ಮೆಟ್ರೋದಲ್ಲಿ ರೈತನಿಗೆ ಪ್ರವೇಶ ನಿರಾಕರಣೆ: ಸರ್ಕಾರ, ಬಿಎಂಆರ್ ಸಿಎಲ್ ಗೆ NHRC ನೋಟಿಸ್

ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(NHRC) ರಾಜ್ಯ ಸರ್ಕಾರ ಮತ್ತು ಬಿಎಮ್​ಆರ್​ಸಿಎಲ್​ಗೆ ನೋಟಿಸ್ ಜಾರಿ ಮಾಡಿದೆ.
ರೈತನನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿ
ರೈತನನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿ

ಬೆಂಗಳೂರು: ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಬಟ್ಟೆ ಗಲೀಜು ಎಂಬ ಕಾರಣಕ್ಕೆ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(NHRC) ರಾಜ್ಯ ಸರ್ಕಾರ ಮತ್ತು ಬಿಎಮ್​ಆರ್​ಸಿಎಲ್​ಗೆ ನೋಟಿಸ್ ಜಾರಿ ಮಾಡಿದೆ.

ಕಳೆದ ಸೋಮವಾರ ಹಾಕಿಕೊಂಡಿರುವ ಬಟ್ಟೆ ಕ್ಲೀನ್‌ ಇಲ್ಲ ಎಂಬ ಕಾರಣಕ್ಕಾಗಿ ರೈತರೊಬ್ಬರಿಗೆ ಮೆಟ್ರೋ ಪ್ರವೇಶಿಸಲು ಅವಕಾಶ ನೀಡದೆ ಅಪಮಾನ ಮಾಡಿದ ಘಟನೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಈ ಸಂಬಂಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿರುವ ಎನ್ಎಚ್ ಆರ್ ಸಿ, ವ್ಯಕ್ತಿಯ ಬಟ್ಟೆಯ ಆಧಾರದ ಮೇಲೆ ಸಾರ್ವಜನಿಕ ಸಾರಿಗೆಯಲ್ಲಿ ಅವಕಾಶ ನಿರಾಕರಣೆ ಮಾಡುವಂತಿಲ್ಲ. ಆ ರೀತಿಯಾದರೆ, ಅದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಈ ಬಗ್ಗೆ ವರದಿ ನೀಡುವಂತೆ ಬಿಎಂಆರ್​ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿದ್ದು, ನಾಲ್ಕು ವಾರದಲ್ಲಿ ಘಟನೆ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸೂಚನೆ ನೀಡಿದೆ.

ರೈತನನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿ
ಬಟ್ಟೆ ಗಲೀಜು ಎಂಬ ಕಾರಣಕ್ಕೆ ವ್ಯಕ್ತಿಗೆ ಮೆಟ್ರೋ ಪ್ರಯಾಣ ನಿರಾಕರಣೆ: ನಮ್ಮ ಮೆಟ್ರೋ ಸಿಬ್ಬಂದಿ ವಜಾ

ಈ ಮಧ್ಯೆ, ಬಟ್ಟೆ ಕ್ಲೀನ್ ಇಲ್ಲವೆಂದು ರೈತನನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ ಎಂದು ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರನ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com