ಆನೇಕಲ್ ನಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ಬೆಂಗಳೂರಿನ ಕೂಗಳತೆ ದೂರದಲ್ಲಿರುವ ಆನೇಕಲ್ ನಲ್ಲಿ ರೌಡಿ ಶೀಟರ್ ಓರ್ವನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಭೀಕರವಾಗಿ ಹತ್ಯೆಗೈದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರಿನ ಕೂಗಳತೆ ದೂರದಲ್ಲಿರುವ ಆನೇಕಲ್ ನಲ್ಲಿ ರೌಡಿ ಶೀಟರ್ ಓರ್ವನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಭೀಕರವಾಗಿ ಹತ್ಯೆಗೈದಿದ್ದಾರೆ.

ಹಲ್ಲೆ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಮುಖ ಸಾಕ್ಷಿಯಾಗಿದ್ದ ವ್ಯಕ್ತಿಗೆ ಬೆದರಿಕೆ ಹಾಕಲು ಯತ್ನಿಸಿದ ರೌಡಿ ಶೀಟರ್ ನನ್ನು ಆತನ ಸ್ನೇಹಿತರೇ ಕೊಲೆ ಮಾಡಿದ್ದಾರೆ. ನಗರದ ಹೊರವಲಯದ ಆನೇಕಲ್‌ನ ವೀವರ್ಸ್ ಕಾಲೋನಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಮೃತ ರೌಡಿಶೀಟರ್ ನನ್ನು ಮಂಜುನಾಥ್ ಅಲಿಯಾಸ್ ಮೆಂಟಲ್ ಮಂಜ ಎಂದು ಗುರುತಿಸಲಾಗಿದೆ. ಅಂತೆಯೇ ಕೊಲೆ ಪ್ರಕರಣ ಸಂಬಂದ ಇಬ್ಬರು ಆರೋಪಿಗಳನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಬೆಂಗಳೂರು: ಪತ್ನಿ ಕೊಂದು ಆತ್ಮಹತ್ಯೆ ಎಂದು ಗೋಳಾಡಿ ಅತ್ತಿದ್ದ ಪತಿ ಬಂಧನ; ತನಿಖೆ ವೇಳೆ ಬಯಲಾಯ್ತು 2 ಕೊಲೆ ಪ್ರಕರಣ!

ಮೃತ ಮಂಜುನಾಥ್ ವಿರುದ್ದ ಎಂಟು ಕ್ರಿಮಿನಲ್ ಪ್ರಕರಣಗಳಿವೆ ಎಂದು ಹೇಳಲಾಗಿದೆ. ಎಂಟು ಪ್ರಕರಣಗಳ ಪೈಕಿ ಮಂಜುನಾಥ್ ವಿರುದ್ಧ ಕೊಲೆ ಮತ್ತು ದರೋಡೆ ಪ್ರಕರಣವೂ ದಾಖಲಾಗಿದೆ. ಈತನನ್ನು ಟ್ಯಾಟೂ ವಿಜಿ ಮತ್ತು ಶಶಿಕುಮಾರ್ ಎಂಬುವವರು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಠಾಣೆಯೊಂದರಲ್ಲಿ ಮಂಜುನಾಥ್ ವಿರುದ್ಧ ದಾಖಲಾಗಿದ್ದ ಹಲ್ಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಲ್ಲಿ ವಿಜಿ ಪ್ರಮುಖ ಸಾಕ್ಷಿಯಾಗಿದ್ದರು. ವಿಜಿ ವಿರುದ್ಧವೂ ಕೊಲೆ ಯತ್ನ, ಹಲ್ಲೆ ಪ್ರಕರಣಗಳಿವೆ.

ಸಾಕ್ಷಿ ಹೇಳದಂತೆ ಎಚ್ಚರಿಕೆ ನೀಡಿದ್ದ ಮಂಜ

ಮಂಜುನಾಥ್ ವಿರುದ್ಧ ಆರು ತಿಂಗಳ ಹಿಂದೆ ಹಲ್ಲೆ ಪ್ರಕರಣ ದಾಖಲಾಗಿತ್ತು. ಶುಕ್ರವಾರ ಮಂಜುನಾಥ್ ವಿಜಿಗೆ ದೂರವಾಣಿ ಕರೆ ಮಾಡಿ ನ್ಯಾಯಾಲಯಕ್ಕೆ ಸಾಕ್ಷಿಯಾಗಿ ಹಾಜರಾಗದಂತೆ ಎಚ್ಚರಿಕೆ ನೀಡಿದ್ದರು. ವಿಜಿ ನಿರಾಕರಿಸಿದಾಗ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಮಂಜುನಾಥ್ ತನ್ನ ಸಂಗಡಿಗರೊಂದಿಗೆ ವಿಜಿಯ ಮನೆಗೆ ತೆರಳಿ ಎಚ್ಚರಿಕೆ ನೀಡಿದ್ದಾನೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದು ಗಲಾಟೆಯಾಗಿದೆ. ಗಲಾಟೆಯಲ್ಲಿ ಗ್ಯಾಂಗ್ ವಿಜಿ ಮೇಲೆ ಹಲ್ಲೆ ನಡೆಸಿ ಬೆನ್ನಟ್ಟಿದೆ. ಶಶಿಕುಮಾರ್ ತನ್ನ ಸ್ನೇಹಿತ ವಿಜಿಯ ಸಹಾಯಕ್ಕೆ ಧಾವಿಸಿದ. ವಿಜಿ ಮತ್ತು ಶಶಿಕುಮಾರ್ ಪ್ರತಿದಾಳಿ ನಡೆಸಿ ಮಂಜುನಾಥ್ ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಈ ವೇಳೆ ಮಂಜುನಾಥ್ ಜೊತೆಗಿದ್ದವರು ಪರಾರಿಯಾಗಿದ್ದಾರೆ.

ಸಾಂದರ್ಭಿಕ ಚಿತ್ರ
ಬೆಂಗಳೂರು: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ, ಲಾರಿ ಚಾಲಕ ಹತ್ಯೆ!

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಮಂಜುನಾಥನನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಂತ್ರಸ್ತೆ ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com