ಬೆಂಗಳೂರು: ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ; 2023ರಲ್ಲಿ 22.3 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲು

ಬೆಂಗಳೂರು ನಗರದಲ್ಲಿ 2023 ರಲ್ಲಿ 22,331 ಅಪರಾಧ ಪ್ರಕರಣಗಳು ದಾಖಲಾಗಿದ್ದು, 2022ಕ್ಕೆ ಹೋಲಿಸಿದರೆ ಈ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. 2022 ರಲ್ಲಿ ನಗರದಲ್ಲಿ 46,187 ಅಪರಾಧ ಪ್ರಕರಣಗಳು ದಾಖಲಾಗಿದ್ದವು.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ
Updated on

ಬೆಂಗಳೂರು: ನಗರದಲ್ಲಿ 2023 ರಲ್ಲಿ 22,331 ಅಪರಾಧ ಪ್ರಕರಣಗಳು ದಾಖಲಾಗಿದ್ದು, 2022ಕ್ಕೆ ಹೋಲಿಸಿದರೆ ಈ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. 2022 ರಲ್ಲಿ ನಗರದಲ್ಲಿ 46,187 ಅಪರಾಧ ಪ್ರಕರಣಗಳು ದಾಖಲಾಗಿದ್ದವು.

112 ಮತ್ತು ಇ-ಎಫ್‌ಐಆರ್‌ ಮೂಲಕ ಸ್ವೀಕರಿಸಿದ ಎಲ್ಲಾ ದೂರುಗಳನ್ನು ದಾಖಲಿಸಲು ನಗರದ ಎಲ್ಲಾ ಪೊಲೀಸ್ ಠಾಣೆಗಳಿಗೆ ರಾಜ್ಯ ಪೊಲೀಸ್ ಮುಖ್ಯಸ್ಥರ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪೊಲೀಸ್ ಠಾಣೆಗಳು ನಿರಾಕರಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿರುವುದೇ 2023ರಲ್ಲಿ ದಾಖಲಾದ ಅಪರಾಧ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ. 

2022ಕ್ಕೆ ಹೋಲಿಸಿದರೆ 2023ರಲ್ಲಿ ದಾಖಲಾದ ಎನ್‌ಡಿಪಿಎಸ್ ಪ್ರಕರಣಗಳಲ್ಲಿ ಏರಿಕೆಯಾಗಿದೆ. ಎನ್‌ಡಿಪಿಎಸ್ ವಿಭಾಗದ ಅಡಿಯಲ್ಲಿ 2022ರಲ್ಲಿ ನಗರದ ಪೊಲೀಸರು 92.70 ಕೋಟಿ ರೂ. ಮೌಲ್ಯದ 4,228 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

2023ರಲ್ಲಿ 103 ಕೋಟಿ ರೂ. ಮೌಲ್ಯದ 39,156 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. 99 ವಿದೇಶಿ ಪ್ರಜೆಗಳು ಸೇರಿದಂತೆ 4,399 ಡ್ರಗ್ ಪೆಡ್ಲರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ 147 ಪ್ರಕರಣಗಳು ದಾಖಲಾಗಿದ್ದು, 229 ಆರೋಪಿಗಳನ್ನು ಬಂಧಿಸಲಾಗಿದೆ. ಸಿಒಟಿಪಿಎ ಅಡಿಯಲ್ಲಿ 1,270 ಪ್ರಕರಣಗಳನ್ನು ದಾಖಲಿಸಿ 1,388 ಜನರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. 

ಅತ್ತಿಬೆಲೆ ಪಟಾಕಿ ಅಂಗಡಿ ಅಪಘಾತದ ನಂತರ ಪೊಲೀಸರು ಸ್ಫೋಟಕ ವಸ್ತುಗಳ ಕಾಯ್ದೆಯಡಿ 39 ಪ್ರಕರಣಗಳನ್ನು ದಾಖಲಿಸಿದ್ದು, 49 ಜನರನ್ನು ಬಂಧಿಸಿದ್ದಾರೆ. 2023ರಲ್ಲಿ, ಅಕ್ರಮ ಪ್ರವೇಶ ಮತ್ತು ಇತರ ನಿಯಮ ಉಲ್ಲಂಘನೆಗಳಿಗಾಗಿ ವಿದೇಶಿ ಪ್ರಜೆಗಳ ವಿರುದ್ಧ 92 ಪ್ರಕರಣಗಳನ್ನು ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com