ಬೆಳಗಾವಿ: ಜಮೀನು ವಿವಾದಕ್ಕೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; 20 ಮಂದಿ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಬಂಧಿಸಿ, ಲೈಂಗಿಕ ದೌರ್ಜನ್ಯ ಎಸಗಲಾಗಿರುವ ಆಘಾತಕಾರಿ ಘಟನೆ ನಡೆದಿದ್ದು, ಈ ಸಂಬಂಧ 20 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಳಗಾವಿ: ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಬಂಧಿಸಿ, ಲೈಂಗಿಕ ದೌರ್ಜನ್ಯ ಎಸಗಲಾಗಿರುವ ಆಘಾತಕಾರಿ ಘಟನೆ ನಡೆದಿದ್ದು, ಈ ಸಂಬಂಧ 20 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನ ಕೃಷಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಕುರಿತು ನ್ಯಾಯಾಲಯದ ಮೆಟ್ಟಿಲೇರಿರುವುದಾಗಿ ಮಹಿಳೆ ಬೈಲಹೊಂಗಲ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

'ನಾನು ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ, ಇದ್ದಕ್ಕಿದ್ದಂತೆ 25 ರಿಂದ 30 ಜನರು ನನ್ನ ಮೇಲೆ ದಾಳಿ ಮಾಡಿದರು. ಅವರು ನನ್ನ ಕೂದಲನ್ನು ಎಳೆದು, ನನ್ನ ಖಾಸಗಿ ಭಾಗಗಳನ್ನು ಮುಟ್ಟಿದರು' ಎಂದು ಮಹಿಳೆ ದೂರಿದ್ದಾರೆ.

'ಅವರು ನನ್ನನ್ನು ಬಸ್ ನಿಲ್ದಾಣದಿಂದ ಎಳೆದೊಯ್ದರು ಮತ್ತು ಪಂಚಾಯತ್ ಕಚೇರಿಯಲ್ಲಿ ನನ್ನನ್ನು ಕೂಡಿಹಾಕಿದರು. ನನ್ನ ಬಳಿಯಿದ್ದ ಹಣ ಮತ್ತು ಮೊಬೈಲ್ ಫೋನ್ ತೆಗೆದುಕೊಂಡು ಬಲವಂತವಾಗಿ ದಾಖಲೆಗಳ ಮೇಲೆ ಸಹಿ ಪಡೆದರು. ನಂತರ, ಆರೋಪಿಗಳು ಸಂಜೆಯೊಳಗೆ ನನ್ನನ್ನು ಹೋಗಲು ಬಿಟ್ಟರು' ಎಂದು ಪೊಲೀಸರಿಗೆ ತಿಳಿಸಿದ್ದಾಳೆ.

ಈ ಪ್ರಕರಣವನ್ನು ಬೆಳಗಾವಿ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಆದರೆ, ಆರೋಪಿ ಆಕೆಯ ಬಟ್ಟೆಯನ್ನೂ ಹರಿದಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com