ಸಂವಿಧಾನ ವಿರೋಧಿಗಳಿಂದ ಅಪ ಪ್ರಚಾರ: ಸಿಎಂ ಸಿದ್ದರಾಮಯ್ಯ

ಸಂವಿಧಾನವು ದಲಿತರ ಉದ್ಧಾರಕ್ಕೆ ಮಾತ್ರವೇ ಹೊರತು ಸಾಮಾಜಿಕ-ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿಲ್ಲ ಎಂಬ ಅಪ ಪ್ರಚಾರ ಬಹಳ ದಿನಗಳಿಂದ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತಿತರರು
ಸಿಎಂ ಸಿದ್ದರಾಮಯ್ಯ ಮತ್ತಿತರರು

ಬೆಂಗಳೂರು: ಸಂವಿಧಾನವು ದಲಿತರ ಉದ್ಧಾರಕ್ಕೆ ಮಾತ್ರವೇ ಹೊರತು ಸಾಮಾಜಿಕ-ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿಲ್ಲ ಎಂಬ ಅಪ ಪ್ರಚಾರ ಬಹಳ ದಿನಗಳಿಂದ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ಈ ನಕಾರಾತ್ಮಕ ಅಪ ಪ್ರಚಾರವನ್ನು ಸಹಿಸಬಾರದು ಎಂದರು.

ಸಂವಿಧಾನ ವಿರೋಧಿಗಳು ಅಪ ಪ್ರಚಾರದಲ್ಲಿ ತೊಡಗಿದ್ದಾರೆ ಎಂಬುದನ್ನು ಅರಿತುಕೊಳ್ಳಬೇಕು; ಸಂವಿಧಾನವು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸ್ಪಷ್ಟವಾಗಿ ಹೇಳುತ್ತದೆ. 1950ರ ಜನವರಿ 26ರಿಂದ ಈ ಅಪ ಪ್ರಚಾರ ಜಾರಿಯಲ್ಲಿದೆ. ಇದನ್ನು ಸಹಿಸಬಾರದು.ಸಂವಿಧಾನ ರಕ್ಷಣೆಯಾದರೆ ನಾವೆಲ್ಲ ಬದುಕುತ್ತೇವೆ.ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಕೆ ನೀಡಿದರು.

''ಸಂವಿಧಾನ ಯಶಸ್ವಿಯಾಗಬೇಕಾದರೆ ಯಾರ ಕೈಯಲ್ಲಿ ಅಧಿಕಾರವಿದೆ ಎಂಬುದು ಮುಖ್ಯ, ಸಂವಿಧಾನ, ಸಮಾನತೆ, ಮಾನವೀಯ ಸಮಾಜ ನಿರ್ಮಾಣ ಮಾಡುವವರ ಕೈಯಲ್ಲಿದ್ದರೆ ಸಂವಿಧಾನ ಯಶಸ್ವಿಯಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

ಸಿಎಂ ಸಿದ್ದರಾಮಯ್ಯ ಮತ್ತಿತರರು
ಮಣ್ಣಿನ ಮಕ್ಕಳು ಎನ್ನುವವರು ಎತ್ತಿನಹೊಳೆ ಯೋಜನೆ ವಿರೋಧಿಸಿದ್ದರು: ಸಿಎಂ ಸಿದ್ದರಾಮಯ್ಯ

ಸಾಮಾಜಿಕ ಅಸಮಾನತೆ ಹೋಗಲಾಡಿಸುವುದು ಪ್ರತಿ ಸರ್ಕಾರದ ಜವಾಬ್ದಾರಿಯಾಗಿದೆ. ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯಿರುವ ಸಮಾಜದಲ್ಲಿ, ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ರಾಜಕೀಯ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com