ಬಟ್ಟೆ ಗಲೀಜು ಎಂಬ ಕಾರಣಕ್ಕೆ ವ್ಯಕ್ತಿಗೆ ಮೆಟ್ರೋ ಪ್ರಯಾಣ ನಿರಾಕರಣೆ: ನಮ್ಮ ಮೆಟ್ರೋ ಸಿಬ್ಬಂದಿ ವಜಾ

ಬಟ್ಟೆ ಕ್ಲೀನ್ ಇಲ್ಲವೆಂದು ವ್ಯಕ್ತಿಯನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ ಎಂದು ಎಂಡಿ ಮಹೇಶ್ವರನ್ ಹೇಳಿದ್ದಾರೆ.
ರೈತನನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿ
ರೈತನನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿ

ಬೆಂಗಳೂರು: ಬಟ್ಟೆ ಕ್ಲೀನ್ ಇಲ್ಲವೆಂದು ವ್ಯಕ್ತಿಯನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ ಎಂದು ಎಂಡಿ ಮಹೇಶ್ವರನ್ ಹೇಳಿದ್ದಾರೆ.

ಹಾಕಿಕೊಂಡಿರುವ ಬಟ್ಟೆ ಕ್ಲೀನ್‌ ಇಲ್ಲ ಎಂಬ ಕಾರಣಕ್ಕಾಗಿ ರೈತರೊಬ್ಬರನ್ನು ಮೆಟ್ರೋ ಪ್ರವೇಶಿಸಲು ಅವಕಾಶ ನೀಡದೆ ಅಪಮಾನ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ನಮ್ಮ ಮೆಟ್ರೋ ಸಿಬ್ಬಂದಿ ಮಾನವೀಯತೆಯನ್ನೇ ಮರೆತು ದೇಶದ ಬೆನ್ನೆಲುಬಾಗಿರುವ ರೈತನಿಗೆ ಅಪಮಾನ ಮಾಡಿದ್ದಾರೆ ಎಂಬ ಆಕ್ರೋಶ ಈಗ ಭುಗಿಲೆದ್ದಿದೆ. ಬೆಂಗಳೂರಿನ ರಾಜಾಜಿನಗರದ ಮೆಟ್ರೋ ಸ್ಟೇಷನ್‌ನಲ್ಲಿ ಮೆಟ್ರೋ ಸಿಬ್ಬಂದಿ ನಡೆಸಿರುವ ಈ ಅತಿರೇಕದ ವರ್ತನೆ ಸಹಪ್ರಯಾಣಿಕರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ರೈತನನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿ
ನಮ್ಮ ಮೆಟ್ರೋ ರೈಲಿನಲ್ಲಿ ಅನುಚಿತ ವರ್ತನೆ: ಇನ್ಸ್ಟಾಗ್ರಾಮ್ ಸ್ಟಾರ್'ಗೆ ದಂಡ ವಿಧಿಸಿದ ಬಿಎಂಆರ್​ಸಿಎಲ್​!

ಬಳಿಕ ಸಹಪ್ರಯಾಣಿಕರು ಸಿಬ್ಬಂದಿ ಬಗ್ಗೆ ತಲೆಕೆಡಿಸಿಕೊಳ್ಳದೆ, ವ್ಯಕ್ತಿಯನ್ನು ಮೆಟ್ರೋದಲ್ಲಿ ಕರೆದೊಯ್ದಿದ್ದಾರೆ. ಅಲ್ಲದೇ ಮೆಟ್ರೋ ಸಿಬ್ಬಂದಿ ವಿರುದ್ಧ ಸಹಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಲೆಯ ಮೇಲೆ ಬಟ್ಟೆಯ ಮೂಟೆಯೊಂದನ್ನು ಹೊತ್ತುಕೊಂಡು ಬಂದ ವ್ಯಕ್ತಿಯೊಬ್ಬರನ್ನು ಮೆಟ್ರೋ ಸುರಕ್ಷತಾ ತಪಾಸಣೆ ಸಿಬ್ಬಂದಿ ತಡೆದಿದ್ದಾರೆ. ಆಗ ಅದನ್ನು ನೋಡಿದ ಸಹಪ್ರಯಾಣಿಕರೊಬ್ಬರು ಅವರನ್ನು ಯಾಕೆ ಒಳಗೆ ಬಿಡುತ್ತಿಲ್ಲ ಎಂದು ಕೇಳಿದ್ದಾರೆ. ಆಗ ಸಿಬ್ಬಂದಿ ಅವರ ಬಟ್ಟೆ ಗಲೀಜಾಗಿದೆ, ಹೀಗಿದ್ದರೆ ಸಹ ಪ್ರಯಾಣಿಕರಿಗೆ ಅಸಹ್ಯವಾಗುತ್ತದೆ. ಆ ಕಾರಣಕ್ಕಾಗಿ ಒಳಗೆ ಬಿಡಲಾಗುತ್ತಿಲ್ಲ ಎಂದು ಹೇಳಿದರು.

ಇದಕ್ಕೆ ಸಹಪ್ರಯಾಣಿಕರು ಭದ್ರತಾ ಸಿಬ್ಬಂದಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಮೆಟ್ರೋ ಪ್ರಯಾಣಿಕರು ಯಾವ ರೀತಿಯ ಬಟ್ಟೆ ಧರಿಸಬೇಕು ಎಂದು ಎಲ್ಲಾದರೂ ನಿಯಮವಿದೆಯಾ ಎಂದು ಕೇಳಿದ ಸಹಪ್ರಯಾಣಿಕರು ರೈತರಿಗೆ ಈ ರೀತಿ ಅಪಮಾನ ಮಾಡಿದ್ದು ಸರಿಯಾ ಎಂದು ಪ್ರಶ್ನಿಸಿದ್ಗಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com