ನೀಲಗಿರಿ ತೋಟದ ಮೇಲಿನ ನಿಷೇಧ ಹಿಂಪಡೆಯುವ ಬಗ್ಗೆ ನಿರ್ಧರಿಸಲು ಉನ್ನತ ಮಟ್ಟದ ಸಮಿತಿ ರಚನೆಗೆ ನಿರ್ಧಾರ

ನೀಲಗಿರಿ ತೋಟದ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಬೇಕೇ ಅಥವಾ ಭದ್ರಾವತಿ ಎಂಪಿಎಂ ಕಾರ್ಖಾನೆಯ ಪುನಶ್ಚೇತನಕ್ಕೆ ಅನುಕೂಲವಾಗುವಂತೆ ಪರ್ಯಾಯ ಮಾರ್ಗಗಳನ್ನು ಹುಡುಕಬೇಕೆ ಎಂಬುದನ್ನು ನಿರ್ಧರಿಸಲು ರಾಜ್ಯ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಿದೆ.
ಸಚಿವ ಎಂಬಿ ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆ
ಸಚಿವ ಎಂಬಿ ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆ

ಬೆಂಗಳೂರು: ನೀಲಗಿರಿ ತೋಟದ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಬೇಕೇ ಅಥವಾ ಭದ್ರಾವತಿ ಎಂಪಿಎಂ ಕಾರ್ಖಾನೆಯ ಪುನಶ್ಚೇತನಕ್ಕೆ ಅನುಕೂಲವಾಗುವಂತೆ ಪರ್ಯಾಯ ಮಾರ್ಗಗಳನ್ನು ಹುಡುಕಬೇಕೆ ಎಂಬುದನ್ನು ನಿರ್ಧರಿಸಲು ರಾಜ್ಯ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಿದೆ.

ಮೈಸೂರು ಪೇಪರ್ ಮಿಲ್ ಲಿಮಿಟೆಡ್ (ಎಂಪಿಎಂ) ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಬುಧವಾರ ಕರೆದಿದ್ದ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ವಿಧಾನಸೌಧದ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ, ಭದ್ರಾವತಿ ಶಾಸಕ ಸಂಗಮೇಶ್‌ ಉಪಸ್ಥಿತರಿದ್ದರು.

ಸಭೆಯ ನಂತರ ಮಾತನಾಡಿದ ಈಶ್ವರ ಖಂಡ್ರೆ, ಅರಣ್ಯ ಇಲಾಖೆಯಿಂದ ಇಂದು ತಜ್ಞರ ಸಮಿತಿ ರಚನೆ ಮಾಡಲಿದ್ದು, ಒಂದು ತಿಂಗಳೊಳಗೆ ಸಮಗ್ರ ವರದಿ ನೀಡುವಂತೆ ಕೋರಲಾಗುವುದು ಎಂದರು.

ಸಚಿವ ಎಂಬಿ ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆ
ನೀಲಗಿರಿ ಬೆಳೆಯ ಮೇಲಿನ ನಿಷೇಧ ಹಿಂಪಡೆಯಲು ಸರ್ಕಾರಕ್ಕೆ ಮನವಿ: ತಾರಾ ಅನುರಾಧ

‘ಭದ್ರಾವತಿ ಕಾಗದ ಕಾರ್ಖಾನೆಗೆ 2020ರಲ್ಲಿ ಒಟ್ಟು 20,005 ಹೆಕ್ಟೇರ್ ಅರಣ್ಯ ಭೂಮಿಯನ್ನು ನೀಲಗಿರಿ ಬೆಳೆಯಲು 40 ವರ್ಷಗಳ ಗುತ್ತಿಗೆಗೆ ನೀಡಲಾಗಿದೆ. ಆದರೆ, ಕೇಂದ್ರ ಸರ್ಕಾರದ ಅನುಮತಿ ಇಲ್ಲದೆ ಅರಣ್ಯ ಭೂಮಿ ನೀಡಲು ಸಾಧ್ಯವಿಲ್ಲ. ಮತ್ತೊಂದೆಡೆ, ಅಗತ್ಯವಿರುವ ಕಚ್ಚಾ ವಸ್ತುವನ್ನು ಪಡೆಯದೆ ಕಾರ್ಖಾನೆಯನ್ನು ನಡೆಸಲು ಸಾಧ್ಯವಾಗುವುದಿಲ್ಲ. ಈ ಸಂಕಷ್ಟದ ಪರಿಸ್ಥಿತಿಯನ್ನು ಪರಿಹರಿಸಬೇಕಾಗಿದೆ' ಎಂದು ಹೇಳಿದರು.

ಎಂಪಿಎಂ ಕಾರ್ಯಾಚರಣೆಗೆ ಪ್ರತಿ ವರ್ಷ 10 ಲಕ್ಷ ಟನ್ ಕಚ್ಚಾವಸ್ತುಗಳ ಅಗತ್ಯವಿದ್ದು, ಕಾರ್ಖಾನೆಗೆ ನೀಡಿರುವ ಭೂಮಿಯಿಂದ ಪ್ರಸ್ತುತ ಕೇವಲ ಎರಡು ಲಕ್ಷ ಟನ್ ಮಾತ್ರ ಲಭ್ಯವಾಗುತ್ತಿದೆ. ರಾಜ್ಯದಲ್ಲಿ ನೀಲಗಿರಿ ನೆಡುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಹೊಸ ಆಯ್ಕೆಯನ್ನು ಕಂಡುಕೊಳ್ಳುವಂತೆ ಸಂಬಂಧಿಸಿದವರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಸಚಿವ ಎಂಬಿ ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆ
ನೀಲಗಿರಿ ಮರ ಬೆಳೆಯಲು ಸರ್ಕಾರ ಅವಕಾಶ ನೀಡುವುದಿಲ್ಲ :ಸಿದ್ದರಾಮಯ್ಯ

ಶಿವಮೊಗ್ಗದ ಸುತ್ತಮುತ್ತಲಿನ ಜಿಲ್ಲೆಗಳಲ್ಲಿಯೂ ನೀಲಗಿರಿ ತೋಟಗಳಿಗೆ ಅನುಮತಿ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದ್ದು, ಪ್ರಸ್ತಾವಿತ ಸಮಿತಿಯು ಈ ಬಗ್ಗೆ ಅಗತ್ಯ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಎಂಬಿ ಪಾಟೀಲ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com