ಕರಸೇವಕ ಶ್ರೀಕಾಂತ್ ಪೂಜಾರಿ ಬಿಡುಗಡೆ: ಹಿಂದೂ ಕಾರ್ಯಕರ್ತರಿಂದ ಸಂಭ್ರಮ

ಬಂಧನಕ್ಕೊಳಗಾಗಿ ಒಂಬತ್ತು ದಿನಗಳ ನಂತರ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು ಹುಬ್ಬಳ್ಳಿ ನಗರದ ಜೈಲಿನಿಂದ ಬಿಡುಗಡೆ ಮಾಡಲಾಯಿತು.
ಶ್ರೀಕಾಂತ್ ಪೂಜಾರಿ ಬಿಡುಗಡೆ
ಶ್ರೀಕಾಂತ್ ಪೂಜಾರಿ ಬಿಡುಗಡೆ

ಹುಬ್ಬಳ್ಳಿ: ಬಂಧನಕ್ಕೊಳಗಾಗಿ ಒಂಬತ್ತು ದಿನಗಳ ನಂತರ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು ಹುಬ್ಬಳ್ಳಿ ನಗರದ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಈ ವೇಳೆ ಅಲ್ಲಿ ಅಪಾರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜೈಲಿನ ಹೊರಗೆ ಜಮಾಯಿಸಿ ಜಯ ಘೋಷ ಕೂಗಿದರು.

ಹಿಂದೂ ಕಾರ್ಯಕರ್ತರು ಪೂಜಾರಿ ಅವರ ಕೊರಳಿಗೆ ಹಾರ ಹಾಕಿ ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗಿದರು. ಬಂಧಿತ ಕರಸೇವಕನನ್ನು ಸ್ವಾಗತಿಸಲು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ, ಬಜರಂಗದಳ, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸದಸ್ಯರು ಮತ್ತು ಬಿಜೆಪಿ ಕಾರ್ಪೊರೇಟರ್‌ಗಳು ಜೈಲಿನ ಹೊರಗೆ ಹಾಜರಿದ್ದರು.

ಬಂಧನದಿಂದ ವಿಚಲಿತನಾಗಲ್ಲ ಜನವರಿ 19ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಹೋಗುವುದಾಗಿ ಪೂಜಾರಿ ಹೇಳಿದರು. ರಾಮಜನ್ಮಭೂಮಿ ಆಂದೋಲನದ 31 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ನ್ಯಾಯಾಲಯ ಪೂಜಾರಿಗೆ ಷರತ್ತುಬದ್ಧ ಜಾಮೀನು ನೀಡಿದೆ.

ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ ಘಟಕವು ರಾಜ್ಯಾದ್ಯಂತ ಸರಣಿ ಪ್ರತಿಭಟನೆಗಳನ್ನು ನಡೆಸಿತು. ಅಲ್ಲದೆ ಪೂಜಾರಿ ಅವರನ್ನು ತಕ್ಷಣ ಜೈಲಿನಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದರು. ಪೂಜಾರಿ ಬಂಧನವು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com