ತುಮಕೂರು: ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 7 ಮಹಿಳೆಯರ ಪೈಕಿ ಮೂರು ಮಹಿಳೆಯರ ಸಾವು

ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ತುಮಕೂರು: ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಕಳೆದ ಫೆಬ್ರವರಿ 22ರಂದು ಏಳು ಮಹಿಳೆಯರು ಗರ್ಭಕೋಶದ ಚಿಕಿತ್ಸೆ, ಸಂತಾನಹರಣ ಮತ್ತು ಸಿಸರಿಯನ್​ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಪೈಕಿ ಮೂವರು ಮಹಿಳೆಯರು ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ.

ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿದ್ದ ವೀರ್ಲಗೊಂದಿ ಗ್ರಾಮದ 30 ವರ್ಷದ ಅನಿತಾ ಸಂತಾನ ಹರಣ ಚಿಕಿತ್ಸೆ ನಡೆದ ದಿನವೇ ಸಾನ್ನಪ್ಪಿದ್ದರು. ಇನ್ನು ರಾಜವಂತಿ ಮೂಲದ ಅಂಜಲಿಗೆ ಸಿಸರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ನಂತರ ಅಂಜಲಿ ಸ್ಥಿತಿ ಗಂಭೀರವಾಗಿದ್ದರಿಂದ ಬೆಂಗಳೂರಿನ‌ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು.‌ ಆದರೆ ಚಿಲಿತ್ಸೆ ಫಲಕಾರಿಯಾಗದೆ ಅಂಜಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫೆಬ್ರವರಿ 24ರಂದು ಮೃತಪಟ್ಟಿದ್ದರು.

ಸಂಗ್ರಹ ಚಿತ್ರ
ಧಾರವಾಡ: ಅಪರಿಚಿತರಿಂದ ಮಹಿಳೆ, ಇಬ್ಬರು ಮಕ್ಕಳು ಕೊಲೆ ಶಂಕೆ!

ಇನ್ನು ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮಗೆ ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರ ಚಿಕಿತ್ಸೆ ಬಳಿಕ ನರಸಮ್ಮ‌ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು.‌ ಆದರೆ ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 25ರಂದು ನರಸಮ್ಮ ಮೃತಪಟ್ಟಿದ್ದಾರೆ. ಇನ್ನು ಶಸ್ತ್ರಚಿಕಿತ್ಸೆಗೆ ಒಳಗಾಗಿ ಸಾವನ್ನಪ್ಪಿದ್ದ ಮಹಿಳೆಯರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತ ಅಂಜಲಿ ಭಾವಚಿತ್ರ ಹಿಡಿದು ಕುಟುಂಬಸ್ಥರು ಪಾವಗಡ- ಬಳ್ಳಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಅಲ್ಲದೆ ಈ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com