ಪ್ರೇಯಸಿಯನ್ನು ವಿವಾಹವಾಗಲು ವಿಚ್ಛೇದನ ಕೇಳಿದ ಪತಿ; ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆ; ಬಂಧನ

ತನಗೆ ವಿಚ್ಛೇದನ ನೀಡದಿದ್ದರೆ ಆಕೆಯ ಖಾಸಗಿ ವಿಡಿಯೋ ಮತ್ತು ಫೋಟೊಗಳನ್ನು ವೈರಲ್ ಮಾಡುವುದಾಗಿ ಪತ್ನಿಗೆ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: ತನಗೆ ವಿಚ್ಛೇದನ ನೀಡದಿದ್ದರೆ ಆಕೆಯ ಖಾಸಗಿ ವಿಡಿಯೋ ಮತ್ತು ಫೋಟೊಗಳನ್ನು ವೈರಲ್ ಮಾಡುವುದಾಗಿ ಪತ್ನಿಗೆ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಆರೋಪಿಯನ್ನು ಬೆಳಗಾವಿ ನಗರದ ಕಿರಣ್ ಪಾಟೀಲ್ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಆರೋಪಿಯು ತನ್ನ ಪ್ರಿಯತಮೆಯೊಂದಿಗೆ ಮದುವೆಯಾಗಲು ತನ್ನ ಹೆಂಡತಿಯನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆತನ ಮನವೊಲಿಸಲು ಹೆಂಡತಿ ಅನೇಕ ಪ್ರಯತ್ನಗಳನ್ನು ಮಾಡಿದರೂ, ಪ್ರಯೋಜನವಾಗಿಲ್ಲ.

ಸಂತ್ರಸ್ತೆಯಿಂದ ವಿಚ್ಛೇದನ ಕೋರಿ ಆರೋಪಿ ನ್ಯಾಯಾಲಯದ ಮೆಟ್ಟಿಲೇರಿದ್ದನು. ಈ ಮಧ್ಯೆ, ಆಕೆಯ ಖಾಸಗಿ ವಿಡಿಯೋ ಮತ್ತು ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡುವುದಾಗಿ ಆಕೆಗೆ ಬ್ಲ್ಯಾಕ್ ಮೇಲ್ ಮಾಡಲು ಪ್ರಾರಂಭಿಸಿದನು.

ಸಂತ್ರಸ್ತೆ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಆತನ ಮೊಬೈಲ್‌ನಲ್ಲಿ ಸಂತ್ರಸ್ತೆಯ ಖಾಸಗಿ ವಿಡಿಯೋ ಹಾಗೂ ಫೋಟೊಗಳು ಪತ್ತೆಯಾಗಿವೆ ಎನ್ನಲಾಗಿದೆ.

ಆರೋಪಿ ಪತಿ ಪೊಲೀಸ್ ಠಾಣೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಮತ್ತು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ ರಾತ್ರಿ ಡಿಸ್ಚಾರ್ಜ್ ಆದ ಬಳಿಕ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com