ತಾರಕಕ್ಕೇರಿದ ಕರಸೇವಕನ ಬಂಧನ ವಿಚಾರ: ಬಿಜೆಪಿ ವಿರುದ್ಧ ಪ್ರತಿಭಟನೆಗಳಿದ ಕಾಂಗ್ರೆಸ್

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ಕೂಡ ಬಿಜೆಪಿ ವಿರುದ್ಧ ಗುರುವಾರ ಪ್ರತಿಭಟನೆಗಿಳಿದಿದೆ.
ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರು.
ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರು.

ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ಕೂಡ ಬಿಜೆಪಿ ವಿರುದ್ಧ ಗುರುವಾರ ಪ್ರತಿಭಟನೆಗಿಳಿದಿದೆ.
 
ನಗರದ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಬಿಜೆಪಿ ನಾಯಕರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

1992ರ ಬಾಬ್ರಿ ಮಸೀದಿ ಧ್ವಂಸ ನಂತರ ನಡೆದ ಗಲಭೆಯಲ್ಲಿ ಭಾಗಿಯಾದ ಆರೋಪದ ಮೇಲೆ ಕರಸೇವಕನನ್ನು ಹುಬ್ಬಳ್ಳಿಯಲ್ಲಿ ಬಂಧಿಸಲಾಗಿದೆ. ಆದರೆ, ಈ ವಿಚಾರದಲ್ಲಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ತಪ್ಪು ಮಾಹಿತಿ ಹರಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಡಿ. 29 ರಂದು ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದ ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಇನ್ಸಪೆಕ್ಟರ್ ಅಮಾನತಿಗೆ ಆಗ್ರಹಿಸಿ ಬಿಜೆಪಿ ನಾಯಕರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ನಿನ್ನೆ ರಾಜ್ಯಪಾಲರಿಗೂ ದೂರು ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com