ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ

ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ರಾಜಾ ವೆಂಕಟಪ್ಪ ನಾಯಕ
ರಾಜಾ ವೆಂಕಟಪ್ಪ ನಾಯಕ
Updated on

ಬೆಂಗಳೂರು: ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ನಾಲ್ಕು ಬಾರಿ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿದ್ದರು. ಕಾಂಗ್ರೆಸ್​ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ನಾಯಕ ಇತ್ತೀಚಿಗೆ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.

ಮೃತರು ಇಬ್ಬರು, ಪುತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com