ಯುವತಿ ಆತ್ಮಹತ್ಯೆ (ಸಾಂದರ್ಭಿಕ ಚಿತ್ರ)
ರಾಜ್ಯ
ವರ್ಷದ ಮೊದಲ ದಿನವೇ ಯುವತಿ ಆತ್ಮಹತ್ಯೆ; ಬೆಂಗಳೂರಿನಲ್ಲಿ ಘಟನೆ
ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ನಡೆದ ಎಂಜಿ ರಸ್ತೆಯ ಕೂಗಳತೆ ದೂರದಲ್ಲೇ ವರ್ಷದ ಮೊದಲ ದಿನವೇ ಯುವತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ನಡೆದ ಎಂಜಿ ರಸ್ತೆಯ ಕೂಗಳತೆ ದೂರದಲ್ಲೇ ವರ್ಷದ ಮೊದಲ ದಿನವೇ ಯುವತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ಸುಧಾಮನಗರದಲ್ಲಿ ಬಿಬಿಎ ವಿದ್ಯಾರ್ಥಿನಿ 21 ವರ್ಷ ವರ್ಷಿಣಿ ಎಂಬುವವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿದ್ದ ಯುವತಿ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆಕೆ ಜೀವನದಲ್ಲಿ ನೊಂದು ಈ ಕೃತ್ಯಕ್ಕೆ ಮುಂದಾಗಿದ್ದಳು ಎಂದು ಹೇಳಲಾಗಿದೆ. ಆಕೆಯ ಸಾವಿಗೆ ನಿಜವಾದ ಕಾರಣ ತಿಳಿದುಬಂದಿಲ್ಲ.
ವಿಷಯ ತಿಳಿಯುತ್ತಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಕೆಯ ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದೆಯಾ ಎನ್ನುವುದು ತಿಳಿದುಬಂದಿಲ್ಲ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ