ಮಾಲ್ ಆಫ್ ಏಷ್ಯಾ ವಿರುದ್ಧ ದೂರುಗಳ ಸುರಿಮಳೆ: ಮಾಲಿನ್ಯ ಮಟ್ಟ ಪರಿಶೀಲನೆಗೆ ಕೆಎಸ್‌ಪಿಸಿಬಿ ಮುಂದು!

ಸ್ಥಳೀಯರ ದೂರು ಹಾಗೂ ಪೊಲೀಸರ ಮನವಿ ಮೇರೆಗೆ ಬಳ್ಳಾರಿ ರಸ್ತೆಯಲ್ಲಿರುವ ಫೀನಿಕ್ಸ್ ಮಾಲ್ ಆಫ್ ಏಷ್ಯಾ ಬಳ್ಳಾರಿ ರಸ್ತೆಯಲ್ಲಿರುವ ಫೀನಿಕ್ಸ್ ಮಾಲ್ ಆಫ್ ಏಷ್ಯಾ ಮೇಲ್ವಿಚಾರಣೆ ಮಾಡಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಮುಂದಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸ್ಥಳೀಯರ ದೂರು ಹಾಗೂ ಪೊಲೀಸರ ಮನವಿ ಮೇರೆಗೆ ಬಳ್ಳಾರಿ ರಸ್ತೆಯಲ್ಲಿರುವ ಫೀನಿಕ್ಸ್ ಮಾಲ್ ಆಫ್ ಏಷ್ಯಾ ಬಳ್ಳಾರಿ ರಸ್ತೆಯಲ್ಲಿರುವ ಫೀನಿಕ್ಸ್ ಮಾಲ್ ಆಫ್ ಏಷ್ಯಾ ಮೇಲ್ವಿಚಾರಣೆ ಮಾಡಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಮುಂದಾಗಿದೆ.

ಬ್ಲೋವರ್‌, ಏರ್ ಕಂಡಿಷನರ್‌ ಮತ್ತು ವಾಹನಗಳಿಂದ ಶಬ್ದ ಮಾಲಿನ್ಯವಾಗುತ್ತಿರುವ ಕುರಿತು ಸಾಕಷ್ಟು ಜನರು ಮಾಲ್ ಆಫ್ ಏಷ್ಯಾ ವಿರುದ್ಧ ದೂರುಗಳನ್ನು ಸಲ್ಲಿಸಿದ್ದರು.

ಮಾಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದು. ಇದರಿಂದ ವಾಯು ಮಾಲಿನ್ಯದ ಮಟ್ಟಗಳು ಏರುತ್ತಿದೆ ಎಂಬ ಬಗ್ಗೆ ದೂರುಗಳು ಬಂದಿವೆ ಎಂದು ಕೆಎಸ್‌ಪಿಸಿಬಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಾಲಿನ್ಯ ಪರಿಶೀಲನೆ ಬಳಿಕ ವರದಿಯನ್ನು ಹೈಕೋರ್ಟ್ ಹಾಗೂ ಪೊಲೀಸ್ ಇಲಾಖೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಮಾಲ್ ಸುತ್ತಮುತ್ತ ಹಸಿರು ಹೊದಿಕೆ ಇರುವುದು ಕಂಡು ಬಂದಿಲ್ಲ. ಅಲ್ಲದೆ, ವಸತಿ ಹಾಗೂ ವಾಣಿಜ್ಯ ಸ್ಥಳಗಳನ್ನು ಗುರ್ತಿಸಿಲ್ಲ. ಮಾಲ್ ನಿರ್ಮಾಣವಾದ ಬಳಿಕ ಸ್ಥಳದಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುವುದು ಕಂಡು ಬಂದಿದೆ ಎಂದರು.

ಮಾಲ್‌ ಆಫ್‌ ಏಷ್ಯಾದ ಬಳಿ ಸಂಚಾರ ದಟ್ಟಣೆ ಮತ್ತು ಪರಿಸರ ಮಾಲಿನ್ಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಡಿಸೆಂಬರ್‌ 31ರಿಂದ ಜನವರಿ 15ರವರೆಗೆ ಮಾಲ್‌ಗೆ ಸಾರ್ವಜನಿಕರ ಪ್ರವೇಶ ಅವಕಾಶ ಕಲ್ಪಿಸಬಾರದು ಎಂದು ಸೂಚಿಸಿ ನಗರದ ಪೊಲೀಸ್‌ ಆಯುಕ್ತರು ಹೊರಡಿಸಿರುವ ಆದೇಶ ಪ್ರಶ್ನಿಸಿ ಫೀನಿಕ್ಸ್‌ ಮಾಲ್‌ ಆಫ್ ಏಷ್ಯಾ ಹೈಕೋರ್ಟ್ ಮೆಟ್ಟಿಲೇರಿತ್ತು.

ಅರ್ಜಿ ಪರಿಶೀಲಿಸಿದ ನ್ಯಾಯಾಲಯ ಅರ್ಜಿದಾರರು ಮತ್ತು ನಗರ ಪೊಲೀಸ್‌ ಆಯುಕ್ತರು ಜಂಟಿಯಾಗಿ ಸಮಾಲೋಚಿಸಿ ನಿರ್ಣಯಕ್ಕೆ ಬರಬೇಕು ಎಂದು ಸೂಚಿಸಿ ವಿಚಾರಣೆಯನ್ನು ಜನವರಿ 5ಕ್ಕೆ ಮುಂದೂಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com