ಟಿಕೆಟ್ ರಹಿತ ಪ್ರಯಾಣ: 7.83 ಲಕ್ಷ ರೂ. ದಂಡ ವಸೂಲಿ ಮಾಡಿದ ಬಿಎಂಟಿಸಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ 2024ರ ಜನವರಿಯಲ್ಲಿ ಒಟ್ಟು ರೂ.7,83,570 ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.
ಬಿಎಂಟಿಸಿ ಬಸ್
ಬಿಎಂಟಿಸಿ ಬಸ್

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ 2024ರ ಜನವರಿಯಲ್ಲಿ ಒಟ್ಟು ರೂ.7,83,570 ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಟಿಸಿ, ”ಸಂಸ್ಥೆಯ ಆದಾಯ ಸೋರಿಕೆ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಸ್ಥೆಯ ತನಿಖಾ ತಂಡ ಜನವರಿ ತಿಂಗಳಿನಲ್ಲಿ ಕಾರ್ಯಾಚರಣೆ ನಡೆಸಿದೆ. ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ತಪಾಸಣೆ ನಡೆಸಿವೆ” ಎಂದು ಹೇಳಿದೆ.

ಬಿಎಂಟಿಸಿ ಬಸ್
ಬಿಎಂಟಿಸಿ ಬಸ್'ನಲ್ಲಿ ಕಿಟಕಿ ತೆರೆಯುವ ವಿಚಾರಕ್ಕೆ ಜಗಳ: ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಮಹಿಳೆಯರು

”ಜನವರಿಯಲ್ಲಿ ಒಟ್ಟು 17,967 ಟ್ರಿಪ್‌ಗಳನ್ನು ತಪಾಸಣೆ ನಡೆಸಿ, 3,696 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಲಾಗಿದೆ. ಅವರಿಂದ ಒಟ್ಟು ರೂ.7,35,870 ದಂಡ ವಸೂಲಿ ಮಾಡಲಾಗಿದೆ. ಸಂಸ್ಥೆಯ ನಿರ್ವಾಹಕರ ವಿರುದ್ಧ 1177 ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ತಿಳಿಸಿದೆ.

”ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 477 ಪುರುಷ ಪ್ರಯಾಣಿಕರಿಂದ ಒಟ್ಟು ರೂ.47,700 ಅನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ. ಒಟ್ಟಾರೆಯಾಗಿ, ಡಿಸೆಂಬರ್‌ ತಿಂಗಳಿನಲ್ಲಿ 4173 ಪ್ರಯಾಣಿಕರಿಂದ ಒಟ್ಟು ರೂ.7,83,570 ದಂಡವನ್ನು ವಸೂಲಿ ಮಾಡಲಾಗಿದೆ” ಎಂದು ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com