ತನಿಖೆಯಲ್ಲಿ ಪಾಕ್ ಪರ ಘೋಷಣೆ ಸಾಬೀತಾದರೆ ಕ್ರಮ, ದೇಶ ದ್ರೋಹಿಗಳ ಮಟ್ಟ ಹಾಕಬೇಕಿದೆ: ಸಿಎಂ ಸಿದ್ದರಾಮಯ್ಯ

ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಯೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ. ಅದಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳನ್ನು ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇವೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ನಿನ್ನೆ ಮಂಗಳವಾರ ನೂತನ ರಾಜ್ಯಸಭಾ ಸದಸ್ಯ ಡಾ ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರಗೊಂಡಿದ್ದು ಇಂದು ಬುಧವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ತೀವ್ರ ಗದ್ದಲ-ಕೋಲಾಹಲ ಏರ್ಪಟ್ಟಿದೆ.

ಈ ವಿಚಾರವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ವಿಡಿಯೊವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ತನಿಖೆಗೆ ಕಳುಹಿಸಲಾಗಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ದೇಶ ದ್ರೋಹಿಗಳನ್ನು ಮಟ್ಟಹಾಕಬೇಕಿದೆ ಎಂದು ಹೇಳಿದ್ದಾರೆ.


ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಯೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ. ಅದಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳನ್ನು ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇವೆ. ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಘಟನೆ ಸಂಬಂಧ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಕೆಲವರು ‘ನಾಸಿರ್ ಸಾಬ್’ ಎಂಬ ಘೋಷಣೆ ಕೂಗಲಾಗಿದೆ ಎಂದರೆ, ಇನ್ನು ಕೆಲವರು ‘ಪಾಕಿಸ್ತಾನ’ ಪರ ಘೋಷಣೆ ಎನ್ನುತ್ತಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಸಹ ಬಂದಿದೆ. ಘಟನೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಇಂದು ಬೆಳಗ್ಗೆ ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಇದು ಕಾಲ್ಪನಿಕ ಘಟನೆಯಾಗಿದೆ ಎಂದಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳಿಗೆ ಮುಖಭಂಗವಾಗಿದೆ. ಘೋಷಣೆ ಕೂಗಿರುವ ಆಡಿಯೋದಲ್ಲಿ ಸೈಯದ್ ಸಾಬ್, ನಾಸಿರ್ ಹುಸೇನ್ ಜಿಂದಾಬಾದ್ ಅಂತ ಹೇಳಿದ್ದಾರೆ. ನಾವು ಜವಬ್ದಾರಿಯುತವಾಗಿಯೇ ಪರಿಶೀಲನೆ ಮಾಡಲು ಹೇಳಿದ್ದೆವು. ಪಾಕಿಸ್ತಾನದ ಪರವಾಗಿ ಯಾವುದೇ ಘೋಷಣೆ ಕೂಗಿಲ್ಲ. ವಿಡಿಯೋ ತುಣುಕುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೂ ಕಳುಹಿಸಿಕೊಡಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com