ರಾಜಕೀಯ ಪಕ್ಷಗಳನ್ನು ಸಹ ಆರೋಪಿ ಸ್ಥಾನದಲ್ಲಿ ನಿಲ್ಲಿಸಬಹುದು: ಹೈಕೋರ್ಟ್

ಬಿಜೆಪಿ ವಿರುದ್ಧ ಮಾನನಷ್ಠ ಮೊಕದ್ದಮೆ ಕೇಸು ಮುಂದುವರಿಕೆ
ಹೈಕೋರ್ಟ್
ಹೈಕೋರ್ಟ್
Updated on

ಬೆಂಗಳೂರು: ರಾಜಕೀಯ ಪಕ್ಷವನ್ನೂ ಆರೋಪಿಯನ್ನಾಗಿ ಮಾಡಬಹುದೆಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿರುವುದರಿಂದ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ವಿಚಾರಣೆ ಮುಂದುವರೆಯಲಿದೆ

ಬಿಜೆಪಿಯ ವಾದವನ್ನು ತಳ್ಳಿಹಾಕಿದ ಹೈಕೋರ್ಟ್, ಒಬ್ಬ ವ್ಯಕ್ತಿ ಮಾತ್ರವಲ್ಲ, ರಾಜಕೀಯ ಪಕ್ಷಗಳಂತಹ ಘಟಕಗಳು ಸೇರಿದಂತೆ ವ್ಯಕ್ತಿಗಳ ಸಂಘಗಳ ವಿರುದ್ಧವೂ ಕ್ರಿಮಿನಲ್ ಮಾನನಷ್ಟ ಪ್ರಕರಣಗಳಲ್ಲಿ ಆರೋಪಿಯೆಂದು ನಿರ್ಧಾರಕ್ಕೆ ಬರಬಹುದು ಎಂದು ಹೇಳಿದೆ.

ಐಪಿಸಿ ಸೆಕ್ಷನ್ 499 ಮತ್ತು 500 ಸೆಕ್ಷನ್‌ಗಳಲ್ಲಿ 'ಯಾರು' ಎಂಬ ಪದವು ಸೂಚ್ಯವಾಗಿ ವ್ಯಕ್ತಿಗಳ ಸಂಘವನ್ನು ಒಳಗೊಂಡಿರುತ್ತದೆ, ಇದರಲ್ಲಿ ಅರ್ಜಿದಾರರಂತೆಯೇ ಸಂಘಟಿತರಾಗಿದ್ದರೂ ಅಥವಾ ಇಲ್ಲದಿದ್ದರೂ ಮತ್ತು ಅಂತಹ ಘಟಕಗಳನ್ನು ಕ್ರಿಮಿನಲ್ ಪ್ರಕ್ರಿಯೆಗಳಲ್ಲಿ ಆರೋಪಿಗಳೆಂದು ಹೇಳಬಹುದು ಎಂದು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು, ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ಬಿಜೆಪಿಯ ಅಂದಿನ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದರು.

2019 ರಲ್ಲಿ ಬಿಜೆಪಿ ತನ್ನ ವಿರುದ್ಧ ಮಾಡಿದ ಅವಹೇಳನಕಾರಿ ಟ್ವೀಟ್‌ ನ್ನು ಪ್ರಶ್ನಿಸಿ ಸೆಕ್ಷನ್ 499 ರ ಅಡಿಯಲ್ಲಿ ರಿಜ್ವಾನ್ ಅವರು ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ ನಗರದ ಮಾಜಿ ಮತ್ತು ಹಾಲಿ ಸಂಸದರು ಮತ್ತು ಶಾಸಕರ ವಿರುದ್ಧ ಪ್ರಕರಣಗಳನ್ನು ವಿಚಾರಣೆ ಮಾಡಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣವನ್ನು ಪ್ರಶ್ನಿಸಿ ಬಿಜೆಪಿ ನ್ಯಾಯಾಲಯದ ಮೆಟ್ಟಿಲೇರಿತ್ತು.

ಹೈಕೋರ್ಟ್
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ಅಂಜಾರಿಯಾ ನೇಮಕ

ಬಿಜೆಪಿಯು ತಾನು ಒಂದು ರಾಜಕೀಯ ಪಕ್ಷವಾಗಿದ್ದು ವ್ಯಕ್ತಿಯಲ್ಲ, ಘಟಕಗಳು ಐಪಿಸಿಯ 499 ಮತ್ತು 500 ಸೆಕ್ಷನ್‌ಗಳಲ್ಲಿ 'ಯಾರು' ಎಂಬ ಪದಕ್ಕೆ ಹೊಂದಿಕೆಯಾಗುವುದಿಲ್ಲ ಮತ್ತು ಆದ್ದರಿಂದ, ಅಂತಹ ಪ್ರಕ್ರಿಯೆಗಳನ್ನು ನಿರ್ವಹಿಸಲಾಗುವುದಿಲ್ಲ.

ಆದಾಗ್ಯೂ, ಖಾಸಗಿ ವ್ಯಕ್ತಿಗಳಿಗಿಂತ ಭಿನ್ನವಾಗಿ, ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳು ಪ್ರಜ್ಞಾಪೂರ್ವಕವಾಗಿ ಸಾರ್ವಜನಿಕರಿಂದ ನಿಕಟ ಪರಿಶೀಲನೆಗೆ ತಮ್ಮನ್ನು ಒಡ್ಡಿಕೊಳ್ಳುತ್ತಿರುತ್ತಾರೆ. ಆದ್ದರಿಂದ ಅವರು ಹೆಚ್ಚಿನ ಮಟ್ಟದ ಸಹಿಷ್ಣುತೆಯನ್ನು ಪ್ರದರ್ಶಿಸಬೇಕು ಎಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com