ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು

ಗ್ಯಾರಂಟಿ ಯೋಜನೆಗಳ ಮೆಗಾ ಸಮೀಕ್ಷೆಗಾಗಿ ರಾಜ್ಯ ಸರ್ಕಾರದಿಂದ ಸ್ವಯಂ ಸೇವಕರ ನೇಮಕ

ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಖಾತ್ರಿ ಯೋಜನೆಗಳ ಅನುಷ್ಠಾನದ ಪರಿಣಾಮ ತಿಳಿಯಲು ಬೃಹತ್ ಸಮೀಕ್ಷೆ ನಡೆಸಲಿದೆ.
Published on

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಖಾತ್ರಿ ಯೋಜನೆಗಳ ಅನುಷ್ಠಾನದ ಪರಿಣಾಮ ತಿಳಿಯಲು ಬೃಹತ್ ಸಮೀಕ್ಷೆ ನಡೆಸಲಿದೆ.

ರಾಜ್ಯ ಸರಕಾರದ ಮಹತ್ವಕಾಂಕ್ಷೆಯ ಗೃಹಲಕ್ಷ್ಮಿ, ಶಕ್ತಿ, ಯುವನಿಧಿ, ಗೃಹಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಗಳು ಜನರಿಗೆ ಸರಿಯಾಗಿ ತಲುಪಿವೆಯೆ ಎಂಬ ಬಗ್ಗೆ ಸಮೀಕ್ಷೆ ನಡೆಸಲು ‘ಗ್ಯಾರಂಟಿ ಸ್ವಯಂ ಸೇವಕ’ರನ್ನು ನೇಮಿಸಲು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಇಲಾಖೆಗಳ ಸಿಬ್ಬಂದಿಗಳನ್ನು ‘ಗ್ಯಾರಂಟಿ ಸ್ವಯಂ-ಸೇವಕ’ರಾಗಿ ನೇಮಿಸಿ ಅವರು ಪ್ರತಿ ಮನೆ-ಮನೆಗೂ ಭೇಟಿ ನೀಡಿ ಗ್ಯಾರಂಟಿ ಯೋಜನೆಗಳು ತಲುಪಿರುವ ಬಗ್ಗೆ ಹಾಗೂ ಸದರಿ ಯೋಜನೆಗಳ ಬಗ್ಗೆ ಜನರ ಅಭಿಪ್ರಾಯ ಮತ್ತು ಅದರ ಸದ್ಬಳಕೆ ಆಗುತ್ತಿರುವ ಕುರಿತು ಒಂದು ಸಮೀಕ್ಷೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ.

ಸದರಿ ಕೆಲಸಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಇಲಾಖೆಗಳ ಸಿಬ್ಬಂದಿಗಳಿಗೆ ಹೆಚ್ಚುವರಿ ಪ್ರೋತ್ಸಾಹ ಧನವನ್ನು ನೀಡಬೇಕು. 1.2 ಲಕ್ಷ ‘ಗ್ಯಾರಂಟಿ ಸ್ವಯಂ ಸೇವಕ’ರಿಂದ 10 ರಿಂದ 15 ದಿನಗಳ ಅವಧಿಯಲ್ಲಿ ಒಂದು ಬಾರಿ ಒಬ್ಬರಿಗೆ ಮಾತ್ರ 1000 ರೂ.ನಂತೆ ಪ್ರೋತ್ಸಾಹಧನ ನೀಡಿ ಸಮೀಕ್ಷೆ ನಡೆಸಲು ಆದೇಶಿಸಿದೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು
ಗ್ಯಾರಂಟಿ ಯೋಜನೆ ಫಲಾನುಭವಿಗಳು ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವಂತೆ ಮಾಡುತ್ತಾರೆ!

ಸಮೀಕ್ಷೆ ಕಾರ್ಯ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ನಡೆಯತಕ್ಕದ್ದು. ಈ ಸಮೀಕ್ಷೆಗೆ ಪ್ರತಿ ‘ಗ್ಯಾರಂಟಿ ಸ್ವಯಂ ಸೇವಕ’ರಿಗೆ 100 ರಿಂದ 120 ಮನೆಗಳನ್ನು ಹಂಚಿಕೆ ಮಾಡುವುದು. ಇದಕ್ಕೆ ತಗಲುವ ವೆಚ್ಚ 12ಕೋಟಿ ರೂ.ಗಳನ್ನು ಗೃಹಲಕ್ಷ್ಮಿ ಯೋಜನೆಯ ಲೆಕ್ಕ ಶೀರ್ಷಿಕೆಯಡಿ ಒದಗಿಸಲಾಗಿರುವ ಅನುದಾನದಲ್ಲಿ ಭರಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ

2024-25ರ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಜ್ಯೋತಿ, ಅನ್ನ ಭಾಗ್ಯ, ಶಕ್ತಿ, ಯುವ ನಿಧಿ ಮತ್ತು ಗೃಹ ಲಕ್ಷ್ಮಿ ಯೋಜನೆಗಳಿಗೆ 52,000 ಕೋಟಿ ರೂ. ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಖಾತ್ರಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು.

ಸಮೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಸಮೀಕ್ಷೆ ನಡೆಸಲಿದೆ. ಖಾತ್ರಿ ಯೋಜನೆಗಳ ಮೂಲಕ ಪ್ರತಿ ಕುಟುಂಬಕ್ಕೆ ಸರಾಸರಿ 55,000 ರೂ.ಗಳನ್ನು ಪ್ರತಿ ವರ್ಷ ವರ್ಗಾಯಿಸಲಾಗುವುದು ಎಂದು ಸಿಎಂ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com