
ಬೆಂಗಳೂರು: ನಗರದ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಅಳವಡಿಕೆಗೆ ನೀಡಲಾಗಿದ್ದ ಗಡುವನ್ನು ಮತ್ತೆ 2 ವಾರಗಳ ಕಾಲ ವಿಸ್ತರಣೆ ಮಾಡಿರುವುದಾಗಿ ರಾಜ್ಯ ಸರ್ಕಾರ ಗುರುವಾರ ಹೇಳಿದೆ.
ಈ ಸಂಬಂಧ ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆಂದು ತಿಳಿಸಿದ್ದಾರೆ.
ನಿನ್ನೆಯಷ್ಟೇ ಹೇಳಿಕೆ ನೀಡಿದ ಬಿಬಿಎಂಪಿ, ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು ಸೇರಿದಂತೆ ಶೆ.60ಷ್ಟು ನಾಮಫಲಕಗಳನ್ನು ಬದಲಾವಣೆ ಮಾಡದಿದ್ದರೆ ಉದ್ದಿಮೆಗಳ ಪರವಾನಗಿಯನ್ನು ಅಮಾನತುಗೊಳಿಸಲು ಹಾಗೂ ಬೀಗ ಮುದ್ರೆ ಹಾಕಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದರು.
Advertisement