ರಾಜ್ಯಸಭೆ ಚುನಾವಣೆ ಮತದಾನಕ್ಕೆ ಕ್ಷಣಗಣನೆ: ಅಡ್ಡ ಮತದಾನದ ಭೀತಿ, ಶಾಸಕರಿಗೆ ಸಿಎಂ-ಡಿಸಿಎಂ ಕಿವಿಮಾತು

ರಾಜ್ಯಸಭೆ ಚುನಾವಣೆ ಅಖಾಡಕ್ಕೆ ವೇದಿಕೆ ಸಂಪೂರ್ಣ ಸಜ್ಜಾಗಿದ್ದು, ಇನ್ನು ಕೆಲವೇ ಗಂಟೆಗಳಲ್ಲಿ ಮತದಾನ ಆರಂಭಗೊಳ್ಳಲಿದೆ. ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜ್ಯಸಭೆ ಚುನಾವಣೆಗೆ ತಂತ್ರ ಪ್ರತಿ ತಂತ್ರ ಭರದಿಂದ ಸಾಗಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯಸಭೆ ಚುನಾವಣೆ ಅಖಾಡಕ್ಕೆ ವೇದಿಕೆ ಸಂಪೂರ್ಣ ಸಜ್ಜಾಗಿದ್ದು, ಇನ್ನು ಕೆಲವೇ ಗಂಟೆಗಳಲ್ಲಿ ಮತದಾನ ಆರಂಭಗೊಳ್ಳಲಿದೆ. ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜ್ಯಸಭೆ ಚುನಾವಣೆಗೆ ತಂತ್ರ ಪ್ರತಿ ತಂತ್ರ ಭರದಿಂದ ಸಾಗಿವೆ.

ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ತೀವ್ರ ಕುತೂಹಲ ಮೂಡಿಸಿದೆ. ಅಡ್ಡ ಮತದಾನದ ಆತಂಕ ಪಕ್ಷಗಳಿಗೆ ಎದುರಾಗಿದ್ದು, ಈ ಅಡ್ಡ ಮತದಾನದಿಂದ ತಮ್ಮ ಶಾಸಕರನ್ನು ಕಾಪಾಡಿಕೊಳ್ಳುವ ಮುಂಜಾಗ್ರತೆ ಕ್ರಮವಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪಂಚತಾರಾ ಹೋಟೆಲ್ ವೊಂದಕ್ಕೆ ಸ್ಥಳಾಂತರಿಸಿದೆ.

ಹೊಟೇಲ್​​ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮತದಾನದ ಬಗ್ಗೆ ಸಿಎಂ, ಡಿಸಿಎಂ ಶಾಸಕರಿಗೆ ಕಿವಿಮಾತು ಹೇಳಿದರು.

ಸಂಗ್ರಹ ಚಿತ್ರ
ರಾಜ್ಯಸಭಾ ಚುನಾವಣೆ: ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಯಾವ ರೀತಿ ಮತ ಹಾಕಬೇಕು. ಮೂವರು ಕೈ ಅಭ್ಯರ್ಥಿಗಳ ಪೈಕಿ ಯಾರು ಯಾರಿಗೆ ಮತ ಹಾಕಬೇಕು ಎಂಬುದರ ಬಗ್ಗೆ ತಿಳಿಸಲಾಯಿತು. ಮತ ಅಸಿಂಧುವಾಗದಂತೆ ಎಚ್ಚರಿಕೆ ವಹಿಸುವಂತೆಯೂ ಸೂಚನೆ ನೀಡಲಾಯಿತು‌.

ಕಾಂಗ್ರೆಸ್ ಶಾಸಕರಲ್ಲಿ ಹಲವರು ಮೊದಲ‌ ಬಾರಿಗೆ ಶಾಸಕರಾಗಿದ್ದು, ಅವರಿಗೆ ರಾಜ್ಯಸಭೆ ಚುನಾವಣೆಯ ಪ್ರಕ್ರಿಯೆ, ಮತದಾನ ವಿಧಾನದ ಬಗ್ಗೆ ತಿಳಿ ಹೇಳಲಾಯಿತು. ಯಾವುದೇ ಗೊಂದಲ ಇಲ್ಲದೇ ಮತದಾನ‌ ಮಾಡುವಂತೆ ಎಚ್ಚರಿಕೆ ನೀಡಲಾಯಿತು.

ಇದೇ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಹೋಟೆಲ್​​ನಲ್ಲಿ ಕಾಂಗ್ರೆಸ್ ಶಾಸಕರಿಗೆ ರಾಜ್ಯಸಭೆ ಚುನಾವಣೆ ಮತದಾನದ ತರಬೇತಿ ಹಾಗೂ ಅಣಕು ಮತದಾನ ಮಾಡಿಸಲಾಯಿತು. ಅಣಕು ಮತದಾನ ನಡೆಸಿ, ಮಂಗಳವಾರ ಹೋಟೆಲ್​​ನಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಿ ನಮ್ಮ ಶಾಸಕರು ಮತದಾನ ಮಾಡಲಿದ್ದಾರೆ ಎಂದು ತಿಳಿಸಿದರು.

ಸಂಗ್ರಹ ಚಿತ್ರ
ರಾಜ್ಯಸಭಾ ಚುನಾವಣೆಯಲ್ಲಿ ನಂಬರ್‌ ಗೇಮ್‌: ಪಕ್ಷೇತರ ಶಾಸಕರ ಮನವೊಲಿಕೆಗೆ ಜೆಡಿಎಸ್ ಕಸರತ್ತು; ರೆಡ್ಡಿ ನಿಷ್ಠೆ ಯಾರ ಕಡೆಗೆ?

ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ಬೆಳಗ್ಗೆ 10 ಗಂಟೆ ಯಿಂದ ಸಂಜೆ 4 ಗಂಟೆವರೆಗೂ ಮತದಾನ ನಡೆಯಲಿದೆ.

ಒಟ್ಟು 4 ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 223 ಶಾಸಕರು ಮತ ಚಲಾಯಿಸಲಿದ್ದಾರೆ. ಶಾಸಕರ ಸಂಖ್ಯಾಬಲದಂತೆ ನಾಲ್ಕು ಸ್ಥಾನದ ಪೈಕಿ ಕಾಂಗ್ರೆಸ್‌ಗೆ 3, ಬಿಜೆಪಿಗೆ 1 ಸ್ಥಾನದ ಗೆಲುವು ಸಲೀಸಾಗಲಿದೆ.

ಕಾಂಗ್ರೆಸ್‌ನಿಂದ ಅಜಯ್ ಮಕೇನ್, ಜಿ.ಸಿ ಚಂದ್ರಶೇಖರ್, ಡಾ. ಸೈಯದ್ ನಾಸೀರ್ ಹುಸೇನ್ ಕಣದಲ್ಲಿದ್ದರೆ, ಬಿಜೆಪಿಯಿಂದ ನಾರಾಯಣಸಾ ಭಾಂಡಗೆ ಸ್ಪರ್ಧೆಗಿಳಿದಿದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com