ಬಂಧಿತ ಕರವೇ ಅಧ್ಯಕ್ಷ ನಾರಾಯಣ ಗೌಡಗೆ ಜಾಮೀನು ಮಂಜೂರು

ಕನ್ನಡ ನಾಮಫಲಕಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಬಂಧನಕ್ಕೊಳಾಗಿಗರುವ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಅಧ್ಯಕ್ಷ ನಾರಾಯಣ ಗೌಡ ಅವರಿಗೆ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ....
ನಾರಾಯಣ ಗೌಡ
ನಾರಾಯಣ ಗೌಡ
Updated on

ಬೆಂಗಳೂರು: ಕನ್ನಡ ನಾಮಫಲಕಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಬಂಧನಕ್ಕೊಳಾಗಿಗರುವ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಅಧ್ಯಕ್ಷ ನಾರಾಯಣ ಗೌಡ ಅವರಿಗೆ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ನಾರಾಯಣ ಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಕಳೆದ ಮಂಗಳವಾರ ತೀರ್ಪು ಕಾಯ್ದಿರಿಸಿತ್ತು. ಇಂದು ಕರವೇ ಅಧ್ಯಕ್ಷರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಡಿಸೆಂಬರ್‌ 27ರಂದು(ಬುಧವಾರ) ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ನಡೆಸಲಾದ ಪ್ರತಿಭಟನೆಗೆ ಸಂಬಂಧಿಸಿದಂತೆ ಕರವೇ ಅಧ್ಯಕ್ಷ ನಾರಾಯಣಗೌಡ  ಸೇರಿದಂತೆ 29 ಜನರನ್ನು ಬಂಧಿಸಲಾಗಿದ್ದು, ಎಲ್ಲರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com