ಗೋಧ್ರಾ ದುರಂತ ರೀತಿ ಮತ್ತೊಂದು ಘಟಿಸಬಹುದು, ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ಭದ್ರತೆ ಒದಗಿಸಬೇಕು: ಬಿ ಕೆ ಹರಿಪ್ರಸಾದ್

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಮಧ್ಯೆ ಇಷ್ಟು ದಿನ ವಾಗ್ಯುದ್ಧ ನಡೆಯುತ್ತಿತ್ತು. ಇದೀಗ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಇಂದು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಬಿ ಕೆ ಹರಿಪ್ರಸಾದ್
ಬಿ ಕೆ ಹರಿಪ್ರಸಾದ್

ಬೆಂಗಳೂರು: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಮಧ್ಯೆ ಇಷ್ಟು ದಿನ ವಾಗ್ಯುದ್ಧ ನಡೆಯುತ್ತಿತ್ತು. ಇದೀಗ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಇಂದು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು. ಏಕೆಂದರೆ, ಗೋಧ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಅಹಿತಕರ ಘಟನೆ ಕರ್ನಾಟಕದಲ್ಲಿ ಆಗಬಹುದು, ನನಗೆ ಈ ಬಗ್ಗೆ ಮಾಹಿತಿ ಸಿಗುತ್ತಿದೆ ಎಂದು ಹೇಳಿದ್ದಾರೆ. ಈ ಹಿಂದೆ ಕರಸೇವಕರು ಅಯೋಧ್ಯೆಯಿಂದ ಹಿಂತಿರುಗುವಾಗ ಗುಜರಾತ್ ನಲ್ಲಿ ಗೋಧ್ರಾ ದುರಂತ ನಡೆದಿತ್ತು. ಈ ಬಾರಿ ಅಯೋಧ್ಯೆಗೆ ತೆರಳುವ ಭಕ್ತರಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡಬೇಕು. ಈ ಬಗ್ಗೆ ಮಾಹಿತಿ ಸಿಕ್ಕಿಯೇ ನಾನು ಹೇಳುತ್ತಿದ್ದೇನೆ ಎಂದು ಹರಿಪ್ರಸಾದ್ ಹೇಳಿದ್ದಾರೆ.

ರಾಜಕೀಯ ಕಾರ್ಯಕ್ರಮ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮವಾಗಿ ಬದಲಾಗುತ್ತಿದೆ. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ನಾವೆಲ್ಲರೂ ಹೋಗುತ್ತಿದ್ದೆವು. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು. ಶಂಕರಾಚಾರ್ಯರು ಮೂಲ ಗುರುಗಳು. ಅದೇ ರೀತಿ ಧರ್ಮ ಗುರುಗಳು ನಡೆಸಿಕೊಟ್ಟಿದ್ದರೆ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು, ಆದರೆ ರಾಮಮಂದಿರ ಉದ್ಘಾಟನೆ ಹಾಗೆ ಆಗುತ್ತಿಲ್ಲ ಎಂದು ಹೇಳಿದ್ದಾರೆ.

ಮೋದಿ ಧರ್ಮ ಯಾವುದು?: ಪ್ರಧಾನಿ ಮೋದಿಯವರ ಧರ್ಮವೇ ಇನ್ನೂ ಯಾವುದು ಅಂತ ಗೊತ್ತಾಗಿಲ್ಲ. ಅಮಿತ್ ಶಾ ಧರ್ಮವೇ ಯಾವುದೂ ಅಂತ ಗೊತ್ತಾಗಿಲ್ಲ. ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಬೇಕು. ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರೂ ಆಗಬಹುದು. ಇವು ನನ್ನ ವೈಯಕ್ತಿಕ ಹೇಳಿಕೆ, ಪಕ್ಷಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದು ಬಿ ಕೆ ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com