ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆ: ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಿಸಿ; ಸಿಎಂಗೆ ಉಡುಪಿ ಬಿಜೆಪಿ ಶಾಸಕ ಪತ್ರ!

ಅಯೋಧ್ಯೆಯಲ್ಲಿ ರಾಮಮಂದಿರ ಶಂಕುಸ್ಥಾಪನೆ ಹಿನ್ನೆಲೆಯಲ್ಲಿ ಜನವರಿ 22ರಂದು ಸಾರ್ವಜನಿಕ ರಜೆ ಘೋಷಿಸುವಂತೆ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಅಯೋಧ್ಯೆ ರಾಮಮಂದಿರ
ಅಯೋಧ್ಯೆ ರಾಮಮಂದಿರ
Updated on

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ಶಂಕುಸ್ಥಾಪನೆ ಹಿನ್ನೆಲೆಯಲ್ಲಿ ಜನವರಿ 22ರಂದು ಸಾರ್ವಜನಿಕ ರಜೆ ಘೋಷಿಸುವಂತೆ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಸಮಸ್ತ ಹಿಂದೂಗಳ ಶ್ರದ್ಧಾ ಕೇಂದ್ರವಾಗಿ 500 ವರ್ಷಗಳ ಕನಸು ನನಸಾಗುವ ಸಮಸ್ತ ಭಾರತೀಯರ ಪಾಲಿಗೆ ಅತ್ಯಂತ ಪವಿತ್ರ ದಿನವಾಗಿ ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆಯ ಭಾವನಾತ್ಮಕ ಐತಿಹಾಸಿಕ ಕ್ಷಣವನ್ನು ಮನೆ ಮನಗಳಲ್ಲಿ ಆಚರಿಸಲು ವಿಶೇಷ ದಿನದಂದು ದೇಶದಾದ್ಯಂತ ಹಲವು ದೇವಸ್ಥಾನ, ಮಂದಿರ ಹಾಗೂ ಸಂಘ ಸಂಸ್ಥೆಗಳಲ್ಲಿ ವಿಶೇಷ ಪೂಜೆ, ಭಜನಾ ಸಂಕೀರ್ತನೆ, ಅನ್ನ ಸಂತರ್ಪಣೆಯ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ಅಚರಿಸುತ್ತಿದ್ದು, ರಾಜ್ಯ ಸರಕಾರ ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ ಪವಿತ್ರ ದಿನವನ್ನು ಸಂಭ್ರಮದಿಂದ ಆಚರಿಸಲು ರಾಜ್ಯದ ಜನತೆಗೆ ಅವಕಾಶ ಕಲ್ಪಿಸುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆ” ಎಂದು ಯಶ್ ಪಾಲ್ ಸುವರ್ಣ ಅವರು ಪತ್ರದ ಪ್ರತಿಯನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಯೂ ಆಗಿರುವ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉಡುಪಿಯ ಜನತೆಗೆ ಸಂದೇಶ ಸಾರಿದ್ದಾರೆ. ತಮ್ಮ ಮನೆ, ಅಂಗಡಿ, ಕಟ್ಟಡಗಳಿಗೆ ಅಲಂಕಾರಿಕ ದೀಪಗಳನ್ನು ಹಚ್ಚುವ ಮೂಲಕ ಈ ದಿನವನ್ನು ಆಚರಿಸುವಂತೆ ತಿಳಿಸಿದ್ದಾರೆ ಎಂದು ಶಾಸಕ ಸುವರ್ಣ ತಿಳಿಸಿದರು.

ಜನವರಿ 14 ರಂದು ಮಕರ ಸಂಕ್ರಾಂತಿಯೊಂದಿಗೆ ಹಬ್ಬಗಳು ಪ್ರಾರಂಭವಾಗಲಿವೆ. ಜನವರಿ 18 ರಂದು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಪರ್ಯಾಯ ಪೀಠಾರೋಹಣ ಮಾಡಲಿದ್ದಾರೆ. ಇದೇ ವೇಳೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಜ.22ರಂದು ಶಾಸಕ ಯಶಪಾಲ್ ಸುವರ್ಣ ಅವರು ಭಕ್ತರಿಗಾಗಿ ವಿಶೇಷ ‘ಹಾಲು ಪಾಯಸ ಸೇವೆ’ ಆಯೋಜಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com