CBSE ಪಿಯುಸಿ ಪರೀಕ್ಷೆ: ರಾಜ್ಯದಿಂದ 20 ಆಂತರಿಕ ಅಂಕ ಸೇರ್ಪಡೆ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಮಾದರಿಯಲ್ಲಿ ಕರ್ನಾಟಕ ಸರ್ಕಾರವು 2023-24ನೇ ಶೈಕ್ಷಣಿಕ ವರ್ಷದಿಂದ ಪ್ರಾಯೋಗಿಕ ಅಲ್ಲದ ವಿಷಯಗಳಲ್ಲಿ ಪಿಯುಸಿ ಪರೀಕ್ಷೆಗಳಿಗೆ 20 ಆಂತರಿಕ ಅಂಕಗಳನ್ನು ನಿಗದಿಪಡಿಸಲು ನಿರ್ಧರಿಸಿದೆ.
CBSE ಪಿಯುಸಿ ಪರೀಕ್ಷೆ: ರಾಜ್ಯದಿಂದ 20 ಆಂತರಿಕ ಅಂಕ ಸೇರ್ಪಡೆ

ಉಡುಪಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಮಾದರಿಯಲ್ಲಿ ಕರ್ನಾಟಕ ಸರ್ಕಾರವು 2023-24ನೇ ಶೈಕ್ಷಣಿಕ ವರ್ಷದಿಂದ ಪ್ರಾಯೋಗಿಕ ಅಲ್ಲದ ವಿಷಯಗಳಲ್ಲಿ ಪಿಯುಸಿ ಪರೀಕ್ಷೆಗಳಿಗೆ 20 ಆಂತರಿಕ ಅಂಕಗಳನ್ನು ನಿಗದಿಪಡಿಸಲು ನಿರ್ಧರಿದೆ.

ಈ ವರ್ಷದಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸೂಚನೆ ಮೇರೆಗೆ ಜಿಲ್ಲಾ ಮಟ್ಟದಲ್ಲಿ ಪ್ರಾಂಶುಪಾಲರು ಹಾಗೂ ಇಬ್ಬರು ಉಪನ್ಯಾಸಕರನ್ನು ಒಳಗೊಂಡ ಸಮಿತಿಗಳನ್ನು ರಚಿಸಲು ರಾಜ್ಯ ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ವರದಿಗಳು ತಿಳಿಸಿವೆ.

ಸರ್ಕಾರದ ಈ ಸಮಿತಿಯ ಸದಸ್ಯರು ಪಿಯುಸಿ ಕಾಲೇಜುಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳು ಪ್ರಾಜೆಕ್ಟ್ ವರ್ಕ್‌ನ ಅಸೈನ್‌ಮೆಂಟ್‌ಗಳನ್ನು ಪೂರ್ಣಗೊಳಿಸಿದ್ದರ ಕುರಿತು, ಉಪನ್ಯಾಸಕರು ಆಂತರಿಕ ಅಂಕ ನಿಗದಿಪಡಿಸಿದ್ದಾರೆಯೇ? ವಿದ್ಯಾರ್ಥಿಗಳು ಆಂತರಿಕ ಮೌಲ್ಯಮಾಪನದಲ್ಲಿ ಪಡೆದ ಅಂಕಗಳನ್ನು ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್ ಸಿಸ್ಟಮ್ (ಎಸ್‌ಎಟಿಎಸ್) ನಲ್ಲಿ ಅಪ್‌ಲೋಡ್ ಮಾಡಲಾಗಿದೆಯೇ? ವಿದ್ಯಾರ್ಥಿಗಳ ಪರಿಶ್ರಮಕ್ಕೆ ನ್ಯಾಯ ಒದಗಿಸಲಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸಲಿದ್ದಾರೆ.

CBSE ಪಿಯುಸಿ ಪರೀಕ್ಷೆ: ರಾಜ್ಯದಿಂದ 20 ಆಂತರಿಕ ಅಂಕ ಸೇರ್ಪಡೆ
SSLC, 2nd PUC Exams: ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ

ಕಾಲೇಜುಗಳಲ್ಲಿ ಮೌಲ್ಯಮಾಪಕರು ತಮ್ಮ ವಿದ್ಯಾರ್ಥಿಗಳಿಗೆ ಉದಾರವಾಗಿ ಅಂಕಗಳನ್ನು ನೀಡುವ ಕುರಿತಂತೆಯೂ ಸದಸ್ಯರು ಪರಿಶೀಲನೆ ನಡೆಸಲಿದ್ದಾರೆ, ಸಮಿತಿಯ ಸದಸ್ಯರು ಯಾದೃಚ್ಛಿಕವಾಗಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲಿದ್ದು, SATS ನಲ್ಲಿ ನಮೂದಿಸಿದ ವಿದ್ಯಾರ್ಥಿಗಳ ಅಂಕಗಳನ್ನು ಪರಿಶೀಲಿಸಲಿದ್ದಾರೆಂದು ಮೂಲಗಳು ತಿಳಿಸಿವೆ.

ಉಡುಪಿ ಡಿಡಿಪಿಯು ಅಧಿಕಾರಿಗಳು ಮಾತನಾಡಿ, ಮಾದರಿ ಪ್ರಶ್ನೆಪತ್ರಿಕೆಗಳು ಬದಲಾಗಿದ್ದು, ಈ ಪ್ರಶ್ನೆಪತ್ರಿಕೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪರಿಚಯಿಸಲಾಗುತ್ತಿದೆ. ಹೀಗಾಗಿ SATS ನಲ್ಲಿ ಆಂತರಿಕ ಮೌಲ್ಯಮಾಪನ ಅಂಕಗಳನ್ನು ನಮೂದಿಸಲಾಗಿದೆಯೇ ಎಂದು ಸಮಿತಿಯ ಸದಸ್ಯರು ಪರಿಶೀಲನೆ ನಡೆಸಲಿದ್ದಾರೆಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com