ಬೀದರ್: ಟ್ರಕ್-ಟಾಟಾ ಏಸ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ನಾಲ್ವರು ಸಾವು; ಐದು ಮಂದಿಗೆ ಗಂಭೀರ ಗಾಯ

ಟ್ರಕ್ ಹಾಗೂ ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೀದರ್: ಟ್ರಕ್ ಹಾಗೂ ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ.

ಘಟನೆಯಲ್ಲಿ ಐದು ಜನರಿಗೆ ಗಾಯಗಳಾಗಿದ್ದು ಬೀದರ್ ನ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತಪಟ್ಟಿರುವ ಎಲ್ಲರೂ ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ದುರಂತ ಸಂಭವಿಸಿದೆ

ಟಾಟಾ ಎಸ್ ವಾಹನದಲ್ಲಿ ಒಟ್ಟು 14 ಜನ ಉಗ್ಗಿರ್ ನಿಂದಾ ಹೈದ್ರಾಬಾದ್ ಹೋಗುತ್ತಿದ್ದರು. 6 ಜನ ಮಹಿಳೆಯರು 5 ಜನ ಪುರುಷರು 3 ಮಕ್ಕಳು ಪ್ರಯಾಣಿಸುತ್ತಿದ್ದರು.

ಸಾಂದರ್ಭಿಕ ಚಿತ್ರ
ದಾವಣಗೆರೆಯಲ್ಲಿ ಭೀಕರ ಅಪಘಾತ: ಟೈರ್ ಸ್ಫೋಟಗೊಂಡು ಬೋಲೆರೋ ವಾಹನ ಪಲ್ಟಿ, ಮೂವರ ದುರ್ಮರಣ

ಈ ವೇಳೆ ಟ್ರಕ್-ಟಾಟಾ ಏಸ್ ನಡುವೆ ಡಿಕ್ಕಿಯಾಗಿದ್ದು ದಸ್ತಗಿರ್ ದಾವಲಸಾಬ್ (36) ರಸೀದಾ ಶೇಕ್ (41) ಟಾಟಾ ಎಸಿ ಚಾಲಕ ವಲಿ (31) ಅಮಾಮ್ ಶೇಕ್ (51) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ದನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com