ಬೆಂಗಳೂರು: ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಇಬ್ಬರು ಬಾಂಗ್ಲಾದೇಶಿಯರನ್ನು ಬಂಧಿಸಿದ ಎನ್‌ಐಎ

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಾಂಗ್ಲಾದೇಶದ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಾಂಗ್ಲಾದೇಶದ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಕೇಂದ್ರೀಯ ಭಯೋತ್ಪಾದನಾ ನಿಗ್ರಹ ಸಂಸ್ಥೆ ನಡೆಸಿದ ಬೃಹತ್ ಶೋಧದ ನಂತರ ಪರಾರಿಯಾಗಿದ್ದ ಮೊಹಮ್ಮದ್ ಸಜ್ಜಿದ್ ಹಲ್ದಾರ್ ಮತ್ತು ಇದ್ರಿಸ್ ಅವರನ್ನು ಕರ್ನಾಟಕದಲ್ಲಿ ಬಂಧಿಸಲಾಗಿದೆ ಎಂದು ಎನ್‌ಐಎ ಶುಕ್ರವಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

'ಇಬ್ಬರು ಆರೋಪಿಗಳು ಪರಾರಿಯಾಗಿದ್ದರು ಮತ್ತು ಕರ್ನಾಟಕ ಪೊಲೀಸರ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಸಹಾಯದಿಂದ ಗುರುವಾರ ರಾತ್ರಿ ಅವರನ್ನು ಪತ್ತೆಹಚ್ಚಿ, ಬಂಧಿಸಲಾಯಿತು' ಎಂದು ಸಂಸ್ಥೆ ಹೇಳಿದೆ.

ಪ್ರಾತಿನಿಧಿಕ ಚಿತ್ರ
ಬೆಂಗಳೂರು: NIA ದಾಳಿ ವೇಳೆ ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳು ಬಂಧನ

2023ರ ನವೆಂಬರ್‌ನಲ್ಲಿ ಎನ್ಐಎ ಈ ದಂಧೆಯನ್ನು ಭೇದಿಸಿತ್ತು. ಪ್ರಕರಣದ ತನಿಖೆ ವೇಳೆ ಹಲ್ದಾರ್ ಮತ್ತು ಇದ್ರಿಸ್ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಬೆನಾಪೋಲ್ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದರು. ಬೆಂಗಳೂರು ನಗರದಲ್ಲಿ ತ್ಯಾಜ್ಯ ವಿಂಗಡಣೆ ಘಟಕಗಳನ್ನು ಸ್ಥಾಪಿಸಿದ್ದರು ಮತ್ತು ಇತರ ಆಪಾದಿತ ಬಾಂಗ್ಲಾದೇಶಿ ಪ್ರಜೆಗಳನ್ನು ಸಹ ತಮ್ಮ ರಹಸ್ಯ ಕಾರ್ಯಾಚರಣೆಗಳಲ್ಲಿ ನೇಮಿಸಿಕೊಂಡಿದ್ದರು ಎಂಬುದು ತಿಳಿದುಬಂದಿತ್ತು.

ಹಲ್ದಾರ್ ಅವರು ಬೆಂಗಳೂರಿನ ರಾಮಮೂರ್ತಿ ನಗರದ ಕೆ ಚನ್ನಸಂದ್ರದಲ್ಲಿ ಹಲ್ದಾರ್ ತ್ಯಾಜ್ಯ ಸಂಗ್ರಹಣೆ ಮತ್ತು ವಿಂಗಡನೆ ಘಟಕವನ್ನು ಸ್ಥಾಪಿಸಿದ್ದರು ಮತ್ತು ಇತರ ಬಾಂಗ್ಲಾದೇಶಿ ಪ್ರಜೆಗಳಿಗೆ ಉದ್ಯೋಗ ನೀಡಿದ್ದರು. ಅಲ್ಲದೆ, ಇದ್ರಿಸ್ ಅವರು ನಗರದ ಆನಂದಪುರದಲ್ಲಿ ತ್ಯಾಜ್ಯ ಸಂಗ್ರಹಣೆ ಮತ್ತು ವಿಂಗಡನೆ ಘಟಕವನ್ನು ಸ್ಥಾಪಿಸಿದ್ದರು. ಅಲ್ಲಿ ಆತ ಭೂಮಿಯನ್ನು ಗುತ್ತಿಗೆಗೆ ಪಡೆದು 20ಕ್ಕೂ ಹೆಚ್ಚು ಬಾಂಗ್ಲಾದೇಶಿ ಕುಟುಂಬಗಳಿಗೆ ಟೆಂಟ್ ಹಾಕಿದ್ದರು. ಬಳಿಕ ಅವರನ್ನು ಆತ ಕಳ್ಳಸಾಗಣೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಈ ವಿವರಗಳನ್ನು ದೃಢೀಕರಿಸಲು ತನಿಖೆ ಮುಂದುವರಿದಿದೆ.

ಕರ್ನಾಟಕ ಮೂಲದ ಕೆಲವು ವ್ಯಕ್ತಿಗಳು ಅಸ್ಸಾಂ, ತ್ರಿಪುರಾ ಮತ್ತು ಗಡಿಯಾಚೆಗಿನ ದೇಶಗಳಲ್ಲಿ ಮಾನವ ಕಳ್ಳಸಾಗಣೆದಾರರೊಂದಿಗೆ ಸಂಪರ್ಕ ಹೊಂದಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ನಂತರ ಕಳೆದ ವರ್ಷ ನವೆಂಬರ್ 7ರಂದು ಎನ್ಐಎ ಪ್ರಕರಣವನ್ನು (RC-01/2023/NIA/BLR) ದಾಖಲಿಸಿತ್ತು.

ಪ್ರಾತಿನಿಧಿಕ ಚಿತ್ರ
ಅಕ್ರಮ ವಲಸಿಗರ ವಿರುದ್ಧ ಸಿಸಿಬಿ ಕಾರ್ಯಾಚರಣೆ: 30 ಬಾಂಗ್ಲಾದೇಶಿ ವಲಸಿಗರ ಬಂಧನ

'ಇಂಡೋ-ಬಾಂಗ್ಲಾದೇಶ ಗಡಿಯ ಮೂಲಕ ಭಾರತಕ್ಕೆ ವ್ಯಕ್ತಿಗಳನ್ನು ಕಳ್ಳಸಾಗಣೆ ಮಾಡುವಲ್ಲಿ ತೊಡಗಿರುವ ಕಳ್ಳಸಾಗಾಣಿಕೆದಾರರ ದೊಡ್ಡ ಜಾಲವನ್ನು ಈ ಸಂಪರ್ಕಗಳು ಬಹಿರಂಗಪಡಿಸಿವೆ. ಆರೋಪಿಗಳು ಸಂತ್ರಸ್ತರಿಗೆ ನಕಲಿ ಆಧಾರ್ ಕಾರ್ಡ್‌ಗಳನ್ನು ತಯಾರಿಸುವಲ್ಲಿ ಮತ್ತು ಒದಗಿಸುವಲ್ಲಿ ಭಾಗಿಯಾಗಿದ್ದಾರೆ ಎಂದು ಎನ್‌ಐಎ ಹೇಳಿದೆ.

ಈ ಹಿಂದೆ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ (ಯುಎಪಿಎ) 1967 ರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ 12 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿ, ಚಾರ್ಜ್‌ಶೀಟ್ ಹಾಕಲಾಗಿತ್ತು. ಇದೀಗ ಸಂಸ್ಥೆಯು ಇಂಡೋ-ಬಾಂಗ್ಲಾದೇಶ ಗಡಿಯಾದ್ಯಂತ ಸಕ್ರಿಯವಾಗಿರುವ ಮಾನವ ಕಳ್ಳಸಾಗಣೆದಾರರ ವಿರುದ್ಧ ಕಠಿಣ ಕ್ರಮವನ್ನು ಮುಂದುವರೆಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com