ವಾಟ್ಸಾಪ್ ನಲ್ಲಿ ಲೋಕಸಭಾ ಚುನಾವಣೆ ವೇಳಾಪಟ್ಟಿಯ ನಕಲಿ ಸಂದೇಶ: ಚುನಾವಣಾ ಆಯೋಗ ಹೇಳಿದ್ದು ಹೀಗೆ...

ಮುಂಬರುವ ಲೋಕಸಭಾ ಚುನಾವಣೆಯ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಾಟ್ಸಾಪ್ ನಲ್ಲಿ ನಕಲಿ ಸಂದೇಶ ಹರಿದಾಡುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಾಟ್ಸಾಪ್ ನಲ್ಲಿ ನಕಲಿ ಸಂದೇಶ ಹರಿದಾಡುತ್ತಿದೆ. ಮಾರ್ಚ್ 2 ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ಮಾರ್ಚ್ 28 ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 19 ರಂದು ಮತದಾನ ನಡೆಯಲಿದೆ. ಮೇ 22 ರಂದು ಮತ ಎಣಿಕೆ ನಡೆಯಲಿದೆ ಎಂಬ ನಕಲಿ ಸಂದೇಶ ವ್ಯಾಪಕವಾಗಿ ಪ್ರಸಾರವಾಗುತ್ತಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹೇಳಿಕೆ ನೀಡಿರುವ ರಾಜ್ಯ ಚುನಾವಣಾ ಆಯೋಗ, ಭಾರತ ಚುನಾವಣಾ ಆಯೋಗ ಮಾತ್ರ ಚುನಾವಣೆಯ ಕುರಿತು ಪತ್ರಿಕಾಗೋಷ್ಠಿಯನ್ನು ಬಿಡುಗಡೆ ಮಾಡುತ್ತದೆ. ಸುಳ್ಳು ಮಾಹಿತಿಗಳನ್ನು ನಂಬದೆ ಜಾಗೃತರಾಗಿ ಎಂದು ಎಚ್ಚರಿಕೆ ನೀಡಿದೆ.

ಸಾಂದರ್ಭಿಕ ಚಿತ್ರ
ಲೋಕಸಭಾ ಚುನಾವಣೆ: ಫೆಬ್ರವರಿ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಸಲೀಂ ಅಹಮ್ಮದ್

ಭಾರತ ಚುನಾವಣಾ ಆಯೋಗದಿಂದ ಅಧಿಕೃತ ಮಾಹಿತಿ ಬಿಡುಗಡೆ ಆಗುವವರೆಗೂ ಚುನಾವಣೆ ಕುರಿತು ಯಾವುದೇ ಸುಳ್ಳು ಮಾಹಿತಿ ನಂಬಬೇಡಿ ಎಂದು ಆಯೋಗ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com