ಡಿಕೆಶಿ ವಿರುದ್ದದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾವಣೆ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.

ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನೊಳಗೊಂಡ ಏಕ ಸದಸ್ ಪೀಠ, ಪ್ರಕರಣದ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.

ಈ ಮಧ್ಯೆ, ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಇಂದು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಯತ್ನಾಳ್ ಹಾಗೂ ಸಿಬಿಐ ರಿಟ್ ಅರ್ಜಿ  ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಅಲ್ಲದೆ ಸಿಬಿಐ ಅರ್ಜಿ ಸಂಬಂಧ ಡಿಕೆ ಶಿವಕುಮಾರ್​ಗೆ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೂಕ್ತವೆನಿಸಿದ ವಿಸ್ತೃತ ಪೀಠ ರಚಿಸಬಹುದು ಎಂದು ಏಕ ಸದಸ್ಯ ಪೀಠ ಹೇಳಿದೆ.

ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್, ಸಿಬಿಐ ಹಾಗೂ ಶಾಸಕ ಯತ್ನಾಳ್ ವಾದ ವಿರೋಧಿಸಿದರು. ಅನುಮತಿ ನೀಡಿದ ನಂತರ ಹಿಂಪಡೆಯುವಂತಿಲ್ಲವೆಂದು ಸಿಬಿಐ ವಾದ ಮಂಡಿಸಿದೆ. ಎರಡೂ ಕಡೆ ವಾದ ಆಲಿಸಿದ ಹೈಕೋರ್ಟ್, ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com