ರಾಜ್ಯದಲ್ಲಿ ಕೊರೋನಾ ಹೆಚ್ಚಳ; ಇಂದು 328 ಮಂದಿಗೆ ಪಾಸಿಟಿವ್
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶುಕ್ರವಾರ 328 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,159ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 328 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ರಾಜ್ಯದಲ್ಲಿ ಇಂದು ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಕೋವಿಡ್ ನಿಂದ 409 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7205 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 4.55 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿತರಲ್ಲಿ 1,087 ಮಂದಿ ಮನೆ ಆರೈಕೆಗೆ ಒಳಗಾದರೆ, 72 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 9 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು 163 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇನ್ನುಳಿದಂತೆ ಬಾಗಲಕೋಟೆ 4, ಬಳ್ಳಾರಿ 9, ಬೆಂಗಳೂರು ಗ್ರಾಮಾಂತರ 18, ಚಾಮರಾಜನಗರ 5, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 7, ಚಿತ್ರದುರ್ಗ 5, ದಕ್ಷಿಣ ಕನ್ನಡ 8, ದಾವಣಗೆರೆ 3, ಧಾರವಾಡ 2, ಗದಗ 1, ಹಾಸನ 12, ಹಾವೇರಿ 1, ಕಲಬುರಗಿ 4, ಕೋಲಾರ 1, ಮಂಡ್ಯ 7, ಮೈಸೂರು 26, ರಾಯಚೂರು 4, ರಾಮನಗರ 3 ಶಿವಮೊಗ್ಗ 6, ತುಮಕೂರು 15, ಉಡುಪಿ 1, ಉತ್ತರ ಕನ್ನಡ 6, ವಿಜಯನಗರದಲ್ಲಿ 7 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ