ರಾಮಲಲ್ಲಾ ಮೂರ್ತಿ ಇನ್ನೂ ಅಂತಿಮವಾಗಿಲ್ಲ; ಬಿಜೆಪಿ ಸರ್ಕಾರದಿಂದ ದೇಣಿಗೆ ಪಡೆದು ದೇವಾಲಯ ನಿರ್ಮಿಸಿಲ್ಲ: ಪೇಜಾವರ ಶ್ರೀ

ಪ್ರಾಣ ಪ್ರತಿಷ್ಠೆಗೆ ಮೊದಲು ಜ.17ರಂದು ಬಾಲರಾಮನ ವಿಗ್ರಹವನ್ನು ಮೆರವಣಿಗೆಯಲ್ಲಿ ಸರಯೂ ನದಿಗೆ ತೆಗೆದುಕೊಂಡ ಹೋಗಿ ಜಲಾಭಿಷೇಕ ನಡೆಸಲಾಗುತ್ತದೆ.
ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳು
ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳು
Updated on

ಉಡುಪಿ: ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಠಾಪಿಸುವ ರಾಮಲಲ್ಲಾ ಮೂರ್ತಿಯನ್ನು ಜನವರಿ 17ರಂದು ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟಿ ಹಾಗೂ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, ಎರಡು ಕಪ್ಪು ಕಲ್ಲುಗಳು ಮತ್ತು ಒಂದು ಅಮೃತ ಶಿಲೆಯಲ್ಲಿ ರಾಮ್ ಲಲ್ಲಾ ವಿಗ್ರಹವನ್ನು ಸುಂದರವಾಗಿ ಕೆತ್ತಲಾಗಿದೆ. ಟ್ರಸ್ಟ್‌ನ ಎಲ್ಲಾ ಸದಸ್ಯರು ಮತ ಚಲಾಯಿಸಿದ್ದಾರೆ. ಪ್ರಾಣ ಪ್ರತಿಷ್ಠೆಗೆ ಮೊದಲು ಜ.17ರಂದು ಬಾಲರಾಮನ ವಿಗ್ರಹವನ್ನು ಮೆರವಣಿಗೆಯಲ್ಲಿ ಸರಯೂ ನದಿಗೆ ತೆಗೆದುಕೊಂಡ ಹೋಗಿ ಜಲಾಭಿಷೇಕ ನಡೆಸಲಾಗುತ್ತದೆ, ಈಗಾಗಲೇ ತಯಾರಾಗಿರುವ 3 ವಿಗ್ರಹಗಳಲ್ಲಿ ಅದು ಯಾವ ವಿಗ್ರಹ ಎಂಬುದು ಅಂದು ಬಹಿರಂಗ ಆಗುತ್ತದೆ ಎಂದು ಮಾಹಿತಿ ನೀಡಿದ್ದಾರೆ

ದೇವಾಲಯದ ಉದ್ಘಾಟನೆಗೆ ಆಹ್ವಾನಿತರನ್ನು ಪ್ರಾತಿನಿಧ್ಯದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ದೇವಸ್ಥಾನದಲ್ಲಿ ಸ್ಥಳಾವಕಾಶ ಕಡಿಮೆ ಇರುವುದರಿಂದ ಎಲ್ಲರೂ ಭಾಗವಹಿಸುವಂತಿಲ್ಲ. ಮೂರ್ತಿ ಪ್ರತಿಷ್ಠಾಪನೆ ನಂತರ ಎಲ್ಲ ಭಕ್ತರು ದರ್ಶನ ಪಡೆಯಬಹುದು ಎಂದು ತಿಳಿಸಿದರು.

ಬಿಜೆಪಿ ಸರ್ಕಾರದಿಂದ ದೇಣಿಗೆ ಪಡೆದು ದೇವಾಲಯ ನಿರ್ಮಿಸಿಲ್ಲ, ಭಕ್ತರಿಂದ ದೇಣಿಗೆ ಸಂಗ್ರಹಿಸಿ ಇದನ್ನು ನಿರ್ಮಿಸಲಾಗಿದೆ. ಇದು ಬಿಜೆಪಿಯ ರಾಮಮಂದಿರವಲ್ಲ, ದೇವರು ಬರೀ ದೇವಸ್ಥಾನಕ್ಕೆ ಸೀಮಿತವಾಗಿಲ್ಲ, ಎಲ್ಲರಲ್ಲಿಯೂ ನೆಲೆಸಿದ್ದಾನೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಲ್ಲಿಯೂ ದೇವರು ಇದ್ದಾನೆ ಎಂದು ಹೇಳಿದ್ದಾರೆ.

‘ಹುಬ್ಬಳ್ಳಿಯಲ್ಲಿ ಹಳೆ ಪ್ರಕರಣದಲ್ಲಿ ಕರಸೇವಕರನ್ನು ಬಂಧಿಸಿರುವುದು ಸರಿಯಲ್ಲ, ಹಿಂದೂಗಳನ್ನು ಹತ್ತಿಕ್ಕಲು ಸರ್ಕಾರ ಹವಣಿಸುತ್ತಿರುವಂತೆ ತೋರುತ್ತಿದೆ, ರಾಮಮಂದಿರ ಉದ್ಘಾಟನೆಗೆ ಸಜ್ಜಾಗಿರುವಾಗ ಇಂತಹ ಘಟನೆಗಳು ನಡೆಯಬಾರದು. ಯಾವುದೇ ಗೊಂದಲಗಳಿಗೆ ಸರ್ಕಾರ ಆಸ್ಪದ ನೀಡಬಾರದು ಎಂದು ಅವರು ಸಲಹೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com