ಸಾರ್ವಜನಿಕರ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆಗೆ ಹೊಂಚು ಹಾಕಿದ್ದ 6 ಮಂದಿ ಬಂಧನ

ರಸ್ತೆಯಲ್ಲಿ ತೆರಳುವ ಸಾರ್ವಜನಿಕರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ, ಬೆಲೆ ಬಾಳುವ ವಸ್ತುಗಳನ್ನು ದೋಚಲು ಹೊಂಚು ಹಾಕುತ್ತಿದ್ದ ಆರು ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಸ್ತೆಯಲ್ಲಿ ತೆರಳುವ ಸಾರ್ವಜನಿಕರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ, ಬೆಲೆ ಬಾಳುವ ವಸ್ತುಗಳನ್ನು ದೋಚಲು ಹೊಂಚು ಹಾಕುತ್ತಿದ್ದ ಆರು ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ನಿತಿನ್, ಯತೀಂದ್ರ, ಚಂದನ್, ಲೋಕೇಶ್, ಪ್ರಕಾಶ್ ಮತ್ತು ಮುನಿಯಪ್ಪ ಅವರನ್ನು ಡಿಸೆಂಬರ್ 30 ರಂದು ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ವೀರಣ್ಣಪಾಳ್ಯದಲ್ಲಿ ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಗಳು ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ವೀರಣ್ಣಪಾಳ್ಯ ಹಿಂದು ರುದ್ರಭೂಮಿ ಕಡೆಗೆ ಹೋಗುವ ರಸ್ತೆಯಲ್ಲಿ ಸಾರ್ವಜನಿಕ ರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಲು ಹೊಂಚು ಹಾಕುತ್ತಿದ್ದಾರೆ ಎಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.

ಮಾಹಿತಿ ಸಿಕ್ಕ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಧಾವಿಸಿ ಆರು ಮಂದಿಯನ್ನು ಬಂಧಿಸಿ ಮಾರಕಾಸ್ತ್ರಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಮೂರು ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದೀಗ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com