳಿಗಾಗಿ ಡಿಜಿಟಲ್ ಉದ್ಯೋಗ ಮೇಳ

ಇಂತಹ ಬೃಹತ್ ಉದ್ಯೋಗ ಮೇಳ ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯ. ಉತ್ತಮ ಮೂಲಸೌಕರ್ಯ ಮತ್ತು ನುರಿತ ಉದ್ಯೋಗಿಗಳ ಕಾರಣದಿಂದ ದೊಡ್ಡ ಕಂಪನಿಗಳು ಇಲ್ಲಿ ಸ್ಟಾಲ್‌ಗಳನ್ನು ಸ್ಥಾಪಿಸುತ್ತವೆ. ಯುವಜನರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಾವು ಉದ್ಯೋಗಗಳನ್ನು ಒದಗಿಸುವುದು ಮಾತ್ರವಲ್ಲದೆ ತರಬೇತಿ ಕೇಂದ್ರಗಳನ್ನು ತೆರೆಯುವ ಮೂಲಕ ಕೌಶಲ್ಯವನ್ನು ನೀಡುತ್ತಿದ್ದೇವೆ ಮತ್ತು ಇಲ್ಲಿ ನೋಂದಾಯಿಸಿದವರಿಗೆ ಅವರನ್ನು ಟ್ರ್ಯಾಕ್ ಮಾಡುವ ಮೂಲಕ ಉದ್ಯೋಗಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ ಎಂದು ಸಚಿವರು ಹೇಳಿದರು.

ಉದ್ಯೋಗ ಸೃಷ್ಟಿಸುವ ಭರವಸೆಯನ್ನು ಈಡೇರಿಸದ ಕೇಂದ್ರವನ್ನು ಟೀಕಿಸಿದ ಅವರು, ದೇಶದಲ್ಲಿ ನಿರುದ್ಯೋಗಿಗಳ ಅಂಕಿಅಂಶಗಳ ಸಂಗ್ರಹವನ್ನು ನಿಲ್ಲಿಸಿದ್ದಾರೆ. ಪ್ರಧಾನಿ ಮೋದಿ ಅವರು 20 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಆದರೆ, ವಿಫಲರಾಗಿದ್ದಾರೆ. NSO ಸಮೀಕ್ಷೆಯ ಪ್ರಕಾರ 40,000 ಉದ್ಯೋಗಗಳನ್ನು ಕಳೆದುಕೊಂಡಿದ್ದೇವೆ ಮತ್ತು ಈ ವರದಿಯ ನಂತರ NSO ಸಮೀಕ್ಷೆಯನ್ನು ನಿಲ್ಲಿಸಲಾಯಿತು. ಭಾರತಕ್ಕೆ ಐಟಿ ಬೂಮ್ ಅನ್ನು ತಂದದ್ದು ಯುಪಿಎ ಸರ್ಕಾರ ಎಂದು ಅವರು ಗಮನಸೆಳೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com