ಶುಚಿ ಯೋಜನೆಗೆ ಮರುಚಾಲನೆ; ಸರ್ಕಾರದಿಂದ 19 ಲಕ್ಷ ಹೆಣ್ಣುಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ‌ ಪ್ಯಾಡ್ ವಿತರಣೆ

ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ರಾಜ್ಯ ಸರ್ಕಾರ ಬುಧವಾರ ಮರುಚಾಲನೆ ನೀಡಿದೆ.
ಶುಚಿ ಯೋಜನೆಗೆ ಮರುಚಾಲನೆ
ಶುಚಿ ಯೋಜನೆಗೆ ಮರುಚಾಲನೆ

ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ರಾಜ್ಯ ಸರ್ಕಾರ ಬುಧವಾರ ಮರುಚಾಲನೆ ನೀಡಿದೆ. 10 ರಿಂದ 18 ವರ್ಷದ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ನ್ಯಾಪ್‌ಕಿನ್ ಉಚಿತವಾಗಿ ನೀಡುವ ಈ ಮಹತ್ವದ ಯೋಜನೆಗೆ ಬೆಂಗಳೂರಿನಲ್ಲಿ ಇಂದು ಚಾಲನೆ ನೀಡಲಾಯಿತು.

ಇಂದು ಜ್ಞಾನಜ್ಯೋತಿ ಸಭಾಂಗಣದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಜ್ಯೋತಿ ಬೆಳಗಿಸಿ, ಯೋಜನೆಗೆ ಮರುಚಾಲನೆ ನೀಡುತ್ತಿರುವುದಕ್ಕೆ ಹೆಣ್ಣುಮಕ್ಕಳು ಸಂತಸ ವ್ಯಕ್ತಪಡಿಸಿದರು.

ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಕಾಲೇಜುಗಳಲ್ಲಿ ಸುಮಾರು 19 ಲಕ್ಷ ಹೆಣ್ಣುಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್ ಗಳ ವಿತರಣೆ ಇಂದಿನಿಂದ ಆರಂಭಿಸಲಾಗಿದೆ. ಆರೋಗ್ಯ ಇಲಾಖೆ ನೇರವಾಗಿ ಶಾಲೆಗಳಿಗೆ ಸ್ಯಾನಿಟರಿ ಪ್ಯಾಡ್ ಗಳನ್ನ ತಲುಪಿಸಲಿದ್ದು, ಶಾಲೆಯ ಮುಖ್ಯಸ್ಥರು ಹೆಣ್ಣುಮಕ್ಕಳಿಗೆ ಕಿಟ್ ಗಳನ್ನ ವಿತರಣೆ ಮಾಡಲಿದ್ದಾರೆ. ಒಂದು ಪ್ಯಾಕ್ ನಲ್ಲಿ 10 ಸ್ಯಾನಿಟರಿ ನ್ಯಾಪ್‌ಕಿನ್ ಗಳಿದ್ದು, ಒಂದು ವರ್ಷಕ್ಕೆ ಸಾಕಾಗುವಷ್ಟು ಸ್ಯಾನಿಟರಿ ನ್ಯಾಪ್‌ಕಿನ್ ಗಳಿರುವ ಕಿಟ್ ಗಳನ್ನ ಒಟ್ಟಿಗೆ ವಿದ್ಯಾರ್ಥಿನಿಯರಿಗೆ ನೀಡಲಾಗುವುದು.

ಶುಚಿ ಯೋಜನೆಗೆ ಮರುಚಾಲನೆ
ರಾಜ್ಯದ ಶಾಲಾ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: `ಶುಚಿ ಯೋಜನೆ’ ಸೆಪ್ಟೆಂಬರ್‌ನಲ್ಲಿ ಪುನರಾರಂಭ

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಣ್ಣುಮಕ್ಕಳ ಆರೋಗ್ಯ ದೃಷ್ಟಿಯಿಂದ ಶುಚಿ ಯೋಜನೆ ಮಹತ್ವದ್ದಾಗಿದೆ ಎಂದರು. ಈ ಹಿಂದೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿಯೇ ಈ ಯೋಜನೆ ಪ್ರಾರಂಭಿಸಲಾಗಿತ್ತು. ಆದರೆ, ನಂತರದ ಸರ್ಕಾರ ಇಂಥಹ ಮಹತ್ವದ ಯೋಜನೆ ಏಕೆ ಸ್ಥಗಿತಗೊಳಿಸಿತು ಅಂತ ಗೊತ್ತಿಲ್ಲ. ನಮ್ಮ ಕಾಂಗ್ರೆಸ್ ಸರ್ಕಾರದಲ್ಲಿ ನಾನು ಆರೋಗ್ಯ ಸಚಿವನಾದ ಬಳಿಕ ಯೋಜನೆಗೆ ಮರುಚಾಲನೆ ನೀಡುವುದಾಗಿ ಘೋಷಿಸಿದ್ದೆ ಎಂದರು.

ಮಹಿಳೆಯರ ಪರವಾಗಿ ಕಾಂಗ್ರೆಸ್ ಸರ್ಕಾರ ಶಕ್ತಿ, ಗೃಹ ಲಕ್ಷ್ಮೀ ಯೋಜನೆಗಳನ್ನ ಜಾರಿಗೆ ತಂದಿರುವಾಗ ಹೆಣ್ಣುಮಕ್ಕಳಿಗೆ ಆರೋಗ್ಯ ದೃಷ್ಠಿಯಿಂದ ಆರಂಭವಾಗಿದ್ದ ಶುಚಿ ಯೋಜನೆ ಕಡೆಗಣಿಸಲು ಸಾಧ್ಯವಿಲ್ಲ. 47 ಕೋಟಿ ರೂ. ವೆಚ್ಚದಲ್ಲಿ 19 ಲಕ್ಷ ಶಾಲಾ ಕಾಲೇಜು ಹೆಣ್ಣುಮಕ್ಕಳಿಗೆ ವರ್ಷಕ್ಕಾಗುವಷ್ಟು ಸ್ಯಾನಿಟರಿ ನ್ಯಾಪ್‌ಕಿನ್ ಗಳನ್ನು ಉಚಿತವಾಗಿ ನೀಡುತ್ತಿದ್ದೇವೆ. ಎಷ್ಟೋ ಬಡ ಕುಟುಂಬದಲ್ಲಿರುವ ಹೆಣ್ಣುಮಕ್ಕಳಿಗೆ ಇದನ್ನ ಖರೀದಿಸಲು ಸಾಧ್ಯವಾಗುತ್ತಿರಲಿಲ್ಲ. ಈಗ ಶುಚಿ ಯೋಜನೆಯಿಂದ ಹೆಣ್ಣುಮಕ್ಕಳಲ್ಲಿ‌ ಮಂದಹಾಸ ಮೂಡಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com