ನಕಲಿ ಆನ್‌ಲೈನ್ ಪ್ರೊಫೈಲ್‌ ಮೂಲಕ ಮಹಿಳೆಯರಿಗೆ ವಂಚನೆ: ಆರೋಪಿ ಬಂಧನ

ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಗಳಲ್ಲಿ ನಕಲಿ ಖಾತೆಗಳ ತೆರೆದು ವಿಧವೆಯರು ಹಾಗೂ ವಿಚ್ಛೇದಿತ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮದುವೆ ಆಗುವುದಾಗಿ ನಂಬಿಸಿ ಸಾವಿರಾರು ರುಪಾಯಿ ಪಡೆದು ವಂಚಿಸುತ್ತಿದ್ದ ಖತರ್ನಾಕ್ ವಂಚಕನನ್ನು ರೈಲ್ವೇ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಗಳಲ್ಲಿ ನಕಲಿ ಖಾತೆಗಳ ತೆರೆದು ವಿಧವೆಯರು ಹಾಗೂ ವಿಚ್ಛೇದಿತ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮದುವೆ ಆಗುವುದಾಗಿ ನಂಬಿಸಿ ಸಾವಿರಾರು ರುಪಾಯಿ ಪಡೆದು ವಂಚಿಸುತ್ತಿದ್ದ ಖತರ್ನಾಕ್ ವಂಚಕನನ್ನು ರೈಲ್ವೇ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ನರೇಶ್ ಪೂಜಾರಿ ಗೋಸ್ವಾಮಿ (45) ಬಂಧಿತ ಆರೋಪಿ. ಈತ ಕಳೆದ 20 ವರ್ಷಗಳಿಂದ ನಗರದಲ್ಲಿ ನೆಲೆಸಿದ್ದು, ಚಿಕ್ಕಪೇಟೆಯ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಯುವಕರ ಫೋಟೋಗಳನ್ನು ಬಳಸಿಕೊಂಡು ಮ್ಯಾಟ್ರಿ ಮೋನಿಯಲ್ ವೆಬ್ ಸೈಟ್ ಗಳಲ್ಲಿ ನಕಲಿ ಖಾತೆ ಸೃಷ್ಟಿಸುತ್ತಿದ್ದ ಈತ ತನ್ನನ್ನು ಕಸ್ಟಮ್ಸ್ ಅಧಿಕಾರಿ ಮತ್ತು ಸಾಫ್ಟ್‌ವೇರ್ ಇಂಜಿನಿಯರ್ ಎಂದು ಬಿಂಬಿಸಿಕೊಂಡು ವಿಧವೆಯರು ಹಾಗೂ ವಿಚ್ಛೇದಿತ ಮಹಿಳೆಯರನ್ನು ಗುರಿಯಾಗಿಸಿಕೊಂಡು ವಂಚಿಸುತ್ತಿದ್ದ. ಈ ವರೆಗೂ ಸುಮಾರು 250 ಮಹಿಳೆಯರಿಗೆ ವಂಚಿಸಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಾಂದರ್ಭಿಕ ಚಿತ್ರ
ಆನ್ ಲೈನ್ ನಲ್ಲಿ ವಂಚನೆ: ಇಬ್ಬರು ಮಹಿಳೆಯರಿಗೆ ಲಕ್ಷಾಂತರ ರೂ. ಮೋಸ!

ಇತ್ತೀಚೆಗೆ ತಮಿಳುನಾಡಿನ ಕೊಯಮತ್ತೂರು ಮೂಲಕ ಮಹಿಳೆಯನ್ನು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿದ್ದ ಈತ, ಮದುವೆ ಬಗ್ಗೆ ಮಾತನಾಡುವ ನೆಪದಲ್ಲಿ ಜ.14ರಂದು ಮಹಿಳಯ ಪೋಷಕರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದ. ಮನೆಗೆ ಕರೆತರಲು ಚಿಕ್ಕಪ್ಪನನ್ನು ಕಳುಹಿಸುವುದಾಗಿ ಹೇಳಿ ತಾನೇ ಚಿಕ್ಕಪ್ಪನ ಸೋಗಿನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಬಂದು ಮಹಿಳೆಯ ಪೋಷಕರನ್ನು ಭೇಟಿಯಾಗಿದ್ದ. ಬಳಿಕ ಪರ್ಸ್ ಮನೆಯಲ್ಲಿ ಮರೆತು ಬಂದಿರುವುದಾಗಿ ತಿಳಿಸಿ, ಸಂಬಂಧಿಕರಿಗೆ ರೈಲು ಟಿಕೆಟ್ ಮುಂಗಡ ಕಾಯ್ದಿರಿಸಬೇಕಿದೆ. ಮನೆಗೆ ಹೋದ ಬಳಿಕ ಹಣ ಕೊಡುವುದಾಗಿ ಹೇಳಿ ಆ ಮಹಿಳೆಯರ ಪೋಷಕರಿಂದ ರೂ.10 ಸಾವಿರ ಪಡೆದು ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ರೈಲ್ವೇ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬೆಂಗಳೂರಿನ ರೈಲ್ವೆ ಡಿಐಜಿಪಿ ಡಾ.ಎಸ್.ಡಿ.ಶರಣಪ್ಪ ಮಾತನಾಡಿ, ಮೊದಲೇ ಆಕ್ಟಿವೇಟ್ ಆಗಿರುವ ಸಿಮ್ ಕಾರ್ಡ್ ಬಳಸಿ ಆರೋಪಿ ರಾಜಸ್ಥಾನದ 56, ಉತ್ತರ ಪ್ರದೇಶದ 32, ದೆಹಲಿಯ 32, ಕರ್ನಾಟಕದ 17, ಮಧ್ಯಪ್ರದೇಶದ 16, ಮಹಾರಾಷ್ಟ್ರದ 13, ಗುಜರಾತ್ 11, ತಮಿಳುನಾಡು 6, ಬಿಹಾರ ಮತ್ತು ಜಾರ್ಖಾಂಡ್ 6, ಆಂಧ್ರಪ್ರದೇಶದ ಇಬ್ಬರು ಮಹಿಳೆಯರು ಸೇರಿ ಒಟ್ಟು 250 ಮಂದಿ ಮಹಿಳೆಯರಿಗೆ ಈತ ವಂಚಿಸಿದ್ದಾನೆಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com