ಹುಬ್ಬಳ್ಳಿ: ಪಾಲಿಕೊಪ್ಪದಲ್ಲಿ ಶೃಂಗೇರಿ ಜಗದ್ಗುರುಗಳಿಂದ ಶಿವಶಕ್ತಿ ಧಾಮ ಲೋಕಾರ್ಪಣೆ

ಶ್ರೀ ಶಿವಶಕ್ತಿ ಧಾಮದ ಲೋಕಾರ್ಪಣೆಯು ಗುರುವಾರ ವಿಧ್ಯುಕ್ತವಾಗಿ ನೆರವೇರಿತು.
ಉದ್ಘಾಟನೆಗೊಂಡ ಶಿವಶಕ್ತಿ ಧಾಮ ದೇವಾಲಯ
ಉದ್ಘಾಟನೆಗೊಂಡ ಶಿವಶಕ್ತಿ ಧಾಮ ದೇವಾಲಯ
Updated on

ಹುಬ್ಬಳ್ಳಿ: ವಿಆರ್​ಎಲ್​ ಸಮೂಹ ಸಂಸ್ಥೆಗಳ ಚೇರ್ಮನ್​ ಡಾ. ವಿಜಯ ಸಂಕೇಶ್ವ ಅವರ ಬಹುದಿನಗಳ ಸಂಕಲ್ಪ ಸಾಕಾರಗೊಂಡಿದೆ. ಶ್ರೀ ಶಿವಶಕ್ತಿ ಧಾಮದ ಲೋಕಾರ್ಪಣೆಯು ಗುರುವಾರ ವಿಧ್ಯುಕ್ತವಾಗಿ ನೆರವೇರಿತು.

ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳುಶಿವಶಕ್ತಿಧಾಮವನ್ನು ಉದ್ಘಾಟಿಸಿದರು. ಗುರುವಾರ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಆರಂಭವಾದ ಧಾರ್ಮಿಕ ವಿಧಿವಿಧಾನಗಳು ಅಂತಿಮವಾಗಿ ಜಗದ್ಗುರುಗಳ ಅಮೃತ ಹಸ್ತದಿಂದ ಬ್ರಹ್ಮಕಲಶತೀರ್ಥದ ಅಭಿಷೇಕ ಹಾಗೂ ಮಹಾಪೂಜೆಯೊಂದಿಗೆ ಸಂಪನ್ನಗೊಂಡವು. ಬೃಹತ್​ ಗರ್ಭಗೋಪುರ ಮತ್ತು ರಾಜಗೋಪುರದ ಮೇಲೆ ಪ್ರತಿಷ್ಠಾಪಿಸಲಾಗಿರುವ ಪಂಚಕಲಶಗಳಿಗೆ ಸ್ವತಃ ಜಗದ್ಗುರುಗಳು ಅಭಿಷೇಕ ಮಾಡಿ ಪೂಜೆ ಸಲ್ಲಿಸಿದರು.

ಹಿಂದು ಸಂಸ್ಕೃತಿಯ ಪ್ರಚಾರ ಮತ್ತು ಐಕ್ಯತೆ ದೃಷ್ಟಿಯಿಂದ ಹುಬ್ಬಳ್ಳಿ ಸಮೀಪದ ಪಾಲಿಕೊಪ್ಪದಲ್ಲಿ ನಿಮಿರ್ಸಲಾಗಿರುವ ದೇವಾಲಯಗಳ ಸಮುಚ್ಛಯಕ್ಕೆ “ಶ್ರೀಶಿವಶಕ್ತಿ ಧಾಮ’ ಎಂದು ನಾಮಕರಣ ಮಾಡಿದ ಶೃಂಗೇರಿ ಜಗದ್ಗುರುಗಳು, ಈ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಗೊಂಡಿರುವ ಶಿವಲಿಂಗಕ್ಕೆ “ಆನಂದೇಶ್ವರ’, ಚಂಡಿಕೇಶ್ವರಿ ಮಾತೆಗೆ “ಜ್ಞಾನಾಂಬಿಕೆ’, ವಿನಾಯಕನಿಗೆ “ವಿಜಯ ಗಣಪತಿ’ ಎಂದು ನಾಮಕರಣ ಮಾಡಿದ್ದಾರೆ.

ಉದ್ಘಾಟನೆಗೊಂಡ ಶಿವಶಕ್ತಿ ಧಾಮ ದೇವಾಲಯ
ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಿಗೆ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ ಹೆಸರಿಡಲು ಸರ್ಕಾರ ಚಿಂತನೆ

6.5 ಎಕರೆಯಲ್ಲಿ ಹರಡಿರುವ ಈ ಸಂಕೀರ್ಣವನ್ನು ಹುಬ್ಬಳ್ಳಿಯಿಂದ 25 ಕಿಮೀ ದೂರದಲ್ಲಿರುವ ಪಾಲಿಕೊಪ್ಪ ಗ್ರಾಮದಲ್ಲಿ ಆರಾಧನಾ ಟ್ರಸ್ಟ್‌ನಿಂದ ಅಭಿವೃದ್ಧಿಪಡಿಸಲಾಗಿದೆ, ಇದುವರೆಗೆ ವಿಆರ್‌ಎಲ್ ಲಾಜಿಸ್ಟಿಕ್ಸ್ ಅಧ್ಯಕ್ಷ ಮತ್ತು ಮಾಜಿ ಸಂಸದ ವಿಜಯ ಸಂಕೇಶ್ವರ್ ಅವರ ಕುಟುಂಬದವರು ನಿರ್ವಹಿಸುತ್ತಿದ್ದರು. ಇನ್ನೂ ಮುಂದೆ ಸಂಕೀರ್ಣದ ಆಡಳಿತವನ್ನು ಶೃಂಗೇರಿ ಶಾರದಾ ಪೀಠದ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಕ್ಕೆ ಹಸ್ತಾಂತರಿಸಲಾಗಿದೆ.

ಈ ದೇವಾಲಯಗಳನ್ನು ತಮಿಳುನಾಡಿನ ವಾಸ್ತುಶಿಲ್ಪಿ ಕೆ ಸ್ವಾಮಿನಾಥನ್ ಸ್ಥಾಪತಿ ಅವರು ದಕ್ಷಿಣ ಭಾರತದ ದ್ರಾವಿಡ ಶೈಲಿಯಲ್ಲಿ ನಿರ್ಮಿಸಿದ್ದಾರೆ. ಮಧುರೈನ 50 ಶಿಲ್ಪಿಗಳು ದೇವಾಲಯದ ಕೆಲಸವನ್ನು ಪೂರ್ಣಗೊಳಿಸಲು ನಾಲ್ಕು ವರ್ಷಗಳ ಕಾಲ ತೆಗೆದುಕೊಂಡರು.

ದೇವಸ್ಥಾನಕ್ಕೆ ದೊಡ್ಡಬಳ್ಳಾಪುರದ ಕಲ್ಲುಗಳನ್ನು ಬಳಸಲಾಗಿದೆ. ತಮಿಳುನಾಡಿನ ವಾಲಾಜಾಬಾದ್‌ನಿಂದ ಕಪ್ಪು ಕಲ್ಲುಗಳನ್ನು ತಂದು ವಿಗ್ರಹಗಳನ್ನು ಕೆತ್ತಲಾಗಿದೆ. ಕುಂಭಕೋಣಂನಿಂದ ಕಲಶ, ಪ್ರಭಾವಳಿ ಮತ್ತಿತರರನ್ನು ತರಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com