'ಎಣ್ಣೆ'ಯ ಮತ್ತಿನಲ್ಲಿ ಮಿಂದೆದ್ದ ಜನತೆ: ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ; 193 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ!

2023ರ ಕೊನೆಯ ದಿನವಾದ ಭಾನುವಾರದಿಂದು 193 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಈ ಮೂಲಕ ಒಂದೇ ದಿನ ಭರ್ಜರಿ ಲಿಕ್ಕರ್ ಸೇಲ್ ಆಗಿದೆ. ಡಿಸೆಂಬರ್ ತಿಂಗಳಲ್ಲಿ ಇಂಡಿಯನ್ ಮೇಡ್ ಲಿಕ್ಕರ್ 3,07,953 ಬಾಕ್ಸ್‌, ಬಿಯರ್ 1,95,005 ಬಾಕ್ಸ್ ಮಾರಾಟವಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಹೊಸ ವರ್ಷದ ಆಗಮನದ ಜೊತೆ ಮದ್ಯದ ಕಿಕ್​ ಕೂಡ ಜೋರಾಗಿಯೇ ಇದೆ. ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ಹಣ ಹರಿದು ಬಂದಿದೆ.

2023ರ ಕೊನೆಯ ದಿನವಾದ ಭಾನುವಾರದಿಂದು 193 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಈ ಮೂಲಕ ಒಂದೇ ದಿನ ಭರ್ಜರಿ ಲಿಕ್ಕರ್ ಸೇಲ್ ಆಗಿದೆ. ಡಿಸೆಂಬರ್ ತಿಂಗಳಲ್ಲಿ ಇಂಡಿಯನ್ ಮೇಡ್ ಲಿಕ್ಕರ್ 3,07,953 ಬಾಕ್ಸ್‌, ಬಿಯರ್ 1,95,005 ಬಾಕ್ಸ್ ಮಾರಾಟವಾಗಿದೆ. ಮದ್ಯದ ದರ ಹೆಚ್ಚಳವಾದರೂ ಚಿಂತೆಯಿಲ್ಲ ಎಂದು ಮದ್ಯ ಪ್ರಿಯರು ಹೊಸ ವರ್ಷಾಚರಣೆಗೆ ಮದ್ಯದ ಕಿಕ್ ಏರಿಸಿಕೊಂಡಿದ್ದಾರೆ.

ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ 2,611 ಕೋಟಿ ಆದಾಯ ಬಂದಿತ್ತು. ಈ ವರ್ಷ ಡಿಸೆಂಬರ್ ತಿಂಗಳಲ್ಲಿ 3 ಸಾವಿರ ಕೋಟಿ ಆದಾಯ ಸಂಗ್ರಹವಾಗಿದೆ. ಒಟ್ಟಿನಲ್ಲಿ ಎರಡು ವರ್ಷಕ್ಕೆ ಹೋಲಿಸಿದರೆ ಈ ವರ್ಷದಲ್ಲಿ ಮದ್ಯ ಮಾರಾಟದಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚು ಆದಾಯ ಹರಿದುಬಂದಿದೆ. ನಗರ ಹಾಗೂ ಗ್ರಾಮೀಣ ಭಾಗದ ಮೂಲೆ ಮೂಲೆಯಲ್ಲಿಯೂ ಜನರು ಮದ್ಯದ ನಶೆಯ ಮೂಲಕ ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ.

ರಾಜ್ಯದ ಜನರು ಬಹಳ ಸಂಭ್ರಮದಿಂದ ಹೊಸ ವರ್ಷವನ್ನು ವೆಲ್ ಕಮ್ ಮಾಡಿದ್ದಾರೆ. ಬೆಂಗಳೂರಿನಲ್ಲಂತೂ ‘ಎಣ್ಣೆಯ ಮತ್ತೇ ಗಮ್ಮತ್ತು’ ಎಂಬಂತೆ ನಾರಿಯರು, ಯುವಕರು ಎಣ್ಣೆಯಲ್ಲಿ ಮಿಂದೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com