ಯುವ ಸಮೃದ್ಧಿ ಸಮ್ಮೇಳನ; ಬೃಹತ್ ಉದ್ಯೋಗ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಅರಮನೆ ಮೈದಾನದಲ್ಲಿಂದು 'ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ'ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ನಂತರ ಮಾತನಾಡಿದ ಮುಖ್ಯಮಂತ್ರಿ,ನಿರುದ್ಯೋಗಿ ಯುವಕರಿಗೆ 'ಯುವ ನಿಧಿ' ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದರು.
ಸಿಎಂ ಸಿದ್ದರಾಮಯ್ಯ, ಮತ್ತಿತರರು
ಸಿಎಂ ಸಿದ್ದರಾಮಯ್ಯ, ಮತ್ತಿತರರು

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿಂದು 'ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ'ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ನಂತರ ಮಾತನಾಡಿದ ಮುಖ್ಯಮಂತ್ರಿ,ನಿರುದ್ಯೋಗಿ ಯುವಕರಿಗೆ 'ಯುವ ನಿಧಿ' ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದರು.

ಸಿಎಂ ಸಿದ್ದರಾಮಯ್ಯ, ಮತ್ತಿತರರು
ಫೆ.26ರಿಂದ ಎರಡು ದಿನಗಳ ಉದ್ಯೋಗ ಮೇಳ; 500 ಕ್ಕೂ ಹೆಚ್ಚು ಸಂಸ್ಥೆ ಭಾಗಿ, 31 ಸಾವಿರ ಮಂದಿ ನೋಂದಣಿ

ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014 ರಲ್ಲಿ ಪ್ರಧಾನಿ ನರೇಂದ್ರ ಮೋದಿ, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದರು. ಈ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು, ಇರುವ ಉದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ ಪ್ರತೀ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಾ ಶೇ.8.40ಕ್ಕೆ ಏರಿಕೆಯಾಗಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರದಿಂದ ಯುವ ನಿಧಿ ನೀಡಲಾಗುತ್ತಿದ್ದು, ಉದ್ಯೋಗವನ್ನೂ ಸೃಷ್ಟಿಸುತ್ತೇವೆ, ಉದ್ಯೋಗಕ್ಕೆ ಬೇಕಾದ ಕೌಶಲ್ಯ ತರಬೇತಿ ನೀಡುತ್ತೇವೆ. ಇದು ವಿದ್ಯಾರ್ಥಿ ಮತ್ತು ಯುವಜನರಿಗೆ ಮೇಲಿರುವ ಸರ್ಕಾರದ ಅಭಯವಾಗಿದೆ.

ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ ಜಿಟಿಡಿಸಿಗಳ ಜತೆಗೆ ಹೊಸದಾಗಿ ಇನ್ನಷ್ಟು GTDC ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹಾಗೂ ನೂರಾರು ಉದ್ಯಮಿಗಳು ಹಾಗೂ ಉದ್ಯೋಗಾಕಾಂಕ್ಷಿ ಯುವ ಜನರು ಹಾಜರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com